ರುದ್ರನ ‘ಅಕ್ಷಿ’ಯೇ ರುದ್ರಾಕ್ಷಿ. ಅರ್ಥಾತ್ ಹಿಂದೂ ಧರ್ಮದ ಪ್ರಕಾರ ರುದ್ರಾಕ್ಷಿಯನ್ನು ಶಿವನ ಕಣ್ಣಿಗೆ ಹೋಲಿಸಲಾಗುತ್ತದೆ. ಹೀಗಾಗಿ ರುದ್ರಾಕ್ಷಿಗೆ ಪೂಜೆ-ಪುನಸ್ಕಾರಗಳಲ್ಲಿ ವಿಶೇಷವಾದ ಸ್ಥಾನವಿದೆ. ಹಿಮಾಲಯ ಮತ್ತು ನೇಪಾಳದ ಪ್ರದೇಶಗಳಲ್ಲಿ ರುದ್ರಾಕ್ಷಿ ಮರಗಳನ್ನು ಹೆಚ್ಚಾಗಿ ಕಾಣಬಹುದಾಗಿದೆ. ಈ ವೃಕ್ಷಗಳು ಶೀಘ್ರಗತಿಯಲ್ಲಿ ಫಲ ಬಿಡುವ ಜಾತಿಗೆ ಸೇರಿದ್ದು, ಮೂರ್ನಾಲ್ಕು ವರ್ಷಗಳಲ್ಲೇ ರುದ್ರಾಕ್ಷಿ ಬೀಜಗಳನ್ನು ಬಿಡತೊಡಗುತ್ತವೆ. ಇಂಥ ರುದ್ರಾಕ್ಷಿಗಳಲ್ಲಿ ಏಕಮುಖದಿಂದ ಹಿಡಿದು ಇಪ್ಪತ್ತೊಂದು ಮುಖದ ರುದ್ರಾಕ್ಷಿವರೆಗೂ ಒಳಜಾತಿಗಳಿವೆ. ಪ್ರತಿಯೊಂದಕ್ಕೂ ಅದರದೇ ಆದ ಸ್ಥಾನಮಾನವಿದೆ. ಇದೇ ಕಾರಣಕ್ಕೆ ಭಕ್ತಾದಿಗಳು ರುದ್ರಾಕ್ಷಿಮಾಲೆಯನ್ನು ಧರಿಸುವದುಂಟು.
ರುದ್ರಾಕ್ಷಿ ಪವಿತ್ರ ವಸ್ತು. ಪುರಾಣದ ಪ್ರಕಾರ ತ್ರಿಪುರಾಸುರ ರಾಕ್ಷಸನ ಸಂಹಾರದ ನಂತರ, ಪರಶಿವನ ಕಣ್ಣಿನಿಂದ ಬಂದ ಆನಂದದ ಅಶ್ರು ಬಿಂದುಗಳು ರುದ್ರಾಕ್ಷಿ ಮಣಿಗಳಾದವು. ಶಿವನಿಗೆ ಬಹಳ ಪ್ರಿಯವಾದ ರುದ್ರಾಕ್ಷಿ ಮಣಿಗಳು ಶಿವಭಕ್ತರ ಕೊರಳ ಮಣಿ-ಮಾಲೆಯಾಗಿ ಉಪಯೋಗಿಸಲ್ಪಡುತ್ತದೆ. ಇದನ್ನು ಜಪಮಾಲೆಯಾಗಿಯೂ ಉಪಯೋಗಿಸುತ್ತಾರೆ.
ಶಿವನು ದೀರ್ಘ ಕಾಲ ಧ್ಯಾನ ನಿರತನಾಗಿ ನಂತರ ಕಣ್ಣುಬಿಟ್ಟಾಗ ಅವನ ಕಣ್ಣಿನಿಂದ ಬಿದ್ದ ಒಂದು ಆನಂದ ಭಾಷ್ಪ ರುದ್ರಾಕ್ಷಿಯಗಿ ಅದರಿಂದ ರುದ್ರಾಕ್ಷಿಯ ಮರ ಹುಟ್ಟಿತೆಂದು ಹೇಳಲಾಗಿದೆ.
ಅದು ಶಿವನ ಮೂರನೇಕಣ್ಣಿನ ರೂಪವಾದ್ದದು ಜನರ ಕಣ್ಣೀರನ್ನು ಒರೆಸುವ ಎಂದರೆ ದುಃಖವನ್ನು ದೂರಮಾಡುವ ಗುಣ ಹೊಂದಿದೆ ಎಂದು ಕೆಲವರು ಹೇಳುತ್ತಾರೆ.
ಕಥೆಯಂತೆ ಶಿವನು ತಾರಕಾಸುರನನ್ನು ಸಂಹರಿಸಿದಮೇಲೆ ಅವನ ಮಕ್ಕಳಾದ ತದಿನ್ಮಾಲಿ (ವಿದ್ಯುನ್ಮಾಲಿ), ತಾರಕಾಕ್ಷ, ಕಮಲಾಕ್ಷ, ಗುಣವಂತರಾಗಿ ದೇವತೆಗಳ ಸಾಲಿಗೆ ಸೇರಿದರು. ಆದರೆ ಕೆಲವು ಕಾಲಾನಂತರ ದುಷ್ಱರಾಗಿ ಜನರಿಗೆ ತೊಂದರೆ ಕೊಟ್ಟರು. ಅವರನ್ನು ಶಿವನು ಸಂಹರಿಸಿದನು. ಹೀಗೆ ತನ್ನ ಭಕ್ತರು ದುಷ್ಱರಾಗಿ ಸತ್ತುದನ್ನು ನೋಡಿ ಶಿವನ ಕಣ್ಣಿನಿಂದ ನೀರ ಹನಿಗಳು ಉದುರಿದವು. ಅವೇ ಮರಗಳಾಗಿ ಅದರ ಸಂತತಿ ರುದ್ರಾಕ್ಷ್ಷಿಗಳನ್ನು ಕೊಡುತ್ತಿವೆ. ಒಂದುಮರದಲ್ಲಿ ಸುಮಾರು ೨೦೦೦ ದಷ್ಟು ಹಣ್ಣುಬಿಡುವುದು. ಅದರಲ್ಲಿ ೧೦೮ ಮಣಿಗಳ ಜಪಮಾಲೆಗಳನ್ನು ಮಾಡುತ್ತಾರೆ. ಹಿಮಾಲಯದ ಯತಿಗಳು ಆ ಮರದ ಹಣ್ಣುಗಳನ್ನು ಅಮೃತ ಫಲವೆಂದು ತಿನ್ನುತ್ತಾರೆ.
ಹದಿನಾಲ್ಕು ಬಗೆಯ ರುದ್ರಾಕ್ಷಿಗಳು :
ಏಕ ಮುಖ ರುದ್ರಾಕ್ಷಿ
ಏಕ ಮುಖ ರುದ್ರಾಕ್ಷಿ ಯನ್ನು ಸಾಕ್ಷಾತ್ ಶಿವನ ಸ್ವರೂಪವೆಂದು ತಿಳಿಯುತ್ತಾರೆ. ಒಂದು ರುದ್ರಾಕ್ಷಿ ಮರದಲ್ಲಿ ಏಕಮುಖ ರುದ್ರಾಕ್ಷಿ ಯು ಒಂದೇ ಒಂದು ಬಿಡುತ್ತದೆ ಎಂದು ಹೇಳುತ್ತಾರೆ. ಇದು ಬಹಳ ಭಾಗ್ಯಶಾಲಿಯೂ, ಶಿವನಿಗೆ ಪ್ರೀತಿ ಪಾತ್ರನೂ ಆದವನಿಗೆ ಮಾತ್ರ ದೊರೆಯುತ್ತದೆ ಎಂಬ ನಂಬುಗೆ ಇದೆ. ಇದಕ್ಕೆ ಬೆಲೆ ಬಹಳ ಜಾಸ್ತಿ. ಅಂದರೆ ರೂ.ಸಾವಿರದಿಂದ ಇದರ ಬೆಲೆ ಆರಂಭವಾಗುತ್ತದೆ. ಈ ಬಗೆಯ ರುದ್ರಾಕ್ಷಿ ಧರಿಸಿದರೆ ಇಹದ ಎಲ್ಲಾ ಸೌಭಾಗ್ಯಗಳೂ ಈಶ್ವರನ ಕೃಪೆ ಸದಾ ದೊರೆಯುತ್ತದೆ ಎಂಬ ಧೃಢ ನಂಬುಗೆ ಇದೆ..
ದ್ವಿಮುಖ ರುದ್ರಾಕ್ಷಿ
ಇದು ಶಿವ ಪಾರ್ವತಿ ಸ್ವರೂಪ ಎಂದು ಹೇಳುತ್ತಾರೆ ಈ ರುದ್ರಾಕ್ಷಿಯೂ ಸಿಗುವುದು ತುಂಬಾ ವಿರಳ. ಇದನ್ನು ಧರಿಸುವುದರಿಂದ ಗೋಹತ್ಯೆಯೇ ಮೊದಲಾದ ಇತರೆ ದೋಷಗಳೂ ನಾಶವಾಗುತ್ತದೆ. ಈ ರುದ್ರಾಕ್ಷಿಯು ಉತ್ತಮ ಗೃಹಸ್ತ ಜೀವನ ಸುಖ ಶಾಂತಿ, ಸೌಬಾಗ್ಯವನ್ನು ಕೊಡುವುದೆಂದು ಹೇಳಲಾಗುತ್ತದೆ. ಇದರ ಬೆಲೆಯೂ ತುಂಬಾ ಹೆಚ್ಚು
ತ್ರಿಮುಖ ರುದ್ರಾಕ್ಷಿ
ಮೂರುಮುಖದ ರುದ್ರಾಕ್ಷಿ ಅಗ್ನಿ ದೇವನ ಸ್ವರೂಪ ಎಂದು ಹೇಳುತ್ತಾರೆ. ಇದೂ ಬಹಳ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತದೆ. ಇದರ ಧಾರಣೆಯಿಂದ ಸಕಲ ಪಾಪಗಳೂ ನಿವಾರಣೆ ಆಗುವುದು.ಇದರ ಬೆಲೆಯೂ ಸ್ವಲ್ಪ ಹೆಚ್ಚಾಗಿಯೇ ಇದೆ.
ಚತುರ್ಮುಖ ರುದ್ರಾಕ್ಷಿ
ಇದನ್ನು ಬ್ರಹ್ಮ ಸ್ವರೂಪ ಎಂದು ಗುರುತಿಸುತ್ತಾರೆ. ಇದು ಸಾಕಷ್ಟು ಪ್ರಮಾಣದಲ್ಲಿ ದೊರೆಯುವುದು. ಇದು ಬ್ರೂಣ ಹತ್ಯಾದೋಷವನ್ನು ನಿವಾರಣೆ ಮಾಡುವುದು. ಸ್ಮರಣ ಶಕ್ತಿ, ಬುದ್ಧಿ, ಶಿಕ್ಷಣದಲ್ಲಿ ಸಫಲತೆ, ಇವು ದೊಕುವುದೆಂದು ಹೇಳುವರು. ಬೆಲೆ ಸಾಧಾರಣ ಮಟ್ಟದ್ದು.
ಪಂಚ ಮುಖಿ ರುದ್ರಾಕ್ಷಿ
ಪಂಚ ಮುಖಿ ರುದ್ರಾಕ್ಷಿ ಯನ್ನು ಸ್ವಯಂ ಭಗವಾನ್ ಶಂಕರನ ಸ್ವರೂಪ ಎಂದು ತಿಳಿಯುತ್ತಾರೆ. ಹೆಚ್ಚಿನ ರುದ್ರಾಕ್ಷಿಗಳು ಪಂಚ ಮುಖಿ ಆಗಿರುತ್ತವೆ. ಈ. ರುದ್ರಾಕ್ಷಿ ಹೆಚ್ಚು ಸಿಗುವುದರಿಂದ ಬೆಲೆಯೂ ಕಡಿಮೆ. ಈ ರುದ್ರಾಕ್ಷಿಯನ್ನು ಧರಿಸುವುದರಿಂದ ಈಶ್ವರನ ಕೃಪೆ ದೊರಕಿ ಮನಸ್ಸಿಗೆ ಶಾಂತಿದೊರೆಯುವುದು ಎಂಬ ನಂಬುಗೆ
ಷಷ್ಠ ಮುಖಿ ರುದ್ರಾಕ್ಷಿ
ಆರು ಮುಖದ ರುದ್ರಾಕ್ಷಿ ಶಿವ ಪುತ್ರ ಕುಮಾರ ಕಾರ್ತಿಕೇಯನ ರೂಪವೆಂದು ತಿಳಿಯಲಾಗುತ್ತದೆ. ಈ ರುದ್ರಾಕ್ಷಿಯೂ ಹೆಚ್ಚಿ ಪ್ರಮಾಣದಲ್ಲಿ ದೊರೆಯುವುದು. ಈರುದ್ರಾಕ್ಷಿ ಧರಿಸುವುದರಿಂದ ಅಧರ್ಮಾಚರಣೆ ಮಾಡಿದ್ದಲ್ಲಿ ಅದರಿಂದ ಉಂಟಾದ ಪಾಪಗಳು ನಿವರಣೆ ಆಗುವುದು ಹಾಗೂ ಸ್ಮರಣ ಶಕ್ತಿ ಹೆಚ್ಚುವುದು ಎಂಬ ನಂಬುಗೆ ಇದೆ.
ಸಪ್ತ ಮುಖಿ ರುದ್ರಾಕ್ಷಿ
ಏಳು ಮುಖದ ರುದ್ರಾಕ್ಷಿ ಅನಂತ ನಾಗನ (ಅಥವಾ ಆದಿ ಶೇಷನ )ಸ್ವರೂಪ ಎಂದು ಹೇಳುವರು. ಇದೂ ಸಹ ವಿರಳವಾಗಿ ದೊರೆಯುವುದು. ಆದ್ದರಿಂದ ಬೆಲೆ ಹೆಚ್ಚು. ಈ ರುದ್ರಾಕ್ಷಿ ಧಾರಣೆಯಿಂದ ಹಾವಿನ ಭಯ ಇರುವುದಿಲ್ಲ. ಶರೀರ ಧೃಢವಾಗಿ ಬುದ್ಧಿ ಚುರುಕಾಗುವುದು ಎಂದು ನಂಬಲಾಗಿದೆ.
ಅಷ್ಟ ಮುಖಿ ರುದ್ರಾಕ್ಷಿ
ಎಂಟು ಮುಖದ ರುದ್ರಾಕ್ಷಿಯು ಗಣಪತಿಯ ರೂಪವಾಗಿದೆ. ಈ ರುದ್ರಾಕ್ಷಿ ಬಹಳ ಕಡಿಮೆ ಪ್ರಮಾಣದಲ್ಲಿ ದೊರಕುತ್ತದೆ. ಬೇಡಿಕೆ ಜಾಸ್ತಿ ಇರುವುದರಿಂದ, ಬೆಲೆ ಜಾಸ್ತಿ ಈ ರುದಾಕ್ಷಿಯನ್ನು ಧರಿಸುವುದಿಂದ ಕಾರ್ಯಗಳು ನಿರ್ವಿಗ್ನವಾಗಿ ನಡೆಯುತ್ತದೆ ಮತ್ತು ಸರ್ವ ಸಿದ್ಧಿಯುಂಟಾಗುವುದೆಂಬುದು ಭಕ್ತರ ನಂಬುಗೆ.
ನವ ಮುಖಿ ರುದ್ರಾಕ್ಷಿ
ಒಂಭತ್ತು ಮುಖದ ರುದ್ರಾಕ್ಷಿಯನ್ನು ಭೈರವ ಮತ್ತು ನವ ದುರ್ಗ ಸ್ವರೂಪ ಎಂದು ತಿಳಿಯಲಾಗುತ್ತದೆ. ಈ ರುದ್ರಾಕ್ಷಿಯೂ ಕೂಡಾ ಬಹಳ ಕಡಿಮೆ ಪ್ರಮಾಣದಲ್ಲಿ ದೊರೆಯುವುದು. ಆದ್ದರಿಂದ ಬೆಲೆಯೂ ಹೆಚ್ಚು. ಈ ರುದ್ರಾಕ್ಷಿಯನ್ನು ಧರಸುವುದರಿಂದ ಉತ್ತಮ ಸಂತಾನ ಪ್ರಾಪ್ತಿಯಾಗುವುದೆಂದು ಹೇಳುತ್ತಾರೆ.
ದಶ ಮುಖಿ ರುದ್ರಾಕ್ಷಿ
ಹತ್ತುಮುಖದ ಉದ್ರಾಕ್ಷ ಭಗವಾನ್ ನಾರಾಯಣನ ಸ್ವರೂಪೆಂದು ನಂಬುಗೆ. ಈ ರುದ್ರಾಕ್ಷಿ ಧಾರಣೆಯಿಂದ ಇಹದ ಎಲ್ಲಾ ಸೌಲಭ್ಯಗಳೂ ಲಭಿಸುತ್ತದೆ ಮತ್ತುಸದಾ ಸುಖ ಶಾಂತಿ ಇರುತ್ತದೆ ಎಂದು ಹೇಳುತ್ತಾರೆ.
ಏಕಾದಶ ಮುಖದ ರುದ್ರಾಕ್ಷಿ
ಹನ್ನೊಂದು ಮುಖದ ರುದ್ರಾಕ್ಷಿ ಪರಶಿವನ ರುದ್ರ ಸ್ವರೂಪ (ಏಕಾದಶ ರುದ್ರರು) ಎಂದು ಹೇಳುತ್ತಾರೆ. ಇದೂ ಕಡಿಮೆ ಪ್ರಮಾಣದಲ್ಲಿ ದೊರಕುತ್ತದೆ. ಸಾಮಾನ್ಯವಾಗಿ ಸಂನ್ಯಾಸಿಗಳು, ಯತಿಗಳು, ಸಾಧಕರು ಇದನ್ನು ಧರಿಸುತ್ತಾರೆ. ಯಜ್ಞ ಯಾಗಾದಿಗಳ ಫಲ ಈ ರುದ್ರಾಕ್ಷಿ ಧರಿಸುವುದರಿಂದ ಸಿದ್ಧಿಸುತ್ತದೆ ಎಂದು ನಂಬಿಕೆ ಇದೆ.
ದ್ವಾದಶ ಮುಖಿ ರುದ್ರಾಕ್ಷಿ
ಹನ್ನೆರಡು ಮುಖದ ರುದ್ರಾಕ್ಷಿ ಭಗವಾನ್ ಸೂರ್ಯನಾರಾಯಣನ ಸ್ವರೂಪವೆಂದು ತಿಳಿಯಲಾಗುತ್ತದೆ (ದ್ವಾದಶಾದಿತ್ಯರು). ಈ ರುದ್ರಾಕ್ಷಿಯ ಬೆಳೆಯೂ ಸ್ವಲ್ಪ ಕಡಿಮೆ ಪ್ರಮಾಣದಲ್ಲಿರುತ್ತದೆ. ಈರುದ್ರಾಕ್ಷಿಯನ್ನು ಧರಿಸುವುದರಿಂದ ಮನುಷ್ಯನಲ್ಲಿ ತೇಜಸ್ಸು ಹೆಚ್ಚುತ್ತದೆ ಹಾಗೂ ಪ್ರಭಾವ ಶಾಲೀ ವ್ಯಕ್ತಿತ್ವವುಂಟಾಗುತ್ತದೆ ಎಂದು ಹೇಳುತ್ತಾರೆ. ಇದರ ಬೆಲೆಯೂ ಹೆಚ್ಚು.
ತ್ರಯೋದಶಿ ಮುಖಿ ರುದ್ರಾಕ್ಷಿ
ಹದಿಮೂರುಮುಖದ ರುದ್ರಾಕ್ಷಿ ಇಂದ್ರ ದೇವನ ಸ್ವರೂಪ ಎಂದು ಭಾವಿಸುತ್ತಾರೆ. ಈ ರುದ್ರಾಕ್ಷಿಯ ಧಾರಣೆಯಿಂದ ಆತ್ಮ ಶಾಂತಿ ದೊರೆಯು ವುದು ಶಾರೀರಿಕ ಶಾಂತಿ ದೊರೆಯುವುದು.
ಚತುರ್ದಶ ಮುಖದ ರುದ್ರಾಕ್ಷಿ
ಹದಿನಾಲ್ಕು ಮುಖದ ರುದ್ರಾಕ್ಷಿ ಆಂಜನೇಯನ ಸ್ವರೂ ವೆಂದು ತಿಳಿಯಲಾಗುತ್ತದೆ. ಇದು ಸಹಾ ಕಡಿಮೆ ಪ್ರಮಾಣದಲ್ಲಿ ದೊರೆಯುವುದು. ಈ ರುದ್ರಾಕ್ಷಿ ಧಾರಣೆಯಿಂದ ರೋಗಗಳಿಂದ ಮುಕ್ತಿ ದೊರೆಯುತ್ತದೆ- ಮನುಷ್ಯ ನಿರೂಗಿಯಾಗಿ ಬಲಶಾಲಿಯಾಗುತ್ತಾನೆ ಎಂದು ಹೇಳುತ್ತಾರೆ. ಬೆಲೆಯೂ ಹೆಚ್ಚು.
ಧನ್ಯವಾದಗಳು.
GIPHY App Key not set. Please check settings