in

ಕೃಷ್ಣ ಜನ್ಮಾಷ್ಟಮಿ ಆಚರಣೆ

ಕೃಷ್ಣ ಜನ್ಮಾಷ್ಟಮಿ ಆಚರಣೆ
ಕೃಷ್ಣ ಜನ್ಮಾಷ್ಟಮಿ ಆಚರಣೆ

ಹಿಂದೂ ದೇವತೆ ಶ್ರೀಕೃಷ್ಣನ ಜನನದ ಕಾರಣ ಭಾರತದಲ್ಲಿ ವಾರ್ಷಿಕ ಸ್ಮರಣಾರ್ಥ.

ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಇನ್ನೇನು ಈ ತಿಂಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಬರುತ್ತೆ. ಎಲ್ಲಾ ಕಡೆ ಅತೀ ವಿಜ್ರಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಯನ್ನು ಆಚರಿಸುತ್ತೇವೆ. ಉಡುಪಿಯ ಕೃಷ್ಣ ಮಠದಲ್ಲಿ ಕೂಡ ಅತಿ ಅದ್ದೂರಿಯಿಂದ ಕೃಷ್ಣನ ಅಷ್ಟಮಿಯನ್ನು ಆಚರಿಸುತ್ತಾರೆ ಅಷ್ಟೇ ಅಲ್ಲದೆ ಎಲ್ಲಾ ಕೃಷ್ಣನ ಮಂದಿರದಲ್ಲಿ ಕೂಡ ಕೃಷ್ಣನ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಎಲ್ಲಾ ಕಡೆ ಸಾಂಪ್ರದಾಯಿಕ ಆಟಗಳು, ಚಿಕ್ಕ ಮಕ್ಕಳಿಗೆ ರಾಧಾ ಕೃಷ್ಣನ ಅಲಂಕಾರ ಮಾಡಿ ನೋಡುವುದೇ ಒಂದು ಚಂದ.

ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

ಕೃಷ್ಣ ಜನ್ಮಾಷ್ಟಮಿ ಆಚರಣೆ
ಕೃಷ್ಣ ಜನ್ಮಾಷ್ಟಮಿ ಆಚರಣೆ

ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
ಕೃಷ್ಣನು ಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ ೮ನೇ ಮಗನಾಗಿ ಜನಿಸಿದನು. ಮಥುರ ಯಾದವ ಕುಲದ ರಾಜಧಾನಿಯಾಗಿತ್ತು.

ಕಂಸ ತಂದೆ ಉಗ್ರಸೇನರನ್ನು ಬಂಧಿನದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣಕಂಸನು ದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ ೭ ಮಕ್ಕಳನ್ನು ಕೊಂದನು. ೮ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆ ಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.

ಕೃಷ್ಣ ಜನ್ಮಾಷ್ಟಮಿ ಆಚರಣೆ
ಶ್ರೀ ಕೃಷ್ಣಪರಮಾತ್ಮರು ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ

ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು. ಕೃಷ್ಣ ಗೋಕುಲ ಹಾಗೂ ವೃಂದಾವನದಲ್ಲಿ ಬಲರಾಮನ ಜತೆ ಬೆಳೆದು, ಕೊನೇಗೆ ಮಥುರಾಗೆ ಬಂದು ಕಂಸನನ್ನು ಕೊಂದನು.

ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

ಮಹಾಭಾರತದಲ್ಲಿ ಶ್ರೀ ಕೃಷ್ಣನಿಗೆ ಪ್ರಮುಖ ಪಾತ್ರವಿದೆ. ಪಾಂಡವರ ತಾಯಿ ಕುಂತಿ ಶ್ರೀಕೃಷ್ಣನ ತಂದೆಯಾದ ವಸುದೇವನ ತಂಗಿ. ಮಹಾಭಾರತದ ಕಥೆಯಲ್ಲಿ ಶ್ರೀಕೃಷ್ಣನ ಪ್ರವೇಶವಾಗುವುದು ದ್ರೌಪದಿಯ ಸ್ವಯಂವರದ ಸಂದರ್ಭದಲ್ಲಿ ಅವನು ಅರ್ಜುನನ ಮತ್ತು ಪಾಂಡವರ ಗುರುತು ಹಿಡಿದು ಬಲರಾಮನಿಗೆ ತೋರಿಸುತ್ತಾನೆ. ನಂತರ ಅವನು ಯಾದವರೊಡನೆ ದ್ರೌಪದಿ ಮತ್ತು ಪಾಂಡವರ ವಿವಾಹದಲ್ಲಿ ಭಾಗವಹಿಸುವನು. ಜೂಜಿನಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣಕ್ಕೆ ಪ್ರಯತ್ನಿಸುತ್ತಾರೆ. ಆಗ ದ್ರೌಪದಿಗೆ ಅಕ್ಷಯವಸ್ತ್ರವನ್ನು ಕೊಡುವ ಮೂಲಕ ಅವಳ ಮಾನರಕ್ಷಣೆ ಮಾಡುತ್ತಾನೆ.
ಕುರುಕ್ಷೇತ್ರದ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ.

ಯುದ್ಧರಂಗದಲ್ಲಿ ತನ್ನ ಗುರು-ಬಂಧು-ಮಿತ್ರರೊಂದಿಗೆ ಯುದ್ಧ ಮಾಡಲು ನಿರಾಕರಿಸುವ ಅರ್ಜುನನಿಗೆ ಶ್ರೀಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಕೃಷ್ಣ ಏಕಾಂಗಿಯಾಗಿ, ಆಯುಧಗಳು ಇಲ್ಲದೆಯೇ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರಿಗೆ ಜಯ ತಂದುಕೊಡುತ್ತಾನೆ.

ರಾಮಾಯಣದ ಜಾಂಬವಂತನನ್ನು ಎದುರಿಸಿ ಶ್ಯಮಂತಕ ಮಣಿಯನ್ನೂ, ಜಾಂಬವಂತನ ಮಗಳು ಜಾಂಬವತಿಯನ್ನೂ ಗೆಲ್ಲುವ ಕೃಷ್ಣ, ಜಾಂಬವಂತನಿಗೆ ರಾಮಾಯಣದ ಶ್ರೀರಾಮಚಂದ್ರನ ರೂಪದಲ್ಲಿ ದರ್ಶನ ನೀಡುತ್ತಾನೆ.

ರಾಮಾಯಣದಲ್ಲಿ ರಾಮನಾಗಿ ವಾಲಿಯನ್ನು ಕೊಂದಾಗ, ವಾಲಿಗೆ ಮುಂದಿನ ಅವತಾರದಲ್ಲಿ ನೀನು ನನ್ನನ್ನು ಕೊಲ್ಲುವೆಯಂತೆ ಎಂದು ಮಾತು ನೀಡಿರುತ್ತಾನೆ. ಅದರಂತೆಯೇ ಜರಾ ಎಂಬ ಬೇಡನಾಗಿ ಜನ್ಮ ತಾಳಿದ ವಾಲಿಯು, ಕೃಷ್ಣನ ಕಾಲಿನ ಹೆಬ್ಬೆರಳನ್ನು ಜಿಂಕೆ ಎಂದು ಭಾವಿಸಿ ಬಾಣ ಹೊಡೆಯುತ್ತಾನೆ. ಆ ಬಾಣದಿಂದ ಜಗನ್ನಿಯಾಮಕ ಶ್ರೀ ಕೃಷ್ಣ ಅಸು ನೀಗಿ ತನ್ನ ಅವತಾರವನ್ನು ಮುಗಿಸುತ್ತಾನೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಹುಣಸೆ ಬೆಳೆ

ಹುಣಸೆ ಬೆಳೆ

ಹುರಿಗಡಲೆ

ಹುರಿಗಡಲೆಯಲ್ಲಿ ಕೂಡ ಆರೋಗ್ಯ ಅಡಗಿದೆ