ಬಸವಣ್ಣನವರು ಒಬ್ಬ ಸಮಾಜ ಸುಧಾರಕ, ತತ್ವಜ್ಞಾನಿಯಾಗಿದ್ದವರು. ಇವರು ಬಿಜ್ಜಳ ಮಹಾರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಸವಣ್ಣನವರು ವಚನ ಸಾಹಿತ್ಯ ರಚಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದರು. ಬಸವಣ್ಣನವರ ಕಾವ್ಯ ನಾಮ ಕೂಡಲ ಸಂಗಮದೇವಾ.
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ ಜೊತೆಗೆ ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಕೂಡ ಇದೆ. ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ. ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು. ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ, ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು,

ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ. ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. “ನಮನ” (ಪ್ರೊ.ಚಿದಾನಂದ ಮೂರ್ತಿಯವರಂಥ ಹಿರಿಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾಘೋಷವಾಗಿ ಸಾರಿದ್ದಾರೆ. ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.

ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯಿತು.
ಧನ್ಯವಾದಗಳು.
GIPHY App Key not set. Please check settings