in

ಕನ್ನಡ ಎಂದ ತಕ್ಷಣ ನೆನಪಾಗುವುದು ಮೊದಲು ಡಾ. ರಾಜ್‌ಕುಮಾರ್

ಡಾ. ರಾಜ್‌ಕುಮಾರ್
ಡಾ. ರಾಜ್‌ಕುಮಾರ್

ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ.

ನಟಸಾರ್ವಭೌಮ ಡಾ. ರಾಜ್‌ಕುಮಾರ್ ,ಜನನ: ಏಪ್ರಿಲ್ ೨೪, ೧೯೨೯ – ಮರಣ: ಏಪ್ರಿಲ್ ೧೨, ೨೦೦೬. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು.
ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು. ೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‌ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್, ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು.

ಕನ್ನಡ ಎಂದ ತಕ್ಷಣ ನೆನಪಾಗುವುದು ಮೊದಲು ಡಾ. ರಾಜ್‌ಕುಮಾರ್
ಡಾ. ರಾಜ್‌ಕುಮಾರ್

ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್‌ಕುಮಾರ್ ಹುಟ್ಟಿದರು. ನಾಮಕರಣಗೊಂಡ ಹೆಸರು ಮುತ್ತುರಾಜು(ಮುತ್ತಣ್ಣ).
ಡಾ. ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್‌ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ವಜ್ರೇಶ್ವರಿ ಸಂಸ್ಥೆಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್‌ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್‌ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಡಾ. ರಾಜ್ ಅವರ ಬೀಗರು. ಬಂಗಾರಪ್ಪನವರ ಪುತ್ರಿಯಾದ ಗೀತಾ, ಶಿವರಾಜ್‌ಕುಮಾರ್ ಅವರ ಪತ್ನಿ.

೩೦ ಜುಲೈ ೨೦೦೦ರಂದು, ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್‌ನಿಂದ ಡಾ. ರಾಜ್ ಅವರು ಗಾಜನೂರಿನಲ್ಲಿರುವ ತಮ್ಮ ತೋಟದ ಮನೆಯಿಂದ ಅಪಹರಣವಾದರು. ಡಾ. ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾದರು.
ಅಪಹರಣದ ನಂತರದ ದಿನಗಳಲ್ಲಿ, ಕ್ಯಾಸೆಟ್ಟುಗಳ ಮೂಲಕ, ಪತ್ರಗಳ ಮೂಲಕ ಕರ್ನಾಟಕ ಹಾಗು ತಮಿಳುನಾಡು ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ವೀರಪ್ಪನ್ ಡಾ. ರಾಜ್ ಅವರನ್ನು ಒತ್ತೆಯಾಳಗಿಟ್ಟುಕೊಂಡು, ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದನು. ನೂರೆಂಟು ದಿನಗಳ ಕಾಲ ಅಪಹೃತರಾಗಿ, ಅರಣ್ಯವಾಸ ಅನುಭವಿಸಿದ್ದ ಡಾ. ರಾಜ್, ೧೫ ನವೆಂಬರ್ ೨೦೦೦ರಂದು ಬಿಡುಗಡೆಗೊಂಡರು.
ಆ ಪುಸ್ತಕವನ್ನು ರವಿ ಬೆಳಗೆರೆ ಯವರು “ರಾಜ ರಹಸ್ಯ” ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.

ಕನ್ನಡ ಎಂದ ತಕ್ಷಣ ನೆನಪಾಗುವುದು ಮೊದಲು ಡಾ. ರಾಜ್‌ಕುಮಾರ್
ಡಾ. ರಾಜ್‌ಕುಮಾರ್

ಕೇವಲ ನಟನೆಯಲ್ಲದೆ, ಅತ್ಯುತ್ತಮ ಗಾಯಕರೂ ಆಗಿದ್ದ ರಾಜ್ ಕನ್ನಡ ಗಾನಲೋಕಕ್ಕೂ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ. ೧೯೭೪ರಲ್ಲಿ ಬಿಡುಗಡೆಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ,ಊರೇ ಹೋರಾಡಲಿ (ಎಮ್ಮೆ ಹಾಡೆಂದೇ ಪ್ರಸಿದ್ಧಿ) ಎಂಬ ಹಾಡಿನಿಂದ ಅವರು ಪೂರ್ಣ ಪ್ರಮಾಣದ ಗಾಯಕರಾಗಿ ಹೊರ ಹೊಮ್ಮಿದರು.

೧೯೪೨ರಲ್ಲಿ ಬಿಡುಗಡೆಯಾದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಟನಾಗಿಯೂ, ೧೯೫೨ರಲ್ಲಿ ಬಿಡುಗಡೆಯಾದ ಶಂಕರ್‌ಸಿಂಗ್ ನಿರ್ದೇಶನದ ಶ್ರೀ ಶ್ರೀನಿವಾಸ ಕಲ್ಯಾಣ ಚಿತ್ರದಲ್ಲಿ ಸಪ್ತರ್ಷಿಗಳಲ್ಲಿ ಒಬ್ಬರಾಗಿ ಅಭಿನಯಿಸಿದ್ದ ಮುತ್ತುರಾಜ್, ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.
೧೯೫೩ರಲ್ಲಿ ಆಗಷ್ಟೆ ಮದುವೆಯಾಗಿದ್ದ ಮುತ್ತುರಾಜ್ ದಂಪತಿಗಳು ನಂಜನಗೂಡಿನಿಂದ ಮೈಸೂರಿಗೆ ಹೊರಡಲು ರೈಲ್ವೆ ನಿಲ್ದಾಣದಲ್ಲಿದ್ದರು. ಅದೇ ಸಮಯಕ್ಕೆ ಹೆಚ್.ಎಲ್.ಎನ್.ಸಿಂಹ ಕೂಡ ಮೈಸೂರಿಗೆ ಹೋಗಲು ಅಲ್ಲಿಗೆ ಬಂದಿದ್ದರು. ಅವರು ಮುತ್ತು ರಾಜ್‌ರವರನ್ನು ಚಿಕ್ಕಂದಿನಿಂದ ನೋಡಿದ್ದರು. ಅಂದು ರೈಲ್ವೆ ನಿಲ್ದಾಣದಲ್ಲಿ ಆ ದಂಪತಿಗಳನ್ನು ಕಂಡು ಪ್ರೀತಿಯಿಂದ ಮಾತನಾಡಿಸಿ, ಯೋಗಕ್ಷೇಮ ವಿಚಾರಿಸಿದರು.

ಸಿಂಹ ಕಣ್ಣಪ್ಪನ ಪಾತ್ರಕ್ಕೆ ಹೊಸನಟನನ್ನು ಹುಡುಕುತ್ತಿದ್ದ ಸಮಯ. ಅಂದು ಕಟ್ಟುಮಸ್ತಾದ ಆಳು ಮುತ್ತರಾಜ್‌ರವರನ್ನು ಕಂಡ ತಕ್ಷಣ “ಇವನನ್ನೇ ಕಣ್ಣಪ್ಪನಾಗಿ ಏಕೆ ಮಾಡಬಾರದು” ಎಂಬ ಭಾವನೆ ಮೂಡಿತ್ತು. ಮುತ್ತುರಾಜ್ ಬಳಿ ವಿಳಾಸವನ್ನು ಪಡೆದು, ದಂಪತಿಗಳಿಗೆ ಶುಭ ಕೋರಿ ಸಿಂಹ ಬೀಳ್ಕೊಟ್ಟಿದ್ದರು. ಮೇಲಿನ ಘಟನೆ ನಡೆದ ಕೆಲ ದಿನಗಳಲ್ಲಿ ಮೈಸೂರಿನ ಟೌನ್‌ಹಾಲಿನಲ್ಲಿ ಬೇಡರ ಕಣ್ಣಪ್ಪ ನಾಟಕ ಪ್ರದರ್ಶನವಿತ್ತು. ಅದರಲ್ಲಿ ಮುತ್ತುರಾಜ್ ಕಣ್ಣಪ್ಪನ ಪಾತ್ರ ವಹಿಸುತ್ತಾರೆ ಎಂದು ಸಿಂಹರವರಿಗೆ ತಿಳಿಯಿತು. * ಆ ದಿನ, ಅರ್ಧಗಂಟೆ ನಾಟಕ ನೋಡಿ, ಮುತ್ತುರಾಜ್‌ರವರ ತನ್ಮಯತೆಯ ಅಭಿನಯ ಕಂಡು ಸಿಂಹ ಸಂತೋಷ ಪಟ್ಟರು. ಗುಬ್ಬಿ ಕರ್ನಾಟಕ ಫಿಲಂಸ್ ನಿರ್ಮಿಸುತ್ತಿದ್ದ ಬೇಡರ ಕಣ್ಣಪ್ಪ ಚಿತ್ರದಲ್ಲಿನ ಕಣ್ಣಪ್ಪನ ಪಾತ್ರಕ್ಕೆ ಈತನೇ ಸರಿಯಾದ ವ್ಯಕ್ತಿ ಎಂದುಕೊಂಡು ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ಅವರನ್ನು ಸಂಪರ್ಕಿಸಿ, ಆ ಚಿತ್ರದ ಸಹ ನಿರ್ಮಾಪಕರಾಗಿದ್ದ ಗುಬ್ಬಿ ವೀರಣ್ಣನವರಿಗೆ ಈ ವಿಷಯ ತಿಳಿಸಿ ಅವರನ್ನು ಒಪ್ಪಿಸಿದರು.
ನಂತರ ಮುತ್ತುರಾಜ್ ಜಿ.ವಿ.ಅಯ್ಯರ್ ಹಾಗು ನರಸಿಂಹರಾಜು ಇವರುಗಳನ್ನು ‘ಸ್ಕ್ರೀನ್ ಟೆಸ್ಟ್’ ಗೆ ಮದರಾಸಿಗೆ ಬರಲು ಆಹ್ವಾನಿಸಿದರು.ನಿರ್ದೇಶಕ ಎಚ್.ಎಲ್.ಎನ್.ಸಿಂಹ ಅವರಿಂದ ಮುತ್ತುರಾಜ್‌ಗೆ-ರಾಜ‌ಕುಮಾರ್ ಎಂಬ ಹೊಸ ಹೆಸರಿನ ನಾಮಕರಣವಾಯಿತು. ರಾಜಕುಮಾರ್ ಬೇಡರ ಕಣ್ಣಪ್ಪ ಚಿತ್ರದ ನಾಯಕನಾಗಿ ಅಭಿನಯಿಸಿದರು.
ಚಿತ್ರವು ೧೯೫೪ರ ಮೇ ತಿಂಗಳಲ್ಲಿ ಆಗಿನ ಮೈಸೂರು ರಾಜ್ಯದಲ್ಲಿ ಎಲ್ಲೆಡೆ ಬಿಡುಗಡೆಗೊಂಡಿತು. ಬೇಡರ ಕಣ್ಣಪ್ಪ ಚಿತ್ರ ರಾಷ್ಟ್ರಪ್ರಶಸ್ತಿ ಪಡೆದ ಪ್ರಥಮ ಚಿತ್ರವಾಗಿ ಕನ್ನಡ ಚಿತ್ರರಂಗದಲ್ಲಿಯೇ ಒಂದು ಮೈಲಿಗಲ್ಲಾಯಿತು. ಮದರಾಸು ‘ಸ್ಕ್ರೀನ್ ಟೆಸ್ಟ್’ ನೋಡಿದ ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ಅವರು ಹೆಚ್.ಎಲ್.ಎನ್.ಸಿಂಹ ಅವರ ಬಳಿ ಹೋಗಿ ” ಈ ಉದ್ದ ಮೂಗಿನ ಮತ್ತು ಹಲ್ಲು ಹುಬ್ಬು ಇರುವವರನ್ನು ಹಾಕಿಕೊಂಡು ಏನು ಚಿತ್ರ ಮಾಡುತ್ತೀಯ ಎಂದು ಕೇಳಿದ್ದರಂತೆ. ಆದರೆ ಹೆಚ್.ಎಲ್.ಎನ್.ಸಿಂಹ ಅವರು ನಿರ್ಮಾಪಕರಿಗೆ ಎ.ವಿ.ಎಂ.ಚೆಟ್ಟಿಯಾರ್, ಇವರೇ ಸರಿಯಾದ ವ್ಯಕ್ತಿಗಳು ಎಂದು ಹೇಳಿ ಒಪ್ಪಿಸಿದ್ದರು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

ಎನ್. ಆರ್. ನಾರಾಯಣ ಮೂರ್ತಿ

ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ

ವಿಧಾನಸೌಧ

ವಿಧಾನಸೌಧ : ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ