in

ಅಣ್ಣ ತಂಗಿಯರ ರಕ್ಷಾ ಬಂಧನ

ರಕ್ಷಾ ಬಂಧನ
ರಕ್ಷಾ ಬಂಧನ

ಸಹೋದರ ಮತ್ತು ಸಹೋದರಿಯರ ಸಂಬಂಧ, ಪ್ರೀತಿ ಮತ್ತು ಪವಿತ್ರದ ಸಂಕೇತವಾಗಿರುವ ದಿನವೇ ರಕ್ಷಾ ಬಂಧನ. ರಕ್ಷಾ ಬಂಧನ ದಿನದಂದು ಸಹೋದರಿಯರು ತಮ್ಮ ಅಣ್ಣ ಮತ್ತು ತಮ್ಮಂದಿರಿಗೆ ರಾಖಿಯನ್ನು ಕಟ್ಟಿ, ಅವರ ಜೀವನ ಸುಗಮವಾಗಿರಲಿ ಎಂದು ಹಾರೈಸುತ್ತಾರೆ.

ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ.

ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.

ರಕ್ಷಾ ಬಂಧನ ರಕ್ಷೆ ಹಾಗೂ ಬಂಧನ ಎಂಬ ಎರಡು ಪದಗಳಿಂದ ಕೂಡಿದೆ. ಪ್ರಸ್ತುತ, ಈ ಹಬ್ಬವು ಸಹೋದರ – ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ ಮತ್ತು ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ಬಲಪಡಿಸುವ ಮತ್ತು ಪುನರುಚ್ಚರಿಸುವ ಉತ್ಸವವಾಗಿದೆ ಎಂದು ಹೇಳಬಹುದು. ಒಂದು ಕಡೆ, ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನಪರ್ಯಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಮತ್ತೊಂದೆಡೆ, ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ.

ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.

ಅಣ್ಣ ತಂಗಿಯರ ರಕ್ಷಾ ಬಂಧನ
ರಕ್ಷಾ ಬಂಧನ ಆಚರಣೆ

ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ.

ಅಣ್ಣಎಂಬುದು ಒಂದು ನಾಮಪದ. ಒಂದು ಕುಟುಂಬದಲ್ಲಿ, ತಾಯಿಗೆ ಹುಟ್ಟುವ ಹಿರಿಯ ಗಂಡು ಮಗು ಅಥವಾ ಆ ತಾಯಿಗೆ ಹುಟ್ಟುವ ಮತ್ತೊಂದು ಮಗುವಿನ ಮುನ್ನ ಹುಟ್ಟುವ ಗಂಡು ಮಗುವನ್ನು ಅಣ್ಣನಾಗುತ್ತಾರೆ. ಜನಪದ ಗೀತೆಗಳಲ್ಲಿ ಅಣ್ಣ, ತಂಗಿ, ತಮ್ಮ, ತಂಗಿಯ ಬಗ್ಗೆ ಹಲವಾರು ಜನಪದ ಗೀತೆಗಳಿವೆ.

ದಂತಕತೆಗಳ ಪ್ರಕಾರ ಅಲೆಕ್ಸಾಂಡರನು ಭಾರತದ ಮೇಲೆ ದಂಡೆತ್ತಿ ಬಂದಾಗ ಅವನನ್ನು ಧೈರ್ಯದಿಂದ ಎದುರಿಸಿದವನು ಪೋರಸ್. ಆಗ ಅವರಿಬ್ಬರ ನಡುವೆ ಯುದ್ಧ ಆರಂಭಗೊಂಡಿತು. ಇದೇ ಸಮಯದಲ್ಲಿ ಅಲೆಕ್ಸಾಂಡರನ ಪತ್ನಿ ರೊಕ್ಸಾನಳು ಪೋರಸ್‌ಗೆ ಒಂದು ಪವಿತ್ರ ದಾರವನ್ನು ಕಳುಹಿಸಿದಳು. ಅದರ ಜೊತೆಗೆ ಒಂದು ಮನವಿ ಸಹ ಇತ್ತು. ತನ್ನ ಪತಿಯನ್ನು ಕೊಲ್ಲದಿರುವಂತೆ ಕೇಳಿಕೊಂಡ ಮನವಿ ಅದಾಗಿತ್ತು. ಮುಂದೆ ನಡೆದ ಯುದ್ಧದಲ್ಲಿ ಪೋರಸ್ ಅಲೆಕ್ಸಾಂಡರನನ್ನು ಕೊಲ್ಲದೆ ಉಳಿಸಿದನು. ಇದಕ್ಕೆ ಕಾರಣ ಆತನ ಕೈಯಲ್ಲಿ ಆತ ಕಟ್ಟಿಕೊಂಡಿದ್ದ ರಾಖಿ ಅವನನ್ನು ತಡೆದು ನಿಲ್ಲಿಸಿತ್ತು.

ಮತ್ತೊಂದು ಘಟನೆಯಲ್ಲಿ ಚಿತ್ತೂರಿನ ರಾಣಿ ಕರ್ಣಾವತಿಯು ಗಂಡನನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಆಗ ಆಕೆಯು ಚಕ್ರವರ್ತಿ ಹುಮಾಯುನನಿಗೆ ರಾಖಿಯನ್ನು ಕಳುಹಿಸಿದಳು. ಇದಕ್ಕೆ ಕಾರಣ ಚಕ್ರವರ್ತಿ ಬಹದ್ದೂರ್ ಷಾನು ಈಕೆಯ ರಾಜ್ಯದ ಮೇಲೆ ದಂಡೆತ್ತಿ ಬರುವ ನಿರ್ಧಾರಕ್ಕೆ ಬಂದಿದ್ದನು. ಆಗ ಆಕೆಯು ಹುಮಾಯೂನನ ಸಹಾಯವನ್ನು ಬಯಸಿ ರಾಖಿಯನ್ನು ಕಳುಹಿಸಿದ್ದಳು.ಇದನ್ನು ಮುಟ್ಟುವ ಮೂಲಕ ಸ್ವೀಕರಿಸಿದ ಹುಮಾಯೂನನು ತನ್ನ ಸೇನೆಯನ್ನು ರಾಣಿ ಕರ್ಣಾವತಿಯ ಸಹಾಯಕ್ಕೆ ಧಾವಿಸುವಂತೆ ಸೂಚಿಸಿದನು. ಆದರೆ ಸೈನ್ಯವು ಅಲ್ಲಿಗೆ ತಲುಪಲು ತಡವಾಯಿತು. ಇದೇ ವೇಳೆಗೆ ರಾಣಿ ಕರ್ಣಾವತಿಯು ಇತರೆ ಹೆಂಗಸರೊಂದಿಗೆ ಕೂಡಿ, ತನ್ನ ಮಾನ ರಕ್ಷಣೆಗಾಗಿ ಜೌಹರ್ ಮಾಡಿಕೊಳ್ಳುವ ಮೂಲಕ ಪ್ರಾಣ ತ್ಯಾಗ ಮಾಡಿದ್ದಳು. ಮುಂದೆ ಬಹದ್ದೂರ್ ಷಾನನ್ನು ಹುಮಾಯೂನ್ ಹೊರಗೆ ಹಾಕಿ, ಕರ್ಣಾವತಿಯ ಮಗ ವಿಕ್ರಮಜೀತನನ್ನು ಸಿಂಹಾಸನದಲ್ಲಿ ಕೂರಿಸಿದನು.

ರಕ್ಷಾಬಂಧನದ ಮಹತ್ವ, ಪ್ರಾಮುಖ್ಯತೆ
ರಕ್ಷಾಬಂಧನಕ್ಕೆ ಭಾರತದಲ್ಲಿ ಹೆಚ್ಚು ಮಹತ್ವವಿದೆ. ಇದನ್ನು ಹಬ್ಬದಂತೆ ಆಚರಿಸಲಾಗುತ್ತದೆ. ಸಹೋದರ – ಸಹೋದರಿಯರ ನಡುವಿನ ಪ್ರೀತಿಗೆ ಈ ದಿನ ಸಮರ್ಪಣೆಯಾಗಿದೆ. ಹಿಂದೂ ಧರ್ಮದಲ್ಲಿ ರಕ್ಷಾ ಬಂಧನಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ.

ಅಣ್ಣ ತಂಗಿಯರ ರಕ್ಷಾ ಬಂಧನ
ರಕ್ಷಾಬಂಧನದ ಮಹತ್ವ

ಈ ದಿನ, ಸಹೋದರಿ ತನ್ನ ಸಹೋದರರ ಮಣಿಕಟ್ಟಿನ ಮೇಲೆ ಕಟ್ಟುವ ರೇಷ್ಮೆ ದಾರವು ಕೇವಲ ಒಂದು ದಾರವಲ್ಲ. ಅದು ಇಬ್ಬರ ನಡುವಿನ ಶುದ್ಧ, ಪವಿತ್ರ ಮತ್ತು ನಿರಂತರ ಪ್ರೀತಿಯ ಗುರುತು, ಜೊತೆಗೆ ಶಾಶ್ವತ ರಕ್ಷಣೆಗಾಗಿ ಮಂತ್ರದೊಂದಿಗೆ ಬೆರೆತಿದೆ. ಸಹೋದರಿ ಮದುವೆಯಾದಾಗಲೂ, ಸಹೋದರಿಯರ ಮನೆಗೆ ಭೇಟಿ ನೀಡಿ ಮತ್ತು ಆಕೆಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದನ್ನು ಮರೆಯುವುದಿಲ್ಲ.

ರಕ್ಷಾ ಬಂಧನಕ್ಕೆ ಪ್ರತಿ ಹಿಂದೂ ಮನೆಗಳಲ್ಲಿ ಹಬ್ಬದ ತಿಂಗಳು ಬರುವ ಮುನ್ನವೇ ತಯಾರಿಗಳು ಆರಂಭವಾಗಿರುತ್ತದೆ. ಸಹೋದರನಿಗೆ ಕಟ್ಟಲು ರಾಖಿಯನ್ನು ಆಯ್ಕೆ ಮಾಡುವ ವಿಚಾರದಲ್ಲೂ ಸಹೋದರಿ ಖುಷಿ ಖುಷಿಯಾಗಿ ಇರುತ್ತಾರೆ. ರಕ್ಷಾ ಬಂಧನದ ಹಿಂದಿನ ದಿನ ರಾತ್ರಿಯೇ ಸಿಹಿ ತಿಂಡಿಗಳನ್ನು ತಯಾರು ಮಾಡಲಾಗುತ್ತಿದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

One Comment

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್

ನಾಗ ಪಂಚಮಿ ವಿಶೇಷತೆ

ನಾಗ ಪಂಚಮಿ ವಿಶೇಷತೆ