in

ಹೆಸರಿನಲ್ಲಿದೆ ಅಮೃತ, ಬಳ್ಳಿಯಲ್ಲಿದೆ ಅಮೃತದ ಗುಣ : ಅಮೃತ ಬಳ್ಳಿ

ಅಮೃತ ಬಳ್ಳಿ
ಅಮೃತ ಬಳ್ಳಿ

ಹೌದು ಹೆಸರೇ ಸೂಚಿಸುವಂತೆ ಅಮೃತ ಬಳ್ಳಿಯಲ್ಲಿದೆ ಅದ್ಭುತವಾದ ಔಷಧೀಯ ಗುಣ.ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ. ಇದು ಮೆನಿಸ್ಪರ್ಮೇಸೀ ಕುಟುಂಬಕ್ಕೆ ಸೇರಿದ ಒಂದು ಹಸುರು ಬಳ್ಳಿ. ಈ ಸಸ್ಯವು ನುಣುಪಾದ ಪೊದೆ ಆಗಿದೆ. ವಿಶಿಷ್ಟವಾಗಿ ಪರ್ಣಪಾತಿ ಹಾಗೂ ಒಣ ಕಾಡುಗಳಲ್ಲಿ ಬೆಳೆಯುತ್ತದೆ. ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ.

ಇದು ನಮ್ಮ ಮನೆಯಂಗಳದಲ್ಲಿ ಸುಲಭವಾಗಿ ಬೆಳೆಸಬಹುದಾದ ಔಷಧೀಯ ಬಳ್ಳಿ. ಇದರ ಕಾಂಡ, ಎಲೆ, ಬೇರು ಎಲ್ಲವೂ ಔಷಧೀಯ ಗುಣ ಹೊಂದಿವೆ. ಇದರ ಕಾಂಡದ ಒಂದು ತುಂಡನ್ನು ಮಣ್ಣಿನಲ್ಲಿ ನೆಟ್ಟರೆ ಬಳ್ಳಿಯ ರೂಪದಲ್ಲಿ ಹಬ್ಬುತ್ತದೆ. ಇದು ಬಾಡಿ ಒಣಗುವುದಿಲ್ಲ; ಸುಲಭದಲ್ಲಿ ಸಾಯುವುದಿಲ್ಲ. ಆದ್ದರಿಂದಲೇ ಇದಕ್ಕೆ ’ಅ- ಮೃತ’ ಎಂಬ ಹೆಸರು. ಬಳ್ಳಿಯನ್ನು ಮನೆಯ ಎದುರು ಚಪ್ಪರದಂತೆ ಹಬ್ಬಿಸಬಹುದು.ಇದರ ತೊಗಟೆಯ ಬಣ್ಣ ಬೂದಿಮಿಶ್ರಿತ ಕಂದು ಬಣ್ಣ. ಹೂಗಳ ಬಣ್ಣ ಹಸಿರು ಮಿಶ್ರಿತ ಹಳದಿ. ಕಾಯಿಯು ಮಾಗಿದಾಗ ಗಾಢ ಕೆಂಪು ಬಣ್ಣದ ದುಂಡಗಿನ ಹಣ್ಣಾಗುತ್ತದೆ. ಅಮೃತಬಳ್ಳಿಯು ಮರಗಳ ಮೇಲೆ ತೋಟಗಳ ಬೇಲಿಗಳ ಮೇಲೆ ಹಬ್ಬಿರುತ್ತದೆ ಹಾಗೂ ಕಾಡುಗಳಲ್ಲಿ ಪೊದೆಗಳ ಮೇಲೂ ಸಹ ಹಬ್ಬಿರುತ್ತದೆ. ಇದರ ಪತ್ರೆ ಹಸಿರು ಮತ್ತು ಹೃದಯಾಕಾರವಾಗಿರುತ್ತದೆ, ಮೃದುವಾಗಿರುತ್ತದೆ. ಕಾಂಡದ ಮೇಲೆ ತೆಳು ಪೊರೆಯಿರುತ್ತದೆ ಮತ್ತು ದಾರಗಳಂತೆ ಕಾಂಡದ ಭಾಗಗಳು ಇಳಿಬಿದ್ದಿರುತ್ತದೆ. ಪ್ರತಿಭಾಗವೂ ಕಹಿಯಾಗಿರುತ್ತದೆ. ಬೇವಿನಮರದ ಮೇಲೆ ಹಬ್ಬಿರುವ ಬಳ್ಳಿಯು ಅತೀ ಶ್ರೇಷ್ಟವಾದುದು. ಹೂಗಳು ಹಸಿರು ಬಣ್ಣದವು. ಹೂ ಬಿಡುವ ಕಾಲ ಫೆಬ್ರವರಿ. ದೊಡ್ಡ ದೊಡ್ಡ ಬಂಗಲೆಗಳ ಮುಂದೆ, ಪ್ರವಾಸಿ ಮಂದಿರಗಳ ಮುಂದೆ ಚಪ್ಪರ ಹಾಕಿ ಬಳ್ಳಿಯನ್ನು ನೆಡುತ್ತಾರೆ ಮತ್ತು ಥಂಡಿಸಡಕ್ ಅಥವಾ ಶೀತದ್ವಾರ ನಿರ್ಮಿಸುತ್ತಾರೆ. ಈ ಬಳ್ಳಿಯ ಮೇಲೆ ಬೀಸಿ ಬರುವ ಗಾಳಿ ಅಮೃತ ಸಮಾನವಾದುದು ಮತ್ತು ಈ ಬಳ್ಳಿಯಡಿಯಲ್ಲಿ ನಿಲ್ಲುವ ಅಥವಾ ಸಾಗುವ ಮನುಷ್ಯ, ಎತ್ತಿನಗಾಡಿ, ಪಶು-ಪಕ್ಷಿಗಳು ಮತ್ತು ಈಗಿನ ಆಧುನಿಕ ವಾಹನಗಳು ಅಪಘಾತಗಳಿಂದ ಸುರಕ್ಷಿತವಾಗಿರುವವು ಎನ್ನುವ ನಂಬಿಕೆಯಿದೆ.

ಹೆಸರಿನಲ್ಲಿದೆ ಅಮೃತ, ಬಳ್ಳಿಯಲ್ಲಿದೆ ಅಮೃತದ ಗುಣ : ಅಮೃತ ಬಳ್ಳಿ
ಅಮೃತ ಬಳ್ಳಿ

ಇದು ತ್ರಿದೋಷಗಳಿಂದ ಅಂದರೆ ವಾತ, ಪಿತ್ತ, ಕಫ ಉಂಟಾದ ತೊಂದರೆಗಳನ್ನು ನಿವಾರಿಸುತ್ತದೆ. ಎಲ್ಲ ಬಗೆಯ ಜ್ವರಗಳಿಗೂ ಅಮೃತ ಬಳ್ಳಿ ಪರಿಣಾಮಕಾರಿ ಔಷಧಿ. ಅಮೃತ ಬಳ್ಳಿಯ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆ ,ಆಹಾರ ಸೇವನೆಗೆ ಮುಂಚೆ ಸೇವಿಸಬೇಕು. ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಧೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು. ಸಂಬಾರ ಬಳ್ಳಿ, ಅಮೃತ ಬಳ್ಳಿ ಎಲೆ, ಮಜ್ಜಿಗೆ ಸೊಪ್ಪು, ತುಳಸಿ,ಲವಂಗ ತುಳಸಿ, ಅರಸಿನ ಪುಡಿ ,ಕಾಳುಮೆಣಸು,ಜೀರಿಗೆ,ಶುಂಠಿ. ಇದರ ಐದಾರು ಎಲೆಗಳನ್ನು ಪ್ರತಿನಿತ್ಯ ಸೇವಿಸಬಹುದು. ಎಲೆಯು ಸ್ವಲ್ಪ ಕಹಿ ಮತ್ತು ಒಗರಿನಿಂದ ಕೂಡಿದೆ. ಎಲೆ ಮತ್ತು ಕಾಂಡದಿಂದ ತಂಬುಳಿ ತಯಾರಿಸಬಹುದು. ಎಲೆ ಮತ್ತು ಕಾಂಡವನ್ನು ಜೀರಿಗೆಯೊಂದಿಗೆ ನುಣ್ಣಗೆ ಅರಿಯಬೇಕು. ಅದಕ್ಕೆ ಮಜ್ಜಿಗೆ ಸೇರಿಸಿ ಸಾಸಿವೆ ಒಗ್ಗರಣೆ ಕೊಟ್ಟರೆ ತಂಬುಳಿ ತಯಾರು. ಈ ಬಳ್ಳಿಯ ಮೇಲೆ ಬೀಸಿ ಬರುವ ಗಾಳಿಯು ಆರೋಗ್ಯಕ್ಕೆ ಹಿತಕಾರಿ ಮತ್ತು ಮನೆಗೆ ತಂಪು.

ಎಲ್ಲಾ ಬಗೆಯ ಜ್ವರಗಳಲ್ಲಿಯೂ ಅಮೃತಬಳ್ಳಿಯು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಮಧುಮೇಹ ರೋಗಕ್ಕೆ ಔಷಧಿಯಾಗಿ ಬಳಸುತ್ತಾರೆ.
ಅದರ ತಜಾ ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು ೨ ಚಮಚ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕೆ ೩ ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.

ಅಮೃತಬಳ್ಳಿಯ ಚೂರ್ಣ ಅರ್ಧ ಟೀ ಚಮಚದಷ್ಟೇ ಒಂದೆರಡು ಮೆಣಸು ಕಾಳಿನ ಪುಡಿ ಸೇರಿಸಿ ಬಿಸಿ ನೀರಿನಲ್ಲಿ ಕದಡಿ ದಿವಸಕ್ಕೆ ಎರಡು ವೇಳೆ ಸೇವಿಸುವುದು.

ಸ್ಮರಣ ಶಕ್ತಿಗೆ
ಶತಾವರಿ ಶುಂಠಿ ವಾಯುವಿಳಂಗ ಬಜೆ, ಬ್ರಾಹ್ಮಿ ಅಳಲೆಕಾಯಿ ಉತ್ತರಾಣೆ ಮತ್ತು ಸಮಭಾಗ ಅಮೃತಬಳ್ಳಿ ಸೇರಿಸಿ ನಯವಾದ ಚೂರ್ಣ ಮಾಡಿಟ್ಟುಕೊಳ್ಳುವುದು. ಅರ್ಧ ಟೀ ಚಮಚ ಚೂರ್ಣಕ್ಕೆ ಸ್ವಲ್ಪ ತುಪ್ಪ ಸೇರಿಸಿ ನೆಕ್ಕುವುದು. ಮೇಲೆ ಕೆಂಪು ಕಲ್ಲುಸಕ್ಕರೆ ಹಾಕಿರುವ ಬಿಸಿ ಹಾಲನ್ನು ಕುಡಿಯುವುದು. ದೂರವಾಣಿ ಸಂಖ್ಯೆಗಳನ್ನಾಗಲಿ ಅಥವಾ 15ರಿಂದ 19ರ ತನಕ ಮಗ್ಗಿಯನ್ನು ನೆನಪಿನಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸುವುದು ಕೆಲವೇ ತಿಂಗಳಲ್ಲಿ ಫಲ ದೊರೆಯುವುದು.

ಅಮೃತಬಳ್ಳಿ ತಾಮ್ರ, ಕಬ್ಬಿಣ, ರಂಜಕ, ಸತು, ಕ್ಯಾಲ್ಸಿಯಂ, ಮೆಗ್ನೀಷಿಯಮ್ ಮತ್ತು ಅನೇಕ ಆಂಟಿ-ಆಕ್ಸಿಡೆಂಟ್, ಉರಿಯೂತ, ಕ್ಯಾನ್ಸರ್ ವಿರೋಧಿ ಗುಣಗಳಿಂದಲೂ ಕೂಡಿದೆ. ಈ ಎಲ್ಲಾ ಅಂಶಗಳು ಒಟ್ಟಾಗಿ ಎಲ್ಲಾ ರೀತಿಯ ಕಾಯಿಲೆಗಳಿಂದ ದೂರವಿರಿಸುತ್ತದೆ.

ಬಾಯಾರಿಕೆ, ವಾಂತಿ, ವಾಕರಿಕೆ
ಸುಮಾರು 25 ಗ್ರಾಂನಷ್ಟು ಅಮೃತಬಳ್ಳಿಯನ್ನು ಅರೆದು ಶುದ್ಧವಾದ ನೀರು ಹಾಕಿ ಕಾಯಿಸಿ ಕಷಾಯ ಮಾಡಿಟ್ಟುಕೊಳ್ಳುವುದು. ದಿನಕ್ಕೆ ಮೂರು ವೇಳೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯುವುದು.

ಮೂತ್ರನಾಳದಲ್ಲಿ ಕಲ್ಲು
ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಯ ಸಮತೂಕ ನಯವಾಗಿ ಚೂರ್ಣ ಮಾಡಿಟ್ಟುಕೊಳ್ಳುವುದು. 10ಗ್ರಾಂನಷ್ಟು ಚೂರ್ಣವನ್ನು ಶುದ್ಧ ನೀರು ಹಾಕಿ ಕಷಾಯ ಮಾಡಿ ವೇಳೆಗೆ ಒಂದು ಟೀ ಚಮಚದಷ್ಟು ಕುಡಿಸುವುದು.

ಯಕೃತ್ತಿಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಅಮೃತ ಬಳ್ಳಿ ಗುಣಪಡಿಸುವುದು. ಹೊಟ್ಟೆ ಉಬ್ಬರ, ಹೊಟ್ಟೆ ಕಿವುಚಿದಂತಾಗುವುದು, ಹೊಟ್ಟೆ ಉರಿಯಂತಹ ಸಮಸ್ಯೆಗಳನ್ನು ಬಹುಬೇಗ ನಿವಾರಣೆ ಮಾಡುವುದು.

ಹೆಸರಿನಲ್ಲಿದೆ ಅಮೃತ, ಬಳ್ಳಿಯಲ್ಲಿದೆ ಅಮೃತದ ಗುಣ : ಅಮೃತ ಬಳ್ಳಿ
ಅಮೃತ ಬಳ್ಳಿ

ಮೈಮೇಲೇಳುವ ಪಿತ್ತದ ಗಂಧೆಗಳು
ಅಮೃತಬಳ್ಳಿಯ ಎಲೆ ಸಾಸಿವೆ ಶ್ರೀಗಂಧದ ಚಕ್ಕೆ ಇವುಗಳ ಸಮತೂಕವನ್ನು ಎಮ್ಮೆಯ ಹಾಲಿನಲ್ಲಿ ಅರೆದು ಮೈಗೆ ಹಚ್ಚುವುದು. ಪಿತ್ತ ವಿಕಾರ ಕಡಿಮೆ ಆಗಿ ಪಿತ್ತದ ಗಂಧೆಗಳು ಮತ್ತು ನೆವೆ ಉರಿ ಶಮನವಾಗುವುದು.

ಹೊಟ್ಟೆ ಉರಿ
ಹಸಿಸೊಪ್ಪಿನ ರಸ 2 ಟೀ ಚಮಚದಷ್ಟು ಸ್ವಲ್ಪ ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯುವುದು.

ದೃಷ್ಟಿ ದೋಷ ಅಥವಾ ದೃಷ್ಟಿ ಮಾಂದ್ಯ ಸಮಸ್ಯೆಗಳಿಗೆ ಅಮೃತ ಬಳ್ಳಿ ಅತ್ಯುತ್ತಮ ಚಿಕಿತ್ಸೆ ನೀಡುವುದು.ಚಿಕ್ಕ ಮಕ್ಕಳಲ್ಲಿ ದೃಷ್ಟಿ ದೋಷ ಇರುವವರು ಈ ಔಷಧವನ್ನು ಸೇವಿಸುವುದಿಂದ ದೃಷ್ಟಿ ದೋಷ ಬಹುಬೇಗ ನಿವಾರಣೆಯಾಗುವುದು.

ವಾತ ಜ್ವರದಲ್ಲಿ
ಅಮೃತಬಳ್ಳಿ ತ್ರಫಲ ಚೂರ್ಣ, ತುಂಗೇಗುಡ್ಡೆ ಕೊತ್ತಂಬರಿ, ಶತಾವರಿ, ಕಳ್ಳಂಗಡಲೆ ಮತ್ತು ಬೇಲದ ಬೇರು ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳುವುದು. ಸ್ವಲ್ಪ ಚೂರ್ಣಕ್ಕೆ ಎರಡು ಬಟ್ಟಲು ನೀರು ಹಾಕಿ ಕಾಯಿಸಿ ಅರ್ಧ ಬಟ್ಟಲು ಕಷಾಯವನ್ನು ಮಾಡಿ ಆರಿಸಿ ಕುಡಿಯುವುದು.

ಬುದ್ಧಿ ಭ್ರಮಣೆಗೆ
ಹಸಿ ಅಮೃತಬಳ್ಳಿಯನ್ನು ತಂದು ತಣ್ಣನೆಯ ಹಾಲಿನಲ್ಲಿ ನುಣ್ಣನೆ ರುಬ್ಬಿ ತಲೆಗೆ ಪಟ್ಟು ಹಾಕುವುದು. ಒಂದೆರಡು ತಾಸುಗಳ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದು.

ದೃಷ್ಟಿಮಾಂದ್ಯದಲ್ಲಿ
ಅಮೃತಬಳ್ಳಿ ತ್ರಿಫಲ ಚೂರ್ಣ, ಹಿಪ್ಪಲಿ ಸಮ ಪ್ರಮಾಣ ಸೇರಿಸಿ ಜಜ್ಜಿ ಕಷಾಯ ಮಾಡುವುದು. ಅರ್ಧ ಬಟ್ಟಲು ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿಯುವುದು.

ಅಮೃತ ಬಳ್ಳಿಯ ಚಪ್ಪರದ ಕೆಳಗೆ ನಿತ್ಯವೂ ಸ್ವಲ್ಪ ಹೊತ್ತು ಕುಳಿತುಕೊಂಡರೂ ಸಾಕು ತಲೆಕೂದಲಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಯಾಗುವುದು. ಜೊತೆಗೆ ಕೂದಲು ಸೊಂಪಾಗಿ ಬೆಳೆಯುವುದು. ಅಮೃತ ಬಳ್ಳಿಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಕೂದಲ ಸಮಸ್ಯೆ ನಿವಾರಿಸಿಕೊಳ್ಳಬಹುದು.

ಬೊಜ್ಜು ಮತ್ತು ಕೊಬ್ಬು ಕಡಿಮೆ ಆಗಲು, ಆಯಸ್ಸು ಹೆಚ್ಚಲು
ಇದು ಪರಿಣಾಮಕಾರಿ ಔಷಧಿ. ಮೇಲಿನ ಕಷಾಯಕ್ಕೆ ಒಂದು ಗುಲಗಂಜಿಯಷ್ಟು ಲೋಹ ಭಸ್ಮವನ್ನು ಮತ್ತು ಟೀ ಚಮಚ ಜೇನು ತುಪ್ಪವನ್ನು ಕೂಡಿಸಿ ಸೇವಿಸುವುದು. ಸುಮಾರು 40 ದಿವಸ ಅರಳ ಅಂಗಸಾಧನೆ, ಕೊಬ್ಬು ರಹಿತ ಆಹಾರ, ತಣ್ಣೀರು ಸ್ನಾನ ಮತ್ತು ದೀರ್ಘ ನಡಿಗೆ ಅಭ್ಯಾಸ ಮಾಡಿಕೊಳ್ಳುವುದು.

ಸ್ತ್ರೀಯರ ರಕ್ತ ಪ್ರದರಕ್ಕೆ
20ಗ್ರಾಂ ಹಸಿ ಅಮೃತಬಳ್ಳಿಯ ರಸಕ್ಕೆ ಒಂದು ಟೀ ಚಮಚದಷ್ಟು ಸಕ್ಕರೆ ಬೆರೆಸಿ ದಿವಸಕ್ಕೆ ಎರಡು ವೇಳೆ ಸೇವಿಸುವುದು.

ಅಮೃತ ಬಳ್ಳಿಯು ಅಪಾಯಕಾರಿ ಜ್ವರಗಳಾದ ಡೆಂಗ್ಯೂ, ಹಂದಿ ಜ್ವರ, ಮಲೇರಿಯಾದಂತಹ ಹಲವಾರು ಮಾರಣಾಂತಿಕ ಪರಿಸ್ಥಿತಿಗಳ ಚಿಹ್ನೆ ಮತ್ತು ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ಉರಿ ಮೂತ್ರದಲ್ಲಿ
ಅಮೃತಬಳ್ಳಿ ನಯವಾದ ಚೂರ್ಣವನ್ನು ಹಸುವಿನ ಹಾಲಿನಲ್ಲಿ ಕದಡಿ ದಿವಸಕ್ಕೆ ಎರಡು ಬಾರಿ ಸೇವಿಸುವುದು ಅಥವಾ ಮಜ್ಜಿಗೆಯಲ್ಲಿ ತೆಗೆದುಕೊಳ್ಳುವುದು, ಪ್ರಮಾಣ ಒಂದು ಗ್ರಾಂ ವೇಳೆಗೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಖರ್ಜೂರ

ಖರ್ಜೂರ ತಿನ್ನುವುದರಿಂದ ಏನು ಲಾಭ ಇದೆ?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕೀಲಾಡಿಗಳು ಖ್ಯಾತಿಯ ನಟ ಸದಾನಂದ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕೀಲಾಡಿಗಳು ಖ್ಯಾತಿಯ ನಟ ಸದಾನಂದ.