in

ಬುದ್ಧನು ‘ಬೌದ್ಧ ಧರ್ಮದ ಸ್ಥಾಪಕ’ ಎಂದು ಹೇಳಲಾಗುತ್ತದೆ

ಬೌದ್ಧ ಧರ್ಮದ ಸ್ಥಾಪಕ
ಬೌದ್ಧ ಧರ್ಮದ ಸ್ಥಾಪಕ

ಗೌತಮ ಬುದ್ಧ ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಬುದ್ಧನು 'ಬೌದ್ಧ ಧರ್ಮದ ಸ್ಥಾಪಕ' ಎಂದು ಹೇಳಲಾಗುತ್ತದೆ
ಬೌದ್ಧ ಧರ್ಮ ಅನುಸರಿಸುವ ದೇಶಗಳು ಇವೆ

ಗೌತಮ ಬುದ್ಧನ ಹುಟ್ಟು ಸ್ಥಳ ಲುಂಬಿನಿ ಗ್ರಾಮ. ತಂದೆ ಶುದ್ಧೋಧನ ತಾಯಿ ಮಾಯದೇವಿ. ಮೊದಲ ಹೆಸರು ಸಿದ್ದಾರ್ಥ. ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡ ಬುದ್ಧನನ್ನು ಗೌತಮಿ ಎಂಬ ಸ್ತ್ರೀಯೊಬ್ಬಳು ಸಾಕುತ್ತಾಳೆ. ಆದುದರಿಂದ ಸಿದ್ದಾರ್ಥ ‘ಗೌತಮ’ನೆಂದು ಕರೆಯಲ್ಪಡುತ್ತಾನೆ. ತಂದೆ ಶುದ್ಧೋಧನ ಮಗ ಚಕ್ರವರ್ತಿಯಾಗಬೇಕೆಂಬ ಆಶಯದಿಂದ ಅವನಿಗೆ ದುಃಖದ ಸನ್ನಿವೇಶಗಳೇ ಕಾಣದಂತಹ ಕೃತಕ ವಾತಾವರಣವನ್ನು ಸೃಷ್ಟಿಸಿ, ಅವನನ್ನು ಬೆಳೆಸುತ್ತಾನೆ. ಯಶೋಧರೆ ಎಂಬ ಸುಂದರ ಕನ್ಯೆಯೊಂದಿಗೆ ಅವನ ವಿವಾಹವನ್ನು ಮಾಡುತ್ತಾನೆ. ಗೌತಮನಿಗೆ ‘ರಾಹುಲ’ ಎಂಬ ಮಗನು ಹುಟ್ಟುತ್ತಾನೆ. ಮಗುವಿಗೆ ವರ್ಷ ತುಂಬುವುದರೊಳಗೆ ಸಿದ್ದಾರ್ಥನಿಗೆ ದುಃಖದ ‘ದಿವ್ಯದರ್ಶನ’ವಾಗುತ್ತದೆ. ಇಡೀ ಜಗತ್ತಿನ ಘೋರ ದುಃಖವನ್ನು ಕಂಡು ಬೆಚ್ಚಿಬಿದ್ದ ಸಿದ್ದಾರ್ಥ, ಸೇವಕ ಚೆನ್ನನೊಡನೆ ಜಗವೆಲ್ಲಾ ಮಲಗಿರುವಾಗ ಬುದ್ದನಾಗಲೂ ಹೊರಟು, ದುಃಖಕ್ಕೆ ಶಾಶ್ವತ ಪರಿಹಾರವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಾನೆ.

ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ. ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ. ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ. ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ

ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ. ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು 'ಬೌದ್ಧ ಧರ್ಮದ ಸ್ಥಾಪಕ' ಎಂದು ಹೇಳಲಾಗುತ್ತದೆ
ಬುದ್ಧನ ಪ್ರತಿಮೆ

ಬುದ್ಧನು ‘ಬೌದ್ಧ ಧರ್ಮದ ಸ್ಥಾಪಕ’ ಎನ್ನುವುದು ಜನಜನಿತವಾಗಿರುವ ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಲಿ ಭಾಷೆಯಲ್ಲಿ “ಧಮ್ಮ” ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು. ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ, ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ ಶಿಷ್ಯರಿಗೆ ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ ನಿದ್ದೆಯಿಂದ ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. “ಆಸೆಯೇ ದುಃಖಕ್ಕೆ ಮೂಲ” ಎಂಬುದು ಅವನ ಪ್ರಸಿದ್ಧ ತತ್ವ.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

2 Comments

ನೇರಳೆ ಹಣ್ಣು

ನೇರಳೆ ಹಣ್ಣು ಈಡೀ ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ

ಪ್ರಧಾನ ಮಂತ್ರಿ ಚರಣ್ ಸಿಂಗ್ ಜನ್ಮದಿನ

ಪ್ರಧಾನ ಮಂತ್ರಿ ಚರಣ್ ಸಿಂಗ್ ಜನ್ಮದಿನವನ್ನು ರೈತರ ದಿನ ಎಂದು ಭಾರತದಲ್ಲಿ ಆಚರಿಸಲಾಗುತ್ತದೆ