ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಮುಖ್ಯವಾಗಿ ದಕ್ಷಿಣ-ಪೂರ್ವ ದಿಶೆಯಲ್ಲಿ ಹರಿಯುವ ಈ ನದಿಯ ಪಥ ಸುಮಾರು ೭೬೫ ಕಿ.ಮಿ.ಗಳಷ್ಟು ಉದ್ದವಾಗಿದೆ.
ಕಾವೇರಿ ‘ದಕ್ಷಿಣ ಗಂಗೆ’ ಯೆಂದು ಪ್ರಸಿದ್ಧಿ ಪಡೆದ ಕರ್ನಾಟಕದ ಮಹಾನದಿ. ತುಲಾಮಾಸದಲ್ಲಿ ಕಾವೇರಿ ಸ್ನಾನ ಮಾಡಿದರೆ ಸಕಲ ಪಾಪಗಳೂ ನಾಶವಾಗುವುದೆಂಬ ನಂಬಿಕೆಯಿದೆ. ಕೊಡಗರು ಕಾವೇರಿಯನ್ನು ತಮ್ಮ ಕುಲದೈವದಂತೆ ಪೂಜಿಸುತ್ತಾರೆ. ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು, ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ.
ಬ್ರಹ್ಮನ ಮಗಳಾದ ಲೋಪಾಮುದ್ರ ಭೂಲೋಕದಲ್ಲಿ ಲೊಕೊದ್ಧಾರಕ್ಕಾಗಿ ವಾಸಿಸುತಿದ್ದಳು. ಕವೇರನೆಂಬ ಮುನಿಯು ಬ್ರಹ್ಮನನ್ನು ಕುರಿತು ತಪಸ್ಸನ್ನಾಚರಿಸಿ ಬ್ರಹ್ಮನಿಂದ ವರವನ್ನು ಪಡೆದನು. ನದಿಯ ಉಗಮಕ್ಕಾಗಿ ಮುನಿಗಳು ಸೂಕ್ತಜಾಗದ ಅನ್ವೇಷಣೆಯಲ್ಲಿ ಇರುವುದನ್ನು ತಿಳಿದಿದ್ದ ಗಣೇಶ ಇದೇ ಜಾಗ ಸೂಕ್ತವಾಗಿದೆ ಎಂದೆನಿಸಿ ಕಮಂಡಲವನ್ನು ನೆಲದ ಮೇಲೆ ಇಟ್ಟುಬಿಟ್ಟನು.
ಅಲ್ಲಿಯೇ ಹಾರಾಡುತ್ತಿದ್ದ ಕಾಗೆಯೊಂದು ಕಮಂಡಲವನ್ನು ತಾಕುವಂತೆ ಕುಳಿತುಕೊಂಡಿತು. ಅಷ್ಟರಲ್ಲಿ ಹಿಂತಿರುಗಿದ ಅಗಸ್ತ್ಯ ಮುನಿಗಳು ಕಾಗೆಯನ್ನು ನೋಡಿ ಧಾವಂತದಿಂದ ಅದನ್ನು ಓಡಿಸಲು ಪ್ರಯತ್ನಿಸಿದಾಗ ಕಮಂಡಲದ ನೀರು ಚೆಲ್ಲಿತು. ಸಣ್ಣ ಪ್ರಮಾಣದ ಜಲವು ಜಲಧಾರೆಯಾಗಿ ನದಿಯಾಗಿ ಹರಿಯಿತು. ತಲಕಾವೇರಿಯ ಸ್ಥಳವನ್ನು ಈಗಲೂ ಪವಿತ್ರವೆಂದು ಪರಿಗಣಿಸಲಾಗುತ್ತಿದ್ದು, ಇಲ್ಲಿ ನಿತ್ಯ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಮಹಾಭಾರತದ ಆದಿಪರ್ವದಲ್ಲಿ ಅರ್ಜುನನು ತೀರ್ಥಯಾತ್ರೆಗೆ ಹೋಗಿದ್ದಾಗ, ಈ ನದಿಯಲ್ಲಿ ಸ್ನಾನ ಮಾಡಿದನೆಂಬ ಉಲ್ಲೇಖವಿದೆ. ರಾಜಸೂಯಯಾಗದ ಸಮಯದಲ್ಲಿ ನಕುಲನು ಇಲ್ಲಿಗೆ ಬಂದಿದ್ದನೆಂದು ನಂಬಲಾಗಿದೆ. ಅಗಸ್ತ್ಯ ಮಹಾಮುನಿಯು ಲೋಪಾಮುದ್ರೆಯನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತ ಪಡಿಸುತ್ತಾನೆ. ಅದಕ್ಕೆ ಲೋಪಾಮುದ್ರೆ ಮೊದಲು ನಿರಾಕರಿಸುತ್ತಾಳೆ. ನಂತರ ದಾರಿಯಲ್ಲಿ ತೆರಳುತ್ತಿರುವ ವೇಳೆ ಅಗಸ್ತ್ಯ ಮಹಾಮುನಿ ಭೇಟಿಯಾದಾಗ, ಲೋಪಾಮುದ್ರೆಯು ತನ್ನನ್ನು ಎಂದೂ ಕಾಯಿಸಬಾರದು, ಕಾಯಿಸಿದರೆ ನಾನು ಸ್ವತಂತ್ರಳು. ಇದಕ್ಕೆ ಒಪ್ಪುವುದಾದರೆ ಮದುವೆಯಾಗುವುದಾಗಿ ಹೇಳುತ್ತಾಳೆ. ಅದಕ್ಕೆ ಓಪ್ಪಿದ ಅಗಸ್ತ್ಯಮುನಿಯು ಲೋಪಾ ಮುದ್ರೆಯನ್ನು ಮದುವೆಯಾಗುತ್ತಾನೆ.
ಒಂದು ದಿನ ಅಗಸ್ತ್ಯಮುನಿಯು ತನ್ನ ಶಿಷ್ಯಂದಿರಿಗೆ ಪಾಠ ಮಾಡುತ್ತಾ ತಲ್ಲೀನನಾಗಿ ಸಮಯವನ್ನು ಮರೆತು ಬಿಡುತ್ತಾನೆ. ಆಗ ಲೋಪಾಮುದ್ರೆಯು ಅಲ್ಲಿಂದ ಹೊರಟು ತಲಕಾವೇರಿಗೆ ಬಂದು ಅಂತರ್ಜಲದಲ್ಲಿ ಹಾರಿ ನದಿಯಾಗಿ ಹರಿಯುತ್ತಾಳೆ. ಅವಳು ಕವೇರನೆಂಬ ಮುನಿಯ ಮಗಳಾದುದರಿಂದ ಈ ನದಿಗೆ ಕಾವೇರಿಯೆಂಬ ಹೆಸರು ಬಂದಿದೆ.
ಇನ್ನೊಂದು ಕಥೆಯ ಪ್ರಕಾರ ಅಗಸ್ತ್ಯ ಮುನಿಗಳ ಕಮಂಡಲ ಮಗುಚಿ ಬಿದ್ದಾಗ ಅದರ ನೀರು ಹೊರ ಚೆಲ್ಲಿತು ಅದೇ ಕಾವೇರಿ ನದಿಯಾಯಿತು. ಆ ಕಥೆ ಹೀಗಿದೆ :- ದಕ್ಷಿಣದ ಪ್ರಾಂತ್ಯವು ನೀರಿಲ್ಲದೆ ಬಂಜರಾಗಿತ್ತು. ಹಾಗಾಗಿ ಇಲ್ಲಿನ ಜಲಕ್ಷಾಮವನ್ನು ಹೋಗಲಾಡಿಸಲು ಮುನಿ ಅಗಸ್ತ್ಯರು, ಬ್ರಹ್ಮನ ಆಶಿರ್ವಾದದೊಂದಿಗೆ,
ಶಿವನಿಂದ ಪವಿತ್ರವಾದ ಜಲವನ್ನು ಪಡೆದು ಅವರ ಕಮಂಡಲದಲ್ಲಿ ತುಂಬಿದ್ದರು.
ಭೋರ್ಗರೆಯುತ್ತಾ ಉಕ್ಕಿ ಹರಿಯುವ ನದಿಯ ಸೃಷ್ಟಿಗಾಗಿ ಸೂಕ್ತ ಜಾಗವನ್ನು ಹುಡುಕುವ ಆಶಯದಿಂದ, ಅಗಸ್ತ್ಯ ಮುನಿಗಳು ದಕ್ಷಿಣ ಭಾಗಕ್ಕೆ ಪ್ರವಾಸ ಕೈಡೊಂಡು ಕೊಡಗಿನ ಬೆಟ್ಟ ಪ್ರದೇಶವನ್ನು ತಲುಪಿದರು. ವಾಸ್ತವವಾಗಿ, ಆ ಬಾಲಕ ವೇಷ ಮರೆಸಿದ ಗಣೇಶನಾಗಿದ್ದನು. ದೇಹಬಾಧೆ ಪೀಡಿತರಾಗಿದ್ದ ಅಗಸ್ತ್ಯ ಮುನಿಗಳು ಶೌಚಕ್ಕಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿದ್ದು, ತನ್ನ ಕೈಲಿರುವ ನೀರಿನ ಕಮಂಡಲವನ್ನು ಜಾಗರೂಕತೆಯಿಂದ ಹಿಡಿದುಕೊಳ್ಳಲು ಆ ಬಾಲಕನನ್ನು ವಿನಂತಿಸಿ ಕೊಳ್ಳುವುದು ಸಭಾಪರ್ವದಲ್ಲಿ ಬರುತ್ತದೆ.
ಕೊಡಗಿನ ಬೆಟ್ಟಗಳನ್ನು ಬಿಟ್ಟ ನಂತರ ಕಾವೇರಿ ನದಿ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತದೆ. ಈ ನದಿಯಲ್ಲಿ ಮೂರು ದ್ವೀಪಗಳಿವೆ – ಕರ್ನಾಟಕದಲ್ಲಿ ಶ್ರೀರಂಗಪಟ್ಟಣ ಮತ್ತು ಶಿವನಸಮುದ್ರ, ಹಾಗೂ ತಮಿಳುನಾಡಿ ನಲ್ಲಿ ಶ್ರೀರಂಗ. ಶಿವನಸಮುದ್ರದಲ್ಲಿ ಈ ನದಿ ೩೨೦ ಅಡಿಗಳ ಎತ್ತರದಿಂದ ಧುಮುಕಿ, ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತದೆ.
ಭಾರತದ ಮೊದಲ ಜಲವಿದ್ಯುದಾಗಾರ ಇಲ್ಲಿ ೧೯೦೨ ರಲ್ಲಿ ಕಟ್ಟಲ್ಪಟ್ಟು ಬೆಂಗಳೂರು ನಗರಕ್ಕೆ ವಿದ್ಯುಚ್ಛಕ್ತಿಯನ್ನು ಒದಗಿಸುತ್ತಿತ್ತು. ಹೊಗೇನಕಲ್ ಜಲಪಾತವಾಗಿ ಬಿದ್ದಾದ ಮೇಲೆ ತಮಿಳುನಾಡನ್ನು ಪ್ರವೇಶಿಸುವ ಈ ನದಿ, ತಂಜಾವೂರು ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.
ಧನ್ಯವಾದಗಳು.
GIPHY App Key not set. Please check settings