ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು.
ಗಾದೆ ಒಂದು ನಾಡಿನ ಜನಸಾಮಾನ್ಯರು ನಿತ್ಯ ವ್ಯವಹಾರದಲ್ಲಿ ಸಹಜವಾಗಿ ಬಳಸುವ ರೂಡಿಗತ ಅಲಂಕಾರಿಕ ಮಾತು. ಇದು ಯಾರಿಂದ ಯಾವಾಗ ಹುಟ್ಟುತ್ತದೋ ಹೇಳಲಾಗದು. ಒಂದು ವಿಶೇಷ ಅನುಭವವು ಇಲ್ಲಿ ನುಡಿಗಟ್ಟಿನಲ್ಲಿ ರೂಪುಗೊಳ್ಳುತ್ತದೆ.
ವೇದ ಸುಳ್ಳಾದರೂ ಗಾದೆ ಸುಳ್ಳಾಗದು.
1. ಹಿತ್ತಲ ಗಿಡ ಮದ್ದಲ್ಲ.
2. ಮಾಡಿದ್ದುಣ್ಣೋ ಮಹರಾಯ.
3. ಕೈ ಕೆಸರಾದರೆ ಬಾಯಿ ಮೊಸರು.
4. ಹಾಸಿಗೆ ಇದ್ದಷ್ತು ಕಾಲು ಚಾಚು.
5. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ.
6. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರಂತೆ.
7. ಎತ್ತೆಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದರಂತೆ.
8. ಮನೇಲಿ ಇಲಿ, ಬೀದೀಲಿ ಹುಲಿ.
9. ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಂಡರಂತೆ.
10. ಕಾರ್ಯಾವಾಸಿ ಕತ್ತೆಕಾಲು ಹಿಡಿ.
11.ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
12.ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
13.ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
14.ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
15.ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
16.ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
17.ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
18.ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
19.ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
20.ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
21.ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
22.ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
23.ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
24.ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
25.ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
26.ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
27.ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
28. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
29. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
30.ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
31.ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
32. ಅಕ್ಕಿ ಮೇಲೆ ಆಸೆ, ನೆಂಟರ ಮೇಲೂ ಪ್ರೀತಿ.
33 ಅಜ್ಜಿಗೆ ಅರಿವೆ ಚಿಂತೆ, ಮಗಳಿಗೆ ಗಂಡನ ಚಿಂತೆ.
34.ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರೀಲಿ ಕೊಡೆ ಹಿಡಿದನಂತೆ.
35. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ.
36. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
37. ಬೇಲೀನೆ ಎದ್ದು ಹೊಲ ಮೇಯ್ದಂತೆ.
38.ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು 39.ಕಚ್ಚಲು ನಮ್ಮಿಂದ ಆಗುವುದೇ?
40.ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
41.ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
42.ಮೃತ್ಯು ಬಂದ ಮೇಲೆ ವೈದ್ಯ ಬಂದ.
43.ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
44.ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
45.ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
46.ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
47.ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
48.ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
49.ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
50.ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
51.ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
52.ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
53.ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
54.ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
55.ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
56.ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
57.ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
58.ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
59. ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.
60. ಅಂತು ಇಂತು ಕುಂತಿ ಮಕ್ಕಳಿಗೆ ಎಂತೂ ರಾಜ್ಯವಿಲ್ಲ.
61. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
62. ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ.
63. ದೇವರು ವರ ಕೊಟ್ರು ಪೂಜಾರಿ ಕೊಡ.
64. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
65. ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
66. ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಎಂದರಂತೆ.
67. ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
68. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
69. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
70. ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
71. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನಂತೆ.
72. ಭಂಗಿದೇವರಿಗೆ ಹೆಂಡುಗುಡುಕ ಪೂಜಾರಿ.
73. ಕಾಸಿಗೆ ತಕ್ಕ ಕಜ್ಜಾಯ.
74. ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
75. ಕೂಸು ಹುಟ್ಟುವ ಮುಂಚೆ ಕುಲಾವಿ.
76. ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಲಗೆ ತೂರು.
77. ಇಬ್ಬರ ಜಗಳ ಮೂರನೆಯವನಿಗೆ ಲಾಭ.
70. ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
71.ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
72.ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
73.ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
74.ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
75.ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು
76.ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
77.ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
78.ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
79.ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
80.ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
81.ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
82.ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
83.ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
84.ಬೇಸರವಿರಬಾರದು, ಅವಸರ ಮಾಡಬಾರದು.
85.ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
86.ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
87.ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
88.ಗದ್ದೆ ಸುಟ್ಟರೂ ಹಾಳಾಗದು ಗಾದೆ.
89.ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
90.ಮಾಟ ಮಾಡಿದೋನ ಮನೆ ಹಾಳು.
91.ಒಬ್ಬರ ಕೂಳು ಇನ್ನೊಬ್ಬರ ಕುತ್ತು.
92.ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
93.ಹೊಳೆಯುವುದೆಲ್ಲಾ ಚಿನ್ನವಲ್ಲ.
94.ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
95. ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು
ಹಾಳು.
96. ಉಚ್ಚೇಲಿ ಮೀನು ಹಿಡಿಯೋ ಜಾತಿ.
97. ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮಂದಿರ, ಬೆಳಿತಾ ಬೆಳಿತಾ ದಾಯಾದಿಗಳು.
98. ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
99. ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
100. ಅಂಗೈಯಲ್ಲಿ ಬೆಣ್ಣೆ ಇಟ್ಕೊಂಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರಂತೆ.
101. ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅಂದ ಹಾಗೆ.
102. ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
103. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
104. ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
105.ಬರಿಗೈಯವರ ಬಡಿವಾರ ಬಹಳ.
106.ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
107.ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
108.ಅರೆಗೊಡದ ಅಬ್ಬರವೇ ಬಹಳ.
109.ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
110.ಇಂದಿನ ಸೋಲು ನಾಳಿನ ಗೆಲುವು.
ಧನ್ಯವಾದಗಳು.
GIPHY App Key not set. Please check settings