in ,

ಉಳುವವನೇ ಭೂಮಿಯ ಒಡೆಯ ಎಂದು ಕಾನೂನು ತಂದ ಇಂದಿರಾಗಾಂಧಿ

ಉಳುವವನೇ ಭೂಮಿಯ ಒಡೆಯ
ಉಳುವವನೇ ಭೂಮಿಯ ಒಡೆಯ

ಇಂದಿರಾ ಪ್ರಿಯದರ್ಶಿನಿ ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ. ಅವರು ಮಹಾತ್ಮ ಗಾಂಧಿ ಅವರ ಸಂಬಂಧಿಕರಲ್ಲ.

ರಾಜಕೀಯ ಪ್ರಭಾವವಿದ್ದ ನೆಹರು ಕುಟುಂಬದಲ್ಲಿ ಅವರ ಜನನ. ಬೆಳೆದದ್ದು ತೀಕ್ಷ್ಣ ರಾಜಕೀಯ ವಾತಾವರಣದಲ್ಲಿ. ಮೋತಿಲಾಲ್ ನೆಹರು ಈಕೆಯ ಅಜ್ಜ. ಅವರೊಬ್ಬ ಪ್ರಮುಖ ಭಾರತೀಯ ರಾಷ್ಟ್ರೀಯ ಮುಖಂಡ. ಭಾರತೀಯ ಸ್ವಾತಂತ್ರ್ಯ ಚಳವಳಿಯ ಪ್ರಮುಖ ಮುಂದಾಳು ಮತ್ತು ಸ್ವತಂತ್ರ ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಾಹರ್‌ಲಾಲ್ ನೆಹರು ಇಂದಿರಾಗಾಂಧಿಯವರ ತಂದೆ. ೧೯೪೧ರಲ್ಲಿ ಆಕ್ಸ್‌ಫರ್ಡ್ನಿಂದ ಭಾರತಕ್ಕೆ ಹಿಂದಿರುಗಿದ ನಂತರ ಈಕೆ ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ೧೯೫೦ರ ದಶಕದಲ್ಲಿ, ಮೊದಲ ಭಾರತದ ಪ್ರಧಾನ ಮಂತ್ರಿಯಾಗಿದ್ದಾಗ ಅವರ ತಂದೆಗೆ ವೈಯಕ್ತಿಕ ಸಹಾಯಕರಾಗಿ ಅನಧಿಕೃತ ಸೇವೆ ಸಲ್ಲಿಸಿದರು. ೧೯೬೪ರಲ್ಲಿ ಅವರ ತಂದೆಯ ನಿಧನ. ನಂತರ ಭಾರತದ ರಾಷ್ಟ್ರಪತಿಯಿಂದ ರಾಜ್ಯಸಭೆಯ ಸದಸ್ಯರಾಗಿ ಇವರ ನೇಮಕ. ಮುಂದೆ ವಾರ್ತಾ ಮತ್ತು ಪ್ರಸಾರ ಖಾತೆ ಮಂತ್ರಿಯಾಗಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಚಿವ ಸಂಪುಟದ ಸದಸ್ಯೆ.

ಉಳುವವನೇ ಭೂಮಿಯ ಒಡೆಯ ಎಂದು ಕಾನೂನು ತಂದ ಇಂದಿರಾಗಾಂಧಿ
ಇಂದಿರಾಗಾಂಧಿ

ಶಾಸ್ತ್ರಿಯವರ ಹಠಾತ್ ಮರಣಾನಂತರ ಇಂದಿರಾಗಾಂಧಿ ಪ್ರಧಾನ ಮಂತ್ರಿಯಾದರು. ಇವರನ್ನು ಪ್ರಧಾನಿ ಗದ್ದುಗೆಗೇರಿಸುವಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೆ.ಕಾಮರಾಜ್ಅವರದ್ದು ಪ್ರಮುಖ ಪಾತ್ರ. ಗಾಂಧಿ ಯವರಿಂದ ಜನಾನುರಾಗಿ ರಾಜಕೀಯ ಸಿದ್ಧಾಂತಸ್ಥಾಪನೆ. ಚತುರ ಎದುರಾಳಿಗಳ ವಿರುದ್ಧ ಚುನಾವಣೆ ಗೆಲ್ಲುವಲ್ಲಿ ತನ್ನ ಸಾಮರ್ಥ್ಯದ ಪ್ರದರ್ಶನ. ಅವರಿಂದ ಹೆಚ್ಚು ಎಡ-ಪಕ್ಷೀಯ ಆರ್ಥಿಕ ನೀತಿಗಳ ಅನುಷ್ಠಾನ ಮತ್ತು ಕೃಷಿ ಉತ್ಪಾದಕತೆಗೆ ಬೆನ್ನು ತಟ್ಟಿ ಪ್ರೋತ್ಸಾಹ. ೧೯೭೧ರಲ್ಲಿ ಪಾಕಿಸ್ಥಾನದೊಂದಿಗೆ ನಡೆದ ಕದನದಲ್ಲಿ ಭಾರತದ್ದು ನಿರ್ಣಾಯಕ ಗೆಲುವು. ಈ ಸಂದರ್ಭದಲ್ಲಿ ಇಂದಿರಾ ಪ್ರಧಾನ ಮಂತ್ರಿ. ೧೯೭೫ ಅವರ ಪಾಲಿಗೆ ಒಂದು ಅಭದ್ರತೆಯ ಅವಧಿ. ಇದರಿಂದಾಗಿ ಆಗ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆ. ದೀರ್ಘ ಕಾಲೀನ ನಿರಂಕುಶ ಪ್ರಭುತ್ವ. ಪರಿಣಾಮವಾಗಿ, ಸೋಲರಿಯದ ಕಾಂಗ್ರೆಸ್ ಪಕ್ಷಕ್ಕೆ 1977ರ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವ. 1980 ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಮತ್ತೆ ಜಯ. ಪ್ರಧಾನ ಮಂತ್ರಿ ಅಧಿಕಾರ ಮತ್ತೆ ಇಂದಿರಾ ಗಾಂಧಿ ಕೈಗೆ. ೧೯೮೪ ಜೂನ್‌ನಲ್ಲಿ, ದಂಗೆಕೋರರನ್ನು ಬಂಧಿಲೆಂದು ಗಾಂಧಿ ಆದೇಶದ ಮೇರೆಗೆ ಸಿಖ್‌ರ ಪವಿತ್ರ ಸ್ವರ್ಣ ಮಂದಿರದೊಳಕ್ಕೆ ಭಾರತೀಯ ಸೇನಾ ಪಡೆಯಿಂದ ಬಲವಂತ ಪ್ರವೇಶ. ಈ ಕಾರ್ಯಾಚರಣೆಯ ಪ್ರತೀಕಾರವಾಗಿ ೧೯೮೪ ಅಕ್ಟೋಬರ್ ೩೧ರಂದು ಇಂದಿರಾ ಗಾಂಧಿ ಹತ್ಯೆಗೆ ತುತ್ತಾದರು.

ಇಂದಿರಾಗಾಂಧಿ 1917 ನವೆಂಬರ್ 19ರಂದು ಪಂಡಿತ್ ಜವಾಹರ್‌ಲಾಲ್ ನೆಹರು ಮತ್ತು ಕಮಲಾ ನೆಹರು ಅವರಿಗೆ ಜನಿಸಿದರು. ಈ ದಂಪತಿಗಳಿಗೆ ಇಂದಿರಾ ಏಕಮಾತ್ರ ಪುತ್ರಿ. ನೆಹರು ಅವರದು ಗೌರವಾನ್ವಿತ ಕಾಶ್ಮೀರಿ ಪಂಡಿತ್ ಕುಟುಂಬ. ಇವರು ಜನಿಸಿದಾಗ, ಅಜ್ಜ ಮೋತಿಲಾಲ್ ನೆಹರು ಮತ್ತು ತಂದೆ ಜವಾಹರ್‌ಲಾಲ್ ನೆಹರು, ಇಬ್ಬರೂ ಪ್ರಭಾವಿ ರಾಜಕೀಯ ಮುಖಂಡರು. ಗಾಂಧಿ ಬಾಲ್ಯವನ್ನು ನೆಹರು ಕುಟುಂಬದ ಮನೆ ಆನಂದ ಭವನದಲ್ಲಿ ಕಳೆಯತ್ತಾ ಬೆಳೆದರು. ಈ ಸಂದರ್ಭದಲ್ಲಿ ತೀಕ್ಷ್ಣ ರಾಜಕೀಯ ವಾತಾವರಣ ಆ ಮನೆಯಲ್ಲಿ ನೆಲೆಸಿತ್ತು. ನೆಹರು ಮನೆಮಂದಿಯಿಂದ ದೂರ ಉಳಿದಿದ್ದ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಪ್ರೀತಿಯಲ್ಲಿ ಬೆಳೆದ ಇಂದಿರಾ ದೃಢ ರಕ್ಷಣಾತ್ಮಕ ಸ್ವಭಾವವನ್ನೂ ಮತ್ತು ಏಕಾಂಗಿ ವ್ಯಕ್ತಿತ್ವವನ್ನೂ ರೂಢಿಸಿಕೊಂಡಿದ್ದರು. ನೆಹರು ಮನೆಯಲ್ಲಿ ಆಗ ರಾಜಕೀಯ ಚಟುವಟಿಕೆಯ ಪ್ರವಾಹ. ಹೀಗಾಗಿ ಕುಟುಂಬದವರೊಂದಿಗೆ ಬೆರೆಯಲು ಆಗುತ್ತಿರಲಿಲ್ಲ. ವಿಜಯಲಕ್ಷ್ಮಿ ಪಂಡಿತ್‌ರನ್ನೂ ಒಳಗೊಂಡಂತೆ, ಇವರು ತಮ್ಮ ತಂದೆಯ ಸೋದರಿಯರೊಂದಿಗೆ, ವೈಯಕ್ತಿಕ ಭಿನ್ನಾಪ್ರಾಯ ಹೊಂದಿದ್ದರು. ಅವರೊಂದಿಗಿನ ಈ ಬಗೆಯ ಸಂಬಂಧವು ರಾಜಕೀಯ ಜಗತ್ತಿನಲ್ಲೂ ಹಾಗೇ ಮುಂದುವರಿಯಿತು. ‘ನಾನು ಸೆರೆಮನೆಯಲ್ಲಿದ್ದಾಗ ಪೋಲೀಸರು ಪದೇ ಪದೇ ಮನೆಗೆ ಬಂದು, ಸರಕಾರ ಅವರಿಗೆ ವಿಧಿಸಿದ ದಂಡ ಪಾವತಿಯ ಪ್ರತಿಯಾಗಿ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗುತ್ತಿದ್ದರು’-ಎಂದು ಇವರ ತಂದೆ ತಮ್ಮ ಆತ್ಮಚರಿತ್ರೆ ಟುವರ್ಡ್ ಫ್ರೀಡಮ್ ‌ನಲ್ಲಿ ಬರೆಯುತ್ತಾರೆ. “ನನ್ನ ನಾಲ್ಕು-ವರ್ಷದ ಮಗಳು ಇಂದಿರಾ ಹೀಗೆ ನಡೆಯುತ್ತಿದ್ದ ಸತತ ಲೂಟಿಯಿಂದ ತುಂಬಾ ನೊಂದಿದ್ದಳು. ತೀವ್ರ ಅಸಂತೋಷವನ್ನು ವ್ಯಕ್ತಪಡಿಸಿದ್ದ ಅವಳು ಪೊಲೀಸರ ವಿರುದ್ಧ ಪ್ರತಿಭಟಿಸಿದ್ದಳು” ಎಂದು ನೆಹರು ಹೇಳುತ್ತಾರೆ. “ಬಾಲ್ಯದಲ್ಲಿ ಉಂಟಾದ ಅಚ್ಚಳಿಯದಂಥ ಈ ಬಗೆಯ ನೆನಪು ಪೋಲೀಸ್ ವ್ಯವಸ್ಥೆಯ ಬಗ್ಗೆ ಅವಳಲ್ಲಿ ವಿಭಿನ್ನ ದೃಷ್ಟಿಯನ್ನೇ ಸೃಷ್ಟಿಸುವುದೇನೋ ಎಂಬುದು ನನ್ನ ಕಳಕಳಿಯಾಗಿತ್ತು”. ಇಂದಿರಾ ಯುವಕ ಮತ್ತು ಯುವತಿಯರಿಗಾಗಿ ವಾನರ ಸೇನೆ ಚಳವಳಿಗೆ ಚಾಲನೆ ನೀಡಿದರು. ಅದು ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪುಟ್ಟ ಆದರೆ ಗಮನಾರ್ಹ ಪಾತ್ರ ವಹಿಸಿತು. ಸೂಕ್ಷ್ಮ ಮಾಹಿತಿ ಪ್ರಕಟಣೆಗಳನ್ನು ಮತ್ತು ನಿರ್ಬಂಧಿತ ಸಂಗತಿಗಳನ್ನು ಪ್ರಸಾರ ಮಾಡಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸದಸ್ಯರಿಗೆ ನೆರವಾಯಿತು. ಧ್ವಜ ಪಥ ಸಂಚಲನ ನಡೆಸಿತು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಂಡಿತು. ತಂದೆಯ ಮನೆಯಿಂದ ಶಾಲಾ ಚೀಲದಲ್ಲಿ ಪ್ರಮುಖ ಕ್ರಾಂತಿಯ ಆರಂಭಕ್ಕಾಗಿ ರೂಪುರೇಷೆ ಸಿದ್ಧವಾಗಿದ್ದ ಯೋಜನೆಗಳ ಪ್ರಮುಖ ದಾಖಲೆಯನ್ನು ಪೊಲೀಸರ ಮೂಗಿನಡಿಯಲ್ಲೇ ರಹಸ್ಯವಾಗಿ ಇಂದಿರಾ ಸಾಗಿಸಿದ್ದರು. ಇದು 1930ರಲ್ಲಿನ ಕ್ರಾಂತಿಗೆ ಪ್ರೇರಣೆ ನೀಡಿತು ಎಂಬುದೊಂದು ಮಾತು ಜನಜನಿತ.

ಇಂದಿರಾ ಮತ್ತು ಫಿರೋಜ್ ಗಾಂಧಿಯವರು ಭಾರತಕ್ಕೆ ಹಿಂದಿರುಗಿದಾಗ, ಪರಸ್ಪರ ಪ್ರೀತಿಸುತ್ತಿದ್ದರು. ವೈದ್ಯರ ಸೂಚನೆಯನ್ನೂ ಮೀರಿ ಅವರು ಮದುವೆಯಾಗಲು ನಿರ್ಧರಿಸಿದರು. ಫಿರೋಜ್ ಗಾಂಧಿಯವರಲ್ಲಿದ್ದ ಮುಕ್ತ ಮನೋಭಾವ, ಹಾಸ್ಯ ಪ್ರಜ್ಞೆ ಮತ್ತು ಆತ್ಮ-ವಿಶ್ವಾಸವನ್ನು ಇಂದಿರಾ ಇಷ್ಟಪಟ್ಟರು. ತಮ್ಮ ಮಗಳು ಅಷ್ಟು ಬೇಗ ಮದುವೆಯಾಗುವ ಆಲೋಚನೆ ನೆಹರುಗೆ ಇಷ್ಟವಾಗಲಿಲ್ಲ. ಈ ಪ್ರೇಮ ವಿವಾಹವನ್ನು ತಪ್ಪಿಸಲು ಮಹಾತ್ಮಾಗಾಂಧಿಯವರ ಸಹಾಯವನ್ನು ಪಡೆಯಲು ಅವರು ಪ್ರಯತ್ನಿಸಿದರು. ಇಂದಿರಾ ಹಠ ಹಿಡಿದರು. 1942 ಮಾರ್ಚ್‌ನಲ್ಲಿ ಹಿಂದು ಆಚರಣೆಯಂತೆ ಮದುವೆ ನೆರವೇರಿತು. ಫಿರೋಜ್ ಮತ್ತು ಇಂದಿರಾ ಇಬ್ಬರೂ ಸಹ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯರಾಗಿದ್ದರು. 1942ರಲ್ಲಿ ನಡೆದ ‘ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಬ್ಬರೂ ಬಂಧನಕ್ಕೊಳಗಾದರು. ಸ್ವಾತಂತ್ರ್ಯಾ ನಂತರ, ಫಿರೋಜ್‌ ಚುನಾವಣಾ ಕಣಕ್ಕೆ ಇಳಿದರು. ಉತ್ತರ ಪ್ರದೇಶದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದರು. ಅವರ ಇಬ್ಬರು ಮಕ್ಕಳಾದ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಹುಟ್ಟಿದ ನಂತರ, ಬಿಗಡಾಯಿಸಿದ ಅವರ ಸಂಬಂಧ ಬೇರ್ಪಡುವಷ್ಟರ ಮಟ್ಟಿಗೆ ಬಂತು. ಮರು-ಚುನಾಯಿತರಾದ ಸ್ವಲ್ಪ ದಿನಗಳಲ್ಲೇ ಫಿರೋಜ್‌ ಹೃದಯಾಘಾತಕ್ಕೆ ಈಡಾದರು. ಇದರಿಂದ ಮತ್ತೆ ರಾಜಿಯಾದರು. ಇವರಿಬ್ಬರ ಸಂಬಂಧ ಫಿರೋಜ್ ಗಾಂಧಿ 1960ರ ಸೆಪ್ಟೆಂಬರ್‌ನಲ್ಲಿ ನಿಧನರಾಗುವ ಕೆಲವು ವರ್ಷಗಳ ಮುಂದಿನವರೆಗೆ ಉಳಿದಿತ್ತು.

ಉಳುವವನೇ ಭೂಮಿಯ ಒಡೆಯ ಎಂದು ಕಾನೂನು ತಂದ ಇಂದಿರಾಗಾಂಧಿ
ಉಳುವವನೇ ಭೂಮಿಯ ಒಡೆಯ

ಆರಂಭದಲ್ಲಿ ಇಂದಿರಾರ ಉತ್ತರಾಧಿಕಾರಿ ಆಯ್ಕೆ ಸಂಜಯ್ಆಗಿತ್ತು. ಆದರೆ ಅವರು ವಿಮಾನ ಅಪಘಾತದಲ್ಲಿ ಸಾವಿಗೀಡಾದ ನಂತರ ಒಲ್ಲದ ಮನಃಸ್ಥಿತಿಯಲ್ಲಿದ್ದ ರಾಜೀವ್ ಗಾಂಧಿಯನ್ನು ಒತ್ತಾಯಿಸಿದರು. ಪೈಲೆಟ್ ಹುದ್ದೆ ತ್ಯಜಿಸಿ ರಾಜಕೀಯಕ್ಕೆ ಧುಮುಕುವಂತೆ 1981ರ ಫೆಬ್ರವರಿಯಲ್ಲಿ ರಾಜೀವ್ ಗಾಂಧಿಯ ಮನವೊಲಿಸಿದರು. ಇಂದಿರಾ ಗಾಂಧಿ ಮರಣಾನಂತರ, ರಾಜೀವ್ ಗಾಂಧಿ ಪ್ರಧಾನ ಮಂತ್ರಿಯಾದರು.

ಇಂದಿರಾಗಾಂಧಿ ತಂದ ಒಂದೇ ಒಂದು ಕಾನೂನು ಉಳುವವನೇ ಭೂಮಿಯ ಒಡೆಯ, ಹಿಂದೆ ಧನಿಕರು ತನ್ನ ಹೊಲದಲ್ಲಿ ಜೀತ ಪದ್ಧತಿ ಅನುಸರಿಸುತ್ತಿದ್ದರು. ಇದರಿಂದ ಬಡವರು ಕಷ್ಟ ಪಡುತ್ತಿದ್ದರು. ಆಗ ಬಂದ ಕಾನೂನು ಸ್ವಲ್ಪ ಮಟ್ಟಿಗೆ ಸಹಾಯವಾಗಿತ್ತು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

51 Comments

ಮೀನು

ಮೀನು ತಿನ್ನುವವರಿಗೆ ಗೊತ್ತುಮೀನು ಏಷ್ಟು ಲಾಭ?

ಎಳನೀರು ಹೀಗೆ ಮಾಡಿ ಕುಡಿದರೆ ಎಂತ ಭಯಂಕರ ಪೈಲ್ಸ್ ಇದ್ದರೂ ಮಾಯ

ಎಳನೀರು ಹೀಗೆ ಮಾಡಿ ಕುಡಿದರೆ ಎಂತ ಭಯಂಕರ ಪೈಲ್ಸ್ ಇದ್ದರೂ ಮಾಯ