ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾರೆ.
ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.
ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.
ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗಿದೆ.
*ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫
*ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭
*ವೀರಚಕ್ರ ಪ್ರಶಸ್ತಿ – ೧೯೯೭
*ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
*ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
*ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦

*ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬
*ಪಂಪಾಪತಿ ಪರಿಸರ ಪ್ರಶಸ್ತಿ
*ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
*ವನಮಾತೆ ಪ್ರಶಸ್ತಿ
*ಮಾಗಡಿ ವ್ಯಕ್ತಿ ಪ್ರಶಸ್ತಿ
*ಶ್ರೀಮಾತಾ ಪ್ರಶಸ್ತಿ
*ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
*ಕರ್ನಾಟಕ ಪರಿಸರ ಪ್ರಶಸ್ತಿ
*ಮಹಿಳಾರತ್ನ ಪ್ರಶಸ್ತಿ
*ನ್ಯಾಷನಲ್ ಸಿಟಿಜನ್ ಪ್ರಶಸ್ತಿ
*ರಾಜ್ಯೋತ್ಸವ ಪ್ರಶಸ್ತಿ
*ಹೂವಿನಹೊಳೆ ಪ್ರತಿಷ್ಠಾನದ ವಿಶ್ವಾತ್ಮ ಪುರಸ್ಕಾರ ೨೦೧೫
*ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
*೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.
*೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
*೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು. ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ. ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ.
ಪತಿಯ ನೆನಪಿಗಾಗಿ ತನ್ನ ಹಳ್ಳಿಯಲ್ಲಿ ಆಸ್ಪತ್ರೆಯನ್ನು ನಿರ್ಮಿಸುವ ಕನಸನ್ನು ಅವಳು ಹೊಂದಿದ್ದಾಳೆ ಮತ್ತು ಇದಕ್ಕಾಗಿ ಒಂದು ಟ್ರಸ್ಟ್ ಅನ್ನು ಸ್ಥಾಪಿಸಲಾಗಿದೆ.
ಇತ್ತೀಚೆಗೆ ತಿಮ್ಮಕ್ಕ ಹೋರಾಟಕ್ಕೆ ಕೂಡ ಇಳಿದಿದ್ದರು :
ತಾವು ನೆಟ್ಟು ಬೆಳೆಸಿದ ಮರಗಳನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಅಗಲೀಕರಣದ ನೆಪದಲ್ಲಿ ಉರುಳಿಸಿದ್ದಾರೆ ಎಂದು ಈ ಹಿಂದೆ ಸಾಲು ಮರದ ತಿಮ್ಮಕ್ಕ ಆರೋಪಿಸಿದ್ದರು. ಮಾಧ್ಯಮಗಳಲ್ಲಿಯೂ ಕೂಡ ತಿಮ್ಮಕ್ಕ ಅವರು ನೆಟ್ಟು ಬೆಳೆಸಿದ್ದ ಸಾಲು ಮರಗಳ ಬುಡವನ್ನು ರಸ್ತೆ ನಿರ್ಮಾಣಕ್ಕಾಗಿ ಅಗೆಯಲಾಗಿದೆ ಎಂದು ವರದಿಯಾಗಿತ್ತು. ಕುದೂರು ಮತ್ತು ಹುಲಿಕಲ್ ರಸ್ತೆಯ ಎರಡೂ ಬದಿಗಳಲ್ಲಿ ತಿಮ್ಮಕ್ಕ ನೆಟ್ಟು ಬೆಳೆಸಿದ ಮರಗಳು ಬೆಳೆದಿವೆ. ಇಲ್ಲಿ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಸಿದವರು ಮರಗಳ ಬುಡವನ್ನು ಅಗೆದು ಮಣ್ಣು ತೆಗೆದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.
ರಸ್ತೆ ಕಾಮಗಾರಿಯಲ್ಲಿ ಮರಗಳಿಗೆ ಅಪಾಯ ಉಂಟಾಗಬಹುದು ಎಂಬ ಆತಂಕದ ನಡುವೆ ಸರ್ಕಾರ ಕೂಡ ಮರಗಳಿಗೆ ಹಾನಿಯಾಗದಂತೆ ನೋಡಿಕೊಳ್ಳುವಂತೆ ಆದೇಶ ನೀಡಿತ್ತು. ಆದರೆ ಅನೇಕ ಮರಗಳ ಬುಡಗಳಿಂದ ಮಣ್ಣು ತೆಗೆಯಲಾಗಿದೆ. ಇದರ ವಿರುದ್ಧ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿಗೆ ದೂರು ನೀಡುವುದಾಗಿ ತಿಮ್ಮಕ್ಕ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ತಹಶೀಲ್ದಾರ್ ಬಿಜಿ ಶ್ರೀನಿವಾಸ್ ಪ್ರಸಾದ್ ಅವರು ತಿಮ್ಮಕ್ಕ ಅವರ ಉಪಸ್ಥಿತಿಯಲ್ಲಿಯೇ ಅವರು ನೆಟ್ಟು ಬೆಳೆಸಿದ್ದ ಮರಗಳ ಎಣಿಕೆ ಕಾರ್ಯ ನಡೆಸಲು ತೀರ್ಮಾನಿಸಿ, ಅಂತೆಯೇ ಬುಡದಿಂದ ಮಣ್ಣು ತೆಗೆಯಲಾಗಿರುವ ಮರಗಳ ಬುಡಕ್ಕೆ ಮತ್ತೆ ಮಣ್ಣು ಹಾಕಿಸಲಾಯಿತು.
ಧನ್ಯವಾದಗಳು.
brillx официальный сайт
брилкс казино
Ощутите адреналин и азарт настоящей игры вместе с нами. Будьте готовы к захватывающим приключениям и невероятным сюрпризам. Brillx Казино приглашает вас испытать удачу и погрузиться в мир бесконечных возможностей. Не упустите шанс стать частью нашей игровой семьи и почувствовать всю прелесть игры в игровые аппараты в 2023 году!Но если вы готовы испытать настоящий азарт и почувствовать вкус победы, то регистрация на Brillx Казино откроет вам доступ к захватывающему миру игр на деньги. Сделайте свои ставки, и каждый спин превратится в захватывающее приключение, где удача и мастерство сплетаются в уникальную симфонию успеха!
На работе произошла непредвиденная ситуация, и мне срочно понадобились деньги для закупки оборудования. Банки отказывали или предлагали не выгодные условия. В этот момент я узнал про сайт [url=https://credit-info24.ru/]быстрый займ на карту срочно[/url]. Здесь я получил необходимую сумму в кратчайшие сроки и смог решить все проблемы на работе. Сейчас всё стабильно, и я даже получил премию за решение сложной ситуации.
Обновите свой дом с креативным подходом от «СК Сити Строй”
Если вы ищете надежного исполнителя для комплексного ремонта вашего жилища, ООО «СК СИТИ СТРОЙ» предлагает услуги [url=https://remont-siti.ru/]ремонта под ключ[/url]. Это означает, что вам не придется беспокоиться о выборе материалов, поиске рабочих и контроле за процессом — мы берем все эти заботы на себя.
remont-siti.ru зарекомендовал себя как сайт, на котором можно не только ознакомиться с предложенными услугами, но и увидеть портфолио выполненных работ. За годы нашей деятельности мы собрали множество положительных отзывов от благодарных клиентов, что является лучшим доказательством нашего профессионализма.
Приглашаем вас посетить наш офис по адресу: 127055 г. Москва, ул. Новослободская, д. 20, к. 27, оф. 6, чтобы обсудить детали вашего проекта. С ООО «СК СИТИ СТРОЙ» ремонт станет приятным и легким процессом, в конце которого вы получите дом своей мечты.