in

ಯುಗಾದಿ ಹಬ್ಬ ಆಚರಣೆ

ಯುಗಾದಿ ಹಬ್ಬ ಆಚರಣೆ


ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರು ಇದೆ.
ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತೇವೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ,ಅಂದರೆ ಹೊಸಹುಟ್ಟು.
ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು ಏಪ್ರಿಲ್ ೧೪ ಅಥವಾ ೧೫ ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ. ರವಿಚಂದ್ರರ ಗತಿಯನ್ನವಲಂಬಿಸಿ, ೧೧ ರಿಂದ ೧೩ ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ.


ಯುಗಾದಿ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ , ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು. ತಳಿರು ತೋರಣವನ್ನು ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಎಣ್ಣೆ ಸ್ನಾನ ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
ಪಂಚಾಂಗ ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟಾರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.
ಖಣಿ ಇಡುವುದು : ಕರಾವಳಿಯ ಸೌರಮಾನ ಯುಗಾದಿಯ ವಿಶೇಷತೆ ಖಣಿ ಇಡುವುದು. ಬಾಳೆ ಎಲೆ, ತಟ್ಟೆಯಲಿ ಅಕ್ಕಿ ಹಾಕಿ ಅದರ ಮೇಲೆ ತೆಂಗಿನಕಾಯಿ, ಸೌತೇಕಾಯಿ, ರವಿಕೆ ಕಣ, ಹೊಸ ಬಟ್ಟೆ, ಚಿನ್ನ, ಬತ್ತದ ತೆನೆ, ಹಣ್ಣು, ದೇವರ ಪ್ರತಿಮೆ ಅದರ ಮುಂದೆ ಒಂದು ಕನ್ನಡಿ ಇತ್ತು, ಆ ಕನ್ನಡಿಯಲಿ ದೇವರ ಪ್ರತಿಮೆ ಹಾಗೂ ತಟ್ಟೆಯಲಿ ಇಟ್ಟಂತಹ ವಸ್ತುಗಳನ್ನು ಕಾಣುವ ಹಾಗೆ ದೇವರ ಮುಂದೆ ಹಿಂದಿನ ರಾತ್ರಿ ಮಲಗುವ ಮುನ್ನ ಇಡುತ್ತಾರೆ. ಯುಗಾದಿ ಹಬ್ಬದಂದು ಬೆಳಿಗ್ಗೆ ಬೇಗ ಎದ್ದು ದೇವರ ದೀಪ ಹಚ್ಚಿ ಖಣಿಯಲ್ಲಿನ ಕನ್ನಡಿಯಲಿ ದೇವ ದರ್ಶನ ಪಡೆಯುವುದು ಅಂದಿನ ವಿಶೇಷ ನಂತರ ಹಬ್ಬದ ಅಡುಗೆ. ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ.


೧.ಮಹಾವಿಷ್ಣು ಮತ್ಸ್ಯಾವತಾರ ತಾಳಿದ ದಿನವಿದು :

ಯುಗಾದಿ ಹಬ್ಬ ಆಚರಣೆ


ಯುಗಗಳಲ್ಲಿ ಮೊದಲ ಯುಗ ಸತ್ಯಯುಗ. ಇಂತಹ ಮೊದಲ ಯುಗದ ಆರಂಭದ ದಿನವೇ ಯುಗಾದಿ. ಮಹಾ ವಿಷ್ಣುವಿನ ದಶಾವತಾರಗಳಲ್ಲಿ ಮೊದಲನೇ ಅವತಾರ ಮತ್ಸ್ಯಾವತಾರ. ಆ ಆವತಾರವನ್ನು ತಾಳಿದ್ದು ಇದೇ ದಿನವೆಂದು ವೇದಗಳಲ್ಲಿ ಉಲ್ಲೇಖವಾಗಿದೆ. ಬ್ರಹ್ಮನಿಂದ ನಾಲ್ಕು ವೇದಗಳನ್ನು ಕದ್ದಂತಹ ರಕ್ಕಸ ಸೋಮಕಾಸುರ ಸಮುದ್ರದೊಳಗೆ ಅವಿತಿರುತ್ತಾನೆ. ಆಗ ವಿಷ್ಣು ಮತ್ಸ್ಯಾವತಾರವನ್ನ ತಾಳಿ ನೀರಿನಲ್ಲಿ ಅವಿತಿದ್ದ ಸೋಮಕಾಸುರನನ್ನ ಸಂಹರಿಸಿ ನಾಲ್ಕು ವೇದಗಳನ್ನ ಬ್ರಹ್ಮ ದೇವರಿಗೆ ಹಿಂತಿರುಗಿಸುತ್ತಾರೆ. ಹಾಗೆ ಬ್ರಹ್ಮ ದೇವರು ವೇದಗಳನ್ನು ಹಿಂಪಡೆದ ದಿನವೇ ಯುಗಾದಿ.


೨.ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ರಾಮ ರಾಜ್ಯ ಸ್ಥಾಪಿಸಿದ ದಿನ :

ಯುಗಾದಿ ಹಬ್ಬ ಆಚರಣೆ


ಲಂಕೆಗೆ ಹೋಗಿ ರಾವಣನನ್ನು ಸಂಹರಿಸಿ ಸೀತಾ ಸಮೇತ ಶ್ರೀರಾಮಚಂದ್ರರು ಅಯೋಧ್ಯೆಗೆ ಮರಳುತ್ತಾರೆ. ಅಯೋಧ್ಯೆಯಲ್ಲಿ ರಾಜ್ಯಭಾರ ಆರಂಭಿಸುತ್ತಾರೆ. ರಾಮರಾಜ್ಯ ಆರಂಭವಾದ ದಿನವೇ ಯುಗಾದಿಯ ದಿನವೆಂದು ಪುರಾಣಗಳಲ್ಲಿ ಹೇಳಲಾಗಿದೆ. ದ್ವಾಪರ ಯುಗವು ಕೊನೆಯಾಗಿ ಯುಗಾದಿಯ ದಿನ ಕಲಿಯುಗವು ಆರಂಭವಾಯಿತೆಂದು ವೇದವ್ಯಾಸರು ತಮ್ಮ ಗ್ರಂಥದಲ್ಲಿ ವಿವರಿಸಿದ್ದಾರೆ. ಶಾಸ್ತ್ರಗಳ ಪ್ರಕಾರ, ವೇದಗಳ ಪ್ರಕಾರ ಯುಗಾದಿಯು ಹೊಸ ವರ್ಷದ ಮೊದಲ ದಿನವಾಗಿದೆ. ಬಹಳಷ್ಟು ಶ್ರೇಷ್ಠತೆಯಿಂದ ಕೂಡಿದೆ. ನಾನಾ ಪ್ರಥಮಗಳಿಗೆ ಸಾಕ್ಷಿಯಾಗಿದೆ.
ಯುಗ ಯುಗಗಳಿಂದ ಆಚರಿಸಿಕೊಂಡು ಬರುತ್ತಿರುವ ಪ್ರಕೃತಿಯಲ್ಲಿ, ಜೀವ ಸಂಕುಲದಲ್ಲಿ ಬದಲಾವಣೆ ತರುವ ಯುಗಾದಿ ಹಬ್ಬದ ಆಚರಣೆಯನ್ನ ಯಾವ ರೀತಿ ಮಾಡಬೇಕು. ಆದಿಕಾಲದಿಂದಲೂ ಪಾಲಿಸಕೊಂಡು ಬರುತ್ತಿರುವ ನಿಯಮಗಳೇನು, ಆಚರಣೆಗಳೇನು, ಅವುಗಳನ್ನು ಹೇಗೆ ಆಚರಿಸಬೇಕೆಂಬುದರ ಬಗ್ಗೆ ಧರ್ಮಗ್ರಂಥಗಳಲ್ಲಿ , ಶಾಸ್ತ್ರಗಳಲ್ಲಿ ವಿವರಿಸಲಾಗಿದೆ.


ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

57 Comments

  1. 1. Вибір натяжних стель – як правильно обрати?
    2. Топ-5 популярних кольорів натяжних стель
    3. Як зберегти чистоту натяжних стель?
    4. Відгуки про натяжні стелі: плюси та мінуси
    5. Як підібрати дизайн натяжних стель до інтер’єру?
    6. Інноваційні технології у виробництві натяжних стель
    7. Натяжні стелі з фотопечаттю – оригінальне рішення для кухні
    8. Секрети вдалого монтажу натяжних стель
    9. Як зекономити на встановленні натяжних стель?
    10. Лампи для натяжних стель: які вибрати?
    11. Відтінки синього для натяжних стель – ексклюзивний вибір
    12. Якість матеріалів для натяжних стель: що обирати?
    13. Крок за кроком: як самостійно встановити натяжні стелі
    14. Натяжні стелі в дитячу кімнату: безпека та креативність
    15. Як підтримувати тепло у приміщенні за допомогою натяжних стель
    16. Вибір натяжних стель у ванну кімнату: практичні поради
    17. Натяжні стелі зі структурним покриттям – тренд сучасного дизайну
    18. Індивідуальність у кожному домашньому інтер’єрі: натяжні стелі з друком
    19. Як обрати освітлення для натяжних стель: поради фахівця
    20. Можливості дизайну натяжних стель: від класики до мінімалізму
    натяжні [url=http://natjazhnistelitvhyn.kiev.ua/]http://natjazhnistelitvhyn.kiev.ua/[/url] .

ಕಾರ್ಣಿಕ ದೈವ ಕೊರಗಜ್ಜ

ಕಾರ್ಣಿಕ ದೈವ ಕೊರಗಜ್ಜ

ರಾಜ ವಿಕ್ರಮಾದಿತ್ಯ

ವಿಕ್ರಮ ಬೇತಾಳ ಕಥೆಯ ರಾಜ ವಿಕ್ರಮಾದಿತ್ಯನ ಸಾಮ್ರಾಜ್ಯ