in

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು

ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು. ಆಯಾಯ ಸಂಪ್ರದಾಯಸ್ಥರಿಗೆ ಮೀಸಲಾದ ಹಬ್ಬಗಳನ್ನು ಮುಕ್ತವಾಗಿ ಆಚರಿಸಲಾಗುವುದು. ಒಟ್ಟಿನಲ್ಲಿ ಕರ್ನಾಟಕದಲ್ಲಿ ಪ್ರತಿದಿನವೂ ಒಂದಲ್ಲ ಒಂದು ಹಬ್ಬ ಆಚರಿಸಲಾಗುವುದೆಂದು ಹೇಳಬಹುದು.

ಮನೆಮನೆಯಲ್ಲೂ ಉತ್ಸಾಹದಿಂದ ಆಚರಿಸಲಾಗುವ ವಿಶೇಷ ಉತ್ಸವಗಳನ್ನು ಹಬ್ಬವೆನ್ನಬಹುದು. ಮೂಲತಃ ಈ ಹಬ್ಬಗಳು ವಿಜಯೋತ್ಸವಗಳಾಗಿರಬೇಕು. ದುಷ್ಟಶಕ್ತಿಯನ್ನು ದಮನ ಮಾಡಿದುದರ ಜ್ಞಾಪಕಾರ್ಥವಾಗಿ ಇವು ಆಚರಣೆಯಲ್ಲಿ ಬಂದಿರಬೇಕು. ಕೆಲವೊಂದು ಹಬ್ಬಗಳು ಅಂಥ ವಿಜಯಕ್ಕೆ ಕಾರಣರಾದ ಮಹಾ ಪುರುಷರು ಹುಟ್ಟಿದ ದಿನಗಳಾಗಿವೆ. ಇವುಗಳಲ್ಲಿ ಕೆಲವು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲಾಗುವುದು. ಕೆಲವು ಹಬ್ಬಗಳು ಆಯಾ ಸಂಪ್ರದಾಯದವರಿಗೆ ಮಾತ್ರ ಮೀಸಲು. ಇನ್ನು ಕೆಲವು ಅನುಕರಣೆಯಿಂದಲೂ ಬಂದಿರಬಹುದು.

ಇಂತಹ ಕೆಲವೊಂದು ಹಬ್ಬಗಳು ಮತ್ತು ಆಚರಣೆಗಳು.

೧.ಶಿವರಾತ್ರಿ

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು
ಶಿವರಾತ್ರಿ


ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು.
ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.
ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

೨.ಕೃಷ್ಣಾಷ್ಟಮಿ

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು
ಕೃಷ್ಣ ಜನ್ಮಾಷ್ಟಮಿ

ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.
ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.

೩. ಯುಗಾದಿ

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು
ಯುಗಾದಿ

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ,ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.


೪. ಗಣೇಶ ಚತುರ್ಥಿ

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು
ಗಣೇಶ ಚತುರ್ಥಿ

ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ..

೫. ದೀಪಾವಳಿ

ಕರ್ನಾಟಕದ ಕೆಲವೊಂದು ವಿಶೇಷ ಹಬ್ಬಗಳು ಮತ್ತು ಆಚರಣೆಗಳು
ದೀಪಾವಳಿ

ದೀಪಾವಳಿ ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.
ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
ಹೀಗೆ ಹಲವು ಹಬ್ಬಗಳ ಆಚರಣೆ ನಮ್ಮ ಸಂಪ್ರದಾಯದಲ್ಲಿ ಇದೆ.ಪ್ರತಿಯೊಂದು ಹಬ್ಬಕ್ಕೂ ಒಂದೊಂದು ವಿಶೇಷತೆ ಇದೆ.ಒಟ್ಟಿನಲ್ಲಿ ಸಂಸಾರ ಎಲ್ಲ ಸೇರಿ ಹಬ್ಬ ಆಚರಣೆ ಮಾಡಿದರೆ ಚೆನ್ನ.


ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

2 Comments

ಸಂಗೊಳ್ಳಿ ರಾಯಣ್ಣ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಮಕ್ಕಳ ಜ್ಞಾಪಕಶಕ್ತಿ ಹೆಚ್ಚಿಸಲು ಅನುಸರಿಸಬೇಕಾದ ಕ್ರಮಗಳು

ಮಕ್ಕಳ ಜ್ಞಾಪಕಶಕ್ತಿ ಹೆಚ್ಚಿಸಲು ಅನುಸರಿಸಬೇಕಾದ ಕ್ರಮಗಳು