in

ನವರಾತ್ರಿ ನವದೇವಿಗಳ ಪೂಜಾ ವಿಶೇಷತೆ

ನವರಾತ್ರಿ ನವದೇವಿಗಳ ಪೂಜಾ ವಿಶೇಷತೆ
ನವರಾತ್ರಿ ನವದೇವಿಗಳ ಪೂಜಾ ವಿಶೇಷತೆ

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.

ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.

ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ. ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

ನವರಾತ್ರಿ ನವದೇವಿಗಳ ಪೂಜಾ ವಿಶೇಷತೆ
ನವರಾತ್ರಿ ನವದೇವಿಗಳ ಪೂಜಾ

*ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
*ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
*ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
*ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ.
*ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ.
*ಆರನೇ ದಿನ ಶಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ.
*ಏಳನೇ ದಿನ ಸಪ್ತಮಿ – ರಕ್ತ ಬೀಜ ಹಾ ದುರ್ಗಾಪೂಜಾ.
*ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
*ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.

ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ. ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಅಂದೇ ಪುಸ್ತಕಗಳನ್ನಿಟ್ಟು ಪೂಜಿಸಲಾಗುತ್ತದೆ ಇದಕ್ಕೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.

ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.

ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.

ನವರಾತ್ರಿ ನವದೇವಿಗಳ ಪೂಜಾ ವಿಶೇಷತೆ
ಮಹಿಷಾಸುರಮರ್ದಿನಿ

ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ. ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನು ಮಾಡಬೇಕು. ದಶಮಿಯಂದು ವಿಜಯೋತ್ಸವವನ್ನು ಆಚರಿಸಬೇಕು. ಇದನ್ನೇ ದಸರಾ ವಿಜಯದಶಮಿ ಎನ್ನುತ್ತಾರೆ.

ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.

ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.
ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ|’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.

ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ – ‘ಅಖಂಡ ದೀಪಪ್ರಜ್ವಲನೆ ಅಂದರೆ ನವರಾತ್ರಿಯ ೯ ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

One Comment

ಕುದುರೆ ಹಳ್ಳಿ ಈಗ ಕುದ್ರೋಳಿ

ಹಿಂದೆ ಕುದುರೆ ಹಳ್ಳಿ ಈಗ ಕುದ್ರೋಳಿ

ಕಮಲ ದೇವಾಲಯ ವಿಶೇಷತೆ

ಕಮಲ ದೇವಾಲಯ ವಿಶೇಷತೆ