in ,

ಹಲಸಿನ ಹಣ್ಣಿನ ಮಹತ್ವ

ಹಲಸಿನಹಣ್ಣು
ಹಲಸಿನಹಣ್ಣು

ಹಲಸಿನ ಹಣ್ಣು ನೋಡಲು ದೊಡ್ಡ ಗಾತ್ರ, ಒರಟು ಮೈ, ಆದ್ರೆ ತಿನ್ನಲು ಕುಳಿತುಕೊಂಡರೆ ಅದರಷ್ಟು ರುಚಿಯಾದ ಹಣ್ಣು ಬೇರೆ ಇಲ್ಲ. ಬೇರೆ ಬೇರೆ ಜಾತಿಯ ಹಲಸಿನ ಹಣ್ಣುಗಳಿವೆ. ಒಂದೊಂದು ಬೇರೆ ಬೇರೆ ರೀತಿಯ ರುಚಿ ಹೊಂದಿದೆ. ನಾವೆಲ್ಲ ಶಾಲೆಯಿಂದ ಬಂದ ಕೂಡಲೇ ಮೊದಲು ಹಲಸಿನಹಣ್ಣು ತಿನ್ನುತ್ತಿದ್ದೇವು. ಅದೇ ನಮಗೆ ಖುಷಿ, ಹಲಸಿನ ಹಣ್ಣು ಮರದಲ್ಲಿ ಸ್ವಲ್ಪ ಅಳಿಲು ಗಾಯ ಮಾಡಿದ್ದರೆ ಸಾಕು ಬೆಳಗ್ಗೆ ಶಾಲೆಗೆ ಹೊರಡುವಾಗಲೆ ತಲೆಯಲ್ಲಿ ಇವತ್ತು ಸಂಜೆ ಬಂದು ಹಲಸಿನ ಹಣ್ಣು ಇದೆ ತಿನ್ನಲು ಅನ್ನುವ ಖುಷಿ.

ಹಲಸಿನ ಹಣ್ಣಿನ ಮಹತ್ವ

ಹಲಸು ನಿತ್ಯಹರಿದ್ವರ್ಣದ ದೊಡ್ಡ ಪ್ರಮಾಣದ ಮರ. ಇದು ಕರ್ನಾಟಕದ ದಕ್ಷಿಣ ಭಾಗದಲ್ಲಿ ಎಲ್ಲಾ ಕಡೆ, ಮಲೆನಾಡು ಮತ್ತು ಕರಾವಳಿಯ ಕಾಡುಗಳಲ್ಲಿಯೂ ಕೂಡಾ ವ್ಯಾಪಕವಾಗಿ ಬೆಳೆಯುತ್ತದೆ. ಇದು ವರ್ಷಪೂರ್ತಿ ದಟ್ಟನೆಯ ಕಡು ಹಸಿರು ಎಲೆಗಳನ್ನು ಹೊಂದಿದ್ದು,
ಬಡವರ ಹಣ್ಣು ಎಂದೇ ಖ್ಯಾತಿ ಪಡೆದಿದ್ದ ಹಲಸಿನ ಹಣ್ಣು ಉತ್ಪಾದನೆಯಲ್ಲಿ ಭಾರತ ದೇಶಕ್ಕೆ ಜಗತ್ತಿನಲ್ಲಿಯೇ ದ್ವಿತೀಯ ಸ್ಥಾನವಿದೆ. ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನವಿದೆ. ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಗಮನಾರ್ಹ ಪ್ರಮಾಣದಲ್ಲಿ ಹಲಸು ಬೆಳೆಯಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 930 ಹೆಕ್ಟೇರ್‌ ವಿಸ್ತೀರ್ಣದಲ್ಲಿ 40260 ಟನ್‌ ಬೆಳೆ ಉತ್ಪಾದಿಸಲಾಗುತ್ತಿದೆ.

ಖನಿಜಾಂಶ, ವಿಟಮಿನ್ ಗಳು ಮತ್ತು ಆಹಾರದ ನಾರಿನಾಂಶ ಹೊಂದಿರುವಂತಹ ಹಲಸಿನ ಹಣ್ಣು ನೈಸರ್ಗಿಕ ವಿರೇಚಕ ಗುಣ ಹೊಂದಿದೆ ಮತ್ತು ಇದು ಜೀರ್ಣಕ್ರಿಯೆ ವ್ಯವಸ್ಥೆಯ ಸಮಸ್ಯೆಯನ್ನು ದೂರ ಮಾಡುವುದು. ವಿಟಮಿನ್ ಎ ಒಳಗೊಂಡಿರುವ ಹಲಸಿನ ಹಣ್ಣು ಕಣ್ಣಿಗೆ ಕೂಡ ಒಳ್ಳೆಯದು. ಹಲಸಿನ ಹಣ್ಣಿನಲ್ಲಿ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬು ಇಲ್ಲದಿರುವುದು ಇದರ ಮತ್ತೊಂದು ಗುಣವಾಗಿದೆ.

ಇದರ ಹಣ್ಣಿನಿಂದ ಹಲವಾರು ಖಾದ್ಯಗಳನ್ನು ತಯಾರಿಸುತ್ತಾರೆ. ಹಣ್ಣನ್ನು ಸಂಸ್ಕರಿಸಿ ವಿದೇಶಗಳಿಗೆ ರಫ್ತು ಕೂಡಾ ಮಾಡುತ್ತಾರೆ. ಇದರ ದಾರು ಹಳದಿ ಬಣ್ಣ ಹೊಂದಿದೆ. ಒಣಗಿದಂತೆ ಕಂದು ಬಣ್ಣಕ್ಕೆ ತಿರುಗುತ್ತದೆ. ಸಾದಾರಣ ಹೊಳಪು ಬರುತ್ತದೆ. ಇದರ ಕಟ್ಟಿಗೆಯನ್ನು ಹೋಮ ಹವನಾದಿಗಳಿಗೆ ಉಪಯೋಗಿಸುತ್ತಾರೆ. ಅಲ್ಲದೆ ಇದರಿಂದ ಮನೆಯ ಉಪಯೋಗದ ಫರ್ನಿಚರ್ ತಯಾರು ಮಾಡಲು ಬಳಸುತ್ತಾರೆ.

ಹಲಸಿನ ಹಣ್ಣಿನ ಪೋಷಕಾಂಶಗಳು ಹೆರಿಗೆಯ ಬಳಿಕ ಮಗುವಿಗೆ ಅಗತ್ಯವಿರುವ ತಾಯಿಹಾಲನ್ನು ಉತ್ಪಾದಿಸಲೂ ನೆರವಾಗುತ್ತವೆ. ಹಲಸಿನ ಹಣ್ಣಿನಲ್ಲಿರುವ ನೈಸರ್ಗಿಕ ಸಕ್ಕರೆಗಳಾದ ಸುಕ್ರೋಸ್ ಮತ್ತು ಫ್ರುಕ್ಟೋಸ್ ನಿಮ್ಮ ಶಕ್ರಿಯನ್ನು ವರ್ಧಿಸುವಲ್ಲಿ ಸಹಕಾರಿಯಾಗಿದೆ. ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ.
ಮುಖಕ್ಕೆ ಲಕ್ವ ಹೊಡೆದು ನೋವಿದ್ದರೆ ಹಲಸಿನ ಎಲೆಗಳನ್ನು ಎಳ್ಳೆಣ್ಣೆಯಲ್ಲಿ ಬಿಸಿ ಮಾಡಿ ಮುಖದ ಮೇಲೆ ಇಟ್ಟು ಕಟ್ಟಿದರೆ ನೋವು ಕಡಿಮೆಯಾಗುತ್ತದೆ.

ವಿಟಮಿನ್ ಸಿ ಯನ್ನು ಒಳಗೊಂಡಂತೆ ಹಲಸಿನ ಹಣ್ಣು, ಲಿಗಾನ್ಸ್, ಐಸೋಫ್ಲೇವನ್ಸ್ ಮತ್ತು ಸಪೋನಿನ್ಸ್‌ನಂತಹ ಫೈಟೋನ್ಯೂಟ್ರಿಯಂಟ್ಸ್ ಅನ್ನು ದೇಹಕ್ಕೆ ಪೂರೈಸುತ್ತದೆ ಇದು ಕ್ಯಾನ್ಸರ್ ವಿರುದ್ದ ಮತ್ತು ಬೇಗನೇ ಮುಪ್ಪಿನ ಲಕ್ಷಣಗಳನ್ನು ವರ್ಧಿಸುವುದರ ವಿರುದ್ದ ಹೋರಾಡುತ್ತದೆ. ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿಯಾಗಿದೆ.

ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ . ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ.

ಹಲಸಿನ ಹಣ್ಣಿನಲ್ಲಿ ಹಾಲಿನಲ್ಲಿರುವುದಕ್ಕಿಂತಲೂ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಇದೆ. ಇದರಲ್ಲಿ ಪೊಟ್ಯಾಷಿಯಂ ಅಂಶವೂ ಇದ್ದು, ಮೂತ್ರಪಿಂಡಗಳ ಮೂಲಕ ನಷ್ಟವಾಗುವ ಕ್ಯಾಲ್ಸಿಂಯ ಅಂಶವನ್ನು ಇದು ತುಂಬಿಕೊಡುತ್ತದೆ. ಮೂಳೆಗಳ ಆರೋಗ್ಯ ಹಲಸು ತಿನ್ನುವುದರಿಂದಾಗಿ ಹೆಚ್ಚಾಗುತ್ತದೆ.

ಹಲಸಿನ ಹಣ್ಣಿನ ಮಹತ್ವ
ಹಲಸಿನಹಣ್ಣು

ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಯಾವ ಭಯವೂ ಇಲ್ಲದೆ ಹಲಸಿನ ಸೇವನೆ ಮಾಡಬಹುದು . ಇದರಿಂದ ಆರೋಗ್ಯಕ್ಕೂ ಕೂಡ ಬಹಳ ಒಳ್ಳೆಯದು. ಹಲಸಿನ ಹಣ್ಣಿನ ತೊಳೆಗಳನ್ನು ಅರೆದು ಹಾಲು ಸಕ್ಕರೆ ಬೆರಸಿ ಕುದಿಸಿ ಸೇವಿಸಿದರೆ ದೇಹಕ್ಕೆ ಪುಷ್ಟಿಕರವಾಗಿರುತ್ತದೆ.

ಹಲಸಿನ ಹಣ್ಣಿನಿಂದ ಹಪ್ಪಳ, ತಿಂಡಿ, ದೋಸೆ ಹಾಗೂ ಇತ್ಯಾದಿ ತಿಂಡಿ ತಿನಿಸುಗಳನ್ನು ಬಳಸುವರು. ಪ್ರಕೃತಿದತ್ತವಾಗಿ ಸಿಗುವಂತಹ ಈ ಹಣ್ಣಿನಲ್ಲಿ ಹಲವಾರು ರೀತಿಯ ವಿಟಮಿನ್ ಗಳು ಹಾಗೂ ಖನಿಜಾಂಶಗಳು ಇವೆ. ವಿಟಮಿನ್ ಬಿ, ಪೊಟಾಶಿಯಂ ಮತ್ತು ಪ್ರೋಟೀನ್ ಇದರಲ್ಲಿ ಸಮೃದ್ಧವಾಗಿದೆ.

ಹೆಚ್ಚು ದಾಹವಾಗುವ ಸಮಸ್ಯೆ ಇದ್ದರೆ ಹಲಸಿನ ಹಣ್ಣನ್ನು ಸಕ್ಕರೆ ಜೊತೆ ಸೇವಿಸಿದರೆ ದಾಹ ನಿವಾರಣೆಯಾಗುತ್ತದೆ. ಹಲಸಿನ ಮರದ ಚಕ್ಕೆ ಕಷಾಯದಿಂದ ಬಾಯಿ ಮುಕ್ಕಳಿಸಿದರೆ ಹಲ್ಲು ಮತ್ತು ಬಾಯಲ್ಲಿ ಹುಳವಾಗಿದ್ದರೆ ಹುಳಗಳು ಶಮನವಾಗುತ್ತವೆ.

ಹಲಸಿನ ಹಣ್ಣಿನ ತೊಳೆಗಳಲ್ಲಿ ಕೇವಲ ಪ್ರೋಟಿನ್ ಅಂಶ ಮಾತ್ರವಲ್ಲದೆ ನಾರಿನ ಅಂಶ ವಿಟಮಿನ್ ‘ ಎ ‘, ವಿಟಮಿನ್ ‘ ಸಿ ‘, ರಿಬಾಫ್ಲವಿನ್, ಮೆಗ್ನೀಷಿಯಂ, ಪೊಟ್ಯಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿವೆ. ನಮ್ಮ ದೇಹಕ್ಕೆ ಅಗತ್ಯವಿರುವ ಆರೋಗ್ಯಕರ ಮತ್ತು ಬಹಳ ಪ್ರಯೋಜನಕಾರಿಯಾದ ಆಂಟಿ – ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಲಭ್ಯವಿವೆ.

ಕಣ್ಣಿನ ಸುತ್ತ ನೆರಿಗೆಗಳ ನಿವಾರಣೆಗೆ. ತುಟಿಯ ಸುತ್ತಲಿನ ಕಪ್ಪು ಕಲೆಗಳಿಗೆ. ಮೊಡವೆಗಳ ನಿವಾರಣೆಗು ಸಹ ಹಲಸು ಅತ್ಯುತ್ತಮ ಔಷಧವಾಗಿದೆ.ಹಲಸಿನ ಹಣ್ಣಿನಲ್ಲಿರುವ ಕಬ್ಬಿಣದ ಅಂಶ ಅನೀಮಿಯಾವನ್ನು ದೂರ ಮಾಡಿ ದೇಹದ ಸೂಕ್ತ ರಕ್ತ ಸಂಚಲನೆಗೆ ಫಲಪ್ರದವಾಗಿದೆ. ಹಲಸಿನ ಹಣ್ಣು ಇರುಳುಗುರುಡುತನ ಮತ್ತು ಅಕ್ಷಿಪಟಲದ ಅವನತಿ ಸಮಸ್ಯೆಯನ್ನು ದೂರಮಾಡುತ್ತದೆ.

ಹಲಸಿನ ಹಣ್ಣಿನ ಬೀಜಗಳನ್ನು ಹುರಿದು ಸೇವಿಸಿದರೆ ವೀರ್ಯವೃದ್ದಿಯಾಗುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ. ಹಲಸಿನ ತೊಳೆಗಳಿಗೆ ಬಾಳೆಹಣ್ಣಿನ ತಿರುಳು, ಹಸಿ ಕೊಬ್ಬರಿ ತುರಿ, ಜೇನು ತುಪ್ಪ, ಏಲಕ್ಕಿ ಸೇರಿಸಿ ಮಿಶ್ರಣ ಮಾಡಿ ಸೇವಿಸುವುದರಿಂದ ದುರ್ಬಲ ನರಗಳಿಗೆ ಬಲ ಬರುತ್ತದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಮಲಬದ್ಧತೆ-ಸಮಸ್ಯೆ.

ಮಲಬದ್ಧತೆ ಸಮಸ್ಯೆಗೆ ಸುಲಭ ಪರಿಹಾರಗಳು

ಚಾಣಕ್ಯ

ಕೌಟಿಲ್ಯ/ಚಾಣಕ್ಯ