in ,

ಜೀರಿಗೆ ಮತ್ತು ಜೀರಿಗೆ ನೀರು ಮಾಡಿ ಸೇವಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು

ಜೀರಿಗೆ
ಜೀರಿಗೆ

ಮನುಷ್ಯ ಬಳಸತೊಡಗಿದ ಅತ್ಯಂತ ಹಳೆಯ ಮಸಾಲೆ ವಸ್ತುಗಳಲ್ಲಿ ಜೀರಿಗೆಯೂ ಒಂದು. ಹುರಿದ ಜೀರಿಗೆಯ ಜೀರ್ಣಶಕ್ತಿಯನ್ನು ಹೆಚ್ಚಿಸುವುದು ಮತ್ತು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು ಅತ್ಯಂತ ಪ್ರಾಚೀನ ಕಾಲದಿಂದ ಮನುಷ್ಯರಿಗೆ ತಿಳಿದಿತ್ತು. ಪ್ರಾಚೀನ ಈಜಿಪ್ಟಿನ ಅನೇಕ ಐತಿಹಾಸಿಕ ಸ್ಥಳಗಳಲ್ಲಿ ಜಿರಿಗೆ ಕಂಡು ಬಂದಿದೆ.

ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಜೀರಿಗೆ ಆ್ಯಸಿಡಿಟಿಯನ್ನೂ ದೂರ ಓಡಿಸುತ್ತದೆ. ಬಾಣಂತಿಯರು ಸೇವಿಸಿದರೆ ಎದೆಹಾಲು ಹೆಚ್ಚಿಸುತ್ತದೆ. ಮಗುವಿಗೆ ಹೊಟ್ಟೆನೋವು ಸಹ ಆಗುವುದಿಲ್ಲ. ಉದರ ಸಂಬಂಧೀ ಸಮಸ್ಯೆಗಳಿಗೆ ಜೀರಿಗೆ ರಾಮಬಾಣವೆಂದೇ ಹೇಳಬಹುದು.

ಜೀರಿಗೆ ಹೆಚ್ಚಾಗಿ ಏಶ್ಯಾದಲ್ಲಿ ಬಳಕೆಯಾಗುವಂತಹ ಸಾಂಬಾರವಾಗಿದ್ದು, ಇದರಲ್ಲಿರುವ ಪ್ರಮುಖ ಪೋಷಕಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ಗಳು ಆರೋಗ್ಯ ಕಾಪಾಡುವುದು. ಇದು ಹಲವಾರು ಆರೋಗ್ಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ.

ಜೀರಾ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ, ಇದು ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.

ಜೀರಿಗೆಯನ್ನು ನುಣ್ಣಗೆ ಪುಡಿ ಮಾಡಿ ತೆಂಗಿನ ಕಾಯಿ ಹಾಲಿನಲ್ಲಿ ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ಬೆವರು ಗುಳ್ಳೆ ಬರುವುದರಿಲ್ಲ.

ಜೀರಿಗೆ ಮತ್ತು ಜೀರಿಗೆ ನೀರು ಮಾಡಿ ಸೇವಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು
ಜೀರಿಗೆ ನೀರು

ಜೀರಾ ನೀರನ್ನು ಕುಡಿಯುವುದರಿಂದ ಹೃದಯ ಸ್ನಾಯುಗಳನ್ನು ಬಲಪಡಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಲಿಪಿಡ್ ಶೇಖರಣೆಯನ್ನು ತಡೆಯಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಬ್ಲಾಕ್‌ಗಳು, ಹೃದಯಾಘಾತಗಳು ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವುಕಡಿಮೆಯಾಗುತ್ತದೆ.

ಅಜೀರ್ಣದಿಂದ ಭೇದಿಯಾಗುತ್ತಿದ್ದರೆ ಹುರಿದ ಅಕ್ಕಿ-ತರಿಗೆ ಜೀರಿಗೆ ಪುಡಿ ಹಾಗೂ ಸಕ್ಕರೆ ಅಥವಾ ಉಪ್ಪು ಹಾಕಿ ಗಂಜಿ ತಯಾರಿಸಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.

ಜೀರಾ ನೀರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮ್ಯಾಂಗನೀಸ್ ಮತ್ತು ಸೆಲೆನಿಯಂನಂತಹ ಖನಿಜಾಂಶಗಳು ಹೇರಳವಾಗಿದ್ದು ಇದು ಚರ್ಮದ ನವ ಯೌವನ ಪಡೆಯಲು ಸಹಾಯ ಮಾಡುತ್ತದೆ. ಈ ಎಲ್ಲಾ ಪೋಷಕಾಂಶಗಳು ನಿಮ್ಮ ಚರ್ಮದ ಮೇಲೆ ಸ್ಪಷ್ಟ ಮತ್ತು ಆರೋಗ್ಯಕರ ಹೊಳಪನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿದ್ದು ವಯಸ್ಸಾಗುವುದನ್ನು ತಡೆಯುತ್ತದೆ.

ಜೀರಿಗೆ ನೀರು ಒಂದು ಸರಳ ಮನೆಯಲ್ಲಿ ತಯಾರಿಸಿದ ಮಿಶ್ರಣವಾಗಿದ್ದು, ಇದು ತೂಕ ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಇಳಿಸಲು ಸಹಾಯ ಮಾಡುತ್ತದೆ.
ತೂಕ ಇಳಿಸಲು ಜೀರಿಗೆ ನೀರು ಸೇವಿಸುವ ವಿಧಾನ: ಒಂದು ಕಪ್ ನೀರಿನಲ್ಲಿ 1 ಟೀ ಚಮಚ ಜೀರಿಗೆ ಹಾಕಿ ರಾತ್ರಿಯಿಡೀ ನೆನೆಸಿ. ಬೆಳಿಗ್ಗೆ 5 ನಿಮಿಷಗಳ ಕಾಲ ಇದನ್ನು ಕುದಿಸಿ, ಸೋಸಿ ಮತ್ತು ಅದನ್ನು ಸೇವಿಸಿ.

ಜೀರಿಗೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಅದು ದೇಹವನ್ನು ತಂಪಾಗಿಡುತ್ತದೆ ಮತ್ತು ಕೆಲವೊಂದು ಅನಾರೋಗ್ಯವನ್ನು ದೂರವಿಡುವುದು. ಜೀರಿಗೆಯು ಆಹಾರದ ನಾರಿನಾಂಶವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಹಲವಾರು ಆರೋಗ್ಯ ಲಾಭಗಳನ್ನು ಇದು ನೀಡುವುದು. ಒಂದು ಲೋಟ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಅದರಿಂದ ಆ ದಿನವು ತುಂಬಾ ಪರಿಣಾಮಕಾರಿ ಆಗಿರುತ್ತದೆ.

ಜೀರಾ ಹೃದಯದ ಮೇಲೆ ಅತ್ಯಂತ ಧನಾತ್ಮಕ ಪರಿಣಾಮವನ್ನು ಹೊಂದಿದೆ. ಇದು ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದೆ ಮತ್ತು ಇದು ಹೃದಯವನ್ನು ರಕ್ಷಿಸಲು ಮಾತ್ರವಲ್ಲದೆ ಹಲವಾರು ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.

ಜೀರಿಗೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಿಸುತ್ತದೆ.
ಜೀರಿಗೆ ಕಷಾಯಕ್ಕೆ ಹಾಲು, ಜೇನುತುಪ್ಪು ಸೇರಿಸಿ ಪ್ರತಿದಿನ ಸೇವಿಸಿದರೆ ಎದೆಹಾಲು ಅಧಿಕವಾಗುವುದು.
ಮಜ್ಜಿಗೆಗೆ ಜೀರಿಗೆ ಪುಡಿ ಮತ್ತು ಉಪ್ಪು ಹಾಕಿ ಕಲಸಿ ಕುಡಿದರೆ ಪಿತ್ತ ಶಮನವಾಗುತ್ತದೆ.

ಒಂದು ಬೊಗಸೆ ಹುರಿದ ಮೆಂತ್ಯ, ಹುರಿದ ಜೀರಿಗೆಗೆ ಒಂದು ಚಮಚ ಹುರಿದ ಕಾಳು ಮೆಣಸು ಸೇರಿಸಿ ಪುಡಿಮಾಡಿ. ಇದನ್ನು ನೀರಿನೊಂದಿಗೆ ನಿತ್ಯ ಸೇವಿಸಿದರೆ ಸಂಧಿವಾತ ಕಡಿಮೆಯಾಗುತ್ತದೆ.

ಹೊಟ್ಟೆ ನೋವು, ವಾಂತಿ ಇದ್ದಾಗ ಒಂದು ಚಮಚ ಜೀರಿಗೆ, ಒಂದು ಚಮಚ ಏಲಕ್ಕಿ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಅರ್ಧ ಲೋಟಕ್ಕೆ ಇಳಿಸಬೇಕು. ತಣ್ಣಗಾದ ನಂತರ ಅದಕ್ಕೆ ಸಕ್ಕರೆ, ನಿಂಬೆ ಪಾನಕ ಬೆರೆಸಿ ದಿನಕ್ಕೆ ಮೂರು ಸಲ ಸೇವಿಸಿದರೆ ಹೊಟ್ಟೆ ತೊಳೆಸುವುದು ಮತ್ತು ವಾಂತಿ ನಿಲ್ಲುತ್ತದೆ.

ಜೀರಿಗೆ ಮತ್ತು ಜೀರಿಗೆ ನೀರು ಮಾಡಿ ಸೇವಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು
ಬ್ಯಾಕ್ಟೀರಿಯಾ ವಿರೋಧಿ ಜೀರಿಗೆ

ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣ ಹೊಂದಿರುವಂತಹ ಜೀರಿಗೆಯು ಉಸಿರಾಟದ ಸಮಸ್ಯೆಗೆ ತುಂಬಾ ಪರಿಣಾಮಕಾರಿ ಮನೆ ಮದ್ದು ಆಗಿದೆ.

ಇದು ಅಸ್ತಮಾ ಮತ್ತು ಬ್ರಾಂಕೈಟಿಸ್ ಗೆ ಪರಿಣಾಮಕಾರಿ ಆಗಿರುವುದು. ಕಫಗಟ್ಟುವುದನ್ನು ನಿವಾರಿಸು ವಂತಹ ಅಂಶವು ಜೀರಿಗೆಯಲ್ಲಿದೆ ಮತ್ತು ಇದು ಉಸಿರಾಟದ ವ್ಯವಸ್ಥೆಯನ್ನು ಕಫ ನಿಲ್ಲುವುದನ್ನು ತಡೆಯುವುತ್ತದೆ.

ಜೀರಾ ನೀರಿನಲ್ಲಿ ಹಲವಾರು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಗಳಿವೆ, ಇದನ್ನು ಕುಡಿಯುವುದರಿಂದ ಕೂದಲಿನ ಆರೋಗ್ಯವನ್ನು ಬಹಳವಾಗಿ ಸುಧಾರಿಸಬಹುದು. ಇದು ಪ್ರೋಟೀನ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿದ್ದು ಅದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಬೇರುಗಳಿಂದ ಪುನಃ ತುಂಬುತ್ತದೆ. ಇದು ಕೂಡ ಕೂದಲು ಉದುರುವುದನ್ನು ನಿರ್ಬಂಧಿಸುತ್ತದೆ.

ಜೀರಾವು ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಅದು ಮೊಡವೆಗಳನ್ನು ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ ಮತ್ತು ಮೊಡವೆಗಳನ್ನು ನಿವಾರಿಸುತ್ತದೆ. ಫ್ರೀ ರಾಡಿಕಲ್ಗಳು ನಮ್ಮ ದೇಹವನ್ನು ಪ್ರವೇಶಿಸುವ ಮತ್ತು ನಮ್ಮ ಚರ್ಮದ ಪ್ರೋಟೀನ್ ಅನ್ನು ಒಡೆಯುವ ಜೀವಾಣುಗಳಾಗಿವೆ. ಇವುಗಳ ವಿರುದ್ಧ ಜೀರಾ ಹೋರಾಡುತ್ತದೆ.

ಎರಡು ಚಮಚ ಹುರಿದ ಜೀರಿಗೆಯನ್ನು ಒಂದು ದೊಡ್ಡ ಲೋಟ ನೀರು ಹಾಕಿ ಕುದಿಸಿ, ಅರ್ಧ ಲೋಟಕ್ಕೆ ಇಳಿಸಿ ಅದಕ್ಕೆ ಉಪ್ಪು – ತುಪ್ಪ ಬೆರೆಸಿ ಸೇವಿಸಿದರೆ, ಹೊಟ್ಟೆ ಉಬ್ಬರ, ನೋವು ಗುಣವಾಗುತ್ತದೆ.

ಅರ್ಧ ಚಮಚ ಜೀರಿಗೆಯನ್ನು ಒಂದು ಲೀಟರ್ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಆರಿಸಿ. ಪ್ರತಿನಿತ್ಯ ಕುಡಿಯುವುದರಿಂದ ರಕ್ತ ಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗ ಕಡಿಮೆಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ, ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯ ತಯಾರಿಸಿ ಕುಡಿದರೆ ಆರೋಗ್ಯ ಸುಧಾರಿಸುತ್ತದೆ. ಜೀರಿಗೆ ನೀರು ಮತ್ತು ಜೀರಿಗೆ ಕಷಾಯ ರಕ್ತದ ಒತ್ತಡವನ್ನು ಸರಿ ಪಡಿಸುತ್ತದೆ.

ಸಾಮಾನ್ಯ ಶೀತ ವಿರುದ್ಧ ಹೋರಾಡುವುದು
ಜೀರಿಗೆಯಲ್ಲಿ ಇರುವಂತಹ ಕೆಲವೊಂದು ಸಾರಭೂತ ಎಣ್ಣೆಗಳು ವೈರಲ್ ಸೋಂಕಿನಿಂದಾಗಿ ಉಂಟಾಗುವ ಸಾಮಾನ್ಯ ಶೀತದಿಂದ ಕಾಪಾಡುವುದು. ಜೀರಿಗೆಯಲ್ಲಿ ಇರುವ ವಿಟಮಿನ್ ಸಿ ಪ್ರತಿರೋಧಕ ವ್ಯವಸ್ಥೆ ಬಲಪಡಿಸಲು ತುಂಬಾ ಪರಿಣಾಮಕಾರಿ ಮನೆಮದ್ದು ಆಗಿದೆ.

ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು. ಜೀರಿಗೆಯಲ್ಲಿ ಉನ್ನತ ಮಟ್ಟದ ವಿಟಮಿನ್ ಎ ಮತ್ತು ಸಿ ಇದೆ. ಇವುಗಳು ಆಂಟಿಆಕ್ಸಿಡೆಂಟ್ ಗಳಾಗಿ ಕೆಲಸ ಮಾಡಿ ಸೋಂಕು ವಿರುದ್ಧ ಹೋರಾಡುವುದು.

ಜೀರಿಗೆ ಮತ್ತು ಜೀರಿಗೆ ನೀರು ಮಾಡಿ ಸೇವಿಸುವುದರಿಂದ ಆಗುವ ಆರೋಗ್ಯಕರ ಲಾಭಗಳು
ಜೀರಾ ನೀರು ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ

ನಿಯಮಿತವಾಗಿ ಒಂದು ಲೋಟ ಜೀರಾ ನೀರನ್ನು ಕುಡಿಯುವುದರಿಂದ ಚರ್ಮದ ಮೇಲೆ ಕಾಣಿಸಿಕೊಳ್ಳುವ ಸುಕ್ಕುಗಳನ್ನು ಕಡಿಮೆ ಮಾಡಬಹುದು.

ಜೀರಗೆಯಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ. ಜೀರಿಗೆಯು ಚಯಾಪಚಯವನ್ನು ಹೆಚ್ಚಿಸಿ ಕ್ಯಾಲರಿ ದಹಿಸುವಂತೆ ಮಾಡುವುದು ಮತ್ತು ವೇಗವಾಗಿ ತೂಕ ಇಳಿಸಲು ಇದು ಸಹಕಾರಿ ಆಗಿರುವುದು.

ಆಯುರ್ವೇದದಲ್ಲಿ ಕೂಡ ಜಲಜೀರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರಲ್ಲಿ ಇರುವಂತಹ ದೇಹವನ್ನು ತಂಪಾಗಿಸುವ ಗುಣವೇ ಇದಕ್ಕೆ ಕಾರಣವಾಗಿದೆ.

ಜೀರಾ ನೀರು ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ನಿಮ್ಮ ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಚಯಾಪಚಯವನ್ನು ಸುಧಾರಿಸುವ ಕಾರ್ಬೋಹೈಡ್ರೇಟ್‌ಗಳು, ಗ್ಲೂಕೋಸ್ ಮತ್ತು ಕೊಬ್ಬು ಒಡೆಯುವ ಕಿಣ್ವಗಳಂತಹ ಸಂಯುಕ್ತಗಳನ್ನು ಸ್ರವಿಸಲು ಸಹಾಯ ಮಾಡುತ್ತದೆ.

ಮಹಿಳೆಯರು ತಮ್ಮ ಜೀವನದಲ್ಲಿ ಕೆಲವು ಸಮಯದಲ್ಲಿ ಅನಿಯಮಿತ ಅವಧಿ ಚಕ್ರಗಳನ್ನು ಅನುಭವಿಸುತ್ತಾರೆ, ಇದು ಕೆಲವೊಮ್ಮೆ ಒತ್ತಡವನ್ನು ಉಂಟುಮಾಡುತ್ತದೆ. ಜೀರಾ ನೀರು ಚಕ್ರವನ್ನು ನಿಯಂತ್ರಿಸಲು ಹೆಚ್ಚಿನ ಸಹಾಯ ಮಾಡಬಹುದು ಏಕೆಂದರೆ ಇದು ಗರ್ಭಕೋಶವನ್ನು ಸಂಕುಚಿತಗೊಳಿಸುವುದಕ್ಕೆ ಕಾರಣವಾಗುತ್ತದೆ.

ಜೀರಾ ಕಬ್ಬಿಣದಲ್ಲಿ ಸಮೃದ್ಧವಾಗಿರುವುದರಿಂದ, ಜೀರಾ ನೀರು ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಅತ್ಯಂತ ಆರೋಗ್ಯಕರ ಪಾನೀಯವಾಗಿದೆ. ಇದು ಸಸ್ತನಿ ಗ್ರಂಥಿಗಳಲ್ಲಿ ಹಾಲಿನ ಉತ್ಪಾದನೆಗೆ ಸಹಾಯ ಮಾಡುತ್ತದೆ ಮತ್ತು ಮಗುವಿಗೆ ಬೇಕಾದ ಎಲ್ಲಾ ಪೋಷಕಾಂಶಗಳನ್ನು ರವಾನಿಸಲು ಸಹಾಯ ಮಾಡುತ್ತದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

ರುದ್ರಾಕ್ಷಿ ಮಣಿ

ಶಿವನ ಪ್ರತೀಕವಾದ ರುದ್ರಾಕ್ಷಿ ಮಣಿ

ಪುರುಷ ರತ್ನ

ಔಷಧಿ ಗುಣಗಳು ಹೊಂದಿರುವ “ಪುರುಷ ರತ್ನ” ಸಸ್ಯ ಮತ್ತು “ಬಲಮುರಿ ಮರ”