ಲಾಲ್ ಬಹದ್ದೂರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ – ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು. ಗಾಂಧೀಜಿಯವರ ಜನ್ಮದಿನದಂದೇ ಇವರ ಜನ್ಮ ದಿನವೂ ಸಹ. ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿಯಾಗಿದ್ದರು. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ, ದೇಶಾಭಿಮಾನ ಕೂಡ ತಲೆದೂಗುವಂಹತದ್ದು. ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಇವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು. ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ.
1930ರ ನಂತರ ಶಾಸ್ತ್ರೀಜಿಯವರು ಸಂಪೂರ್ಣವಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದರು. ಸ್ವಾತಂತ್ರ್ಯದ ಕನವರಿಕೆಯಲ್ಲಿ ಶಾಸ್ತ್ರೀಜಿಯವರು ಸ್ವಂತ ಮನೆಯನ್ನೇ ಮರೆಯಬೇಕಾಯಿತು. ಒಮ್ಮೆ ಶಾಸ್ತ್ರೀಜಿಯವರು ಸೆರೆಮನೆಯಲ್ಲಿದ್ದಾಗ ಅವರ ಮಗಳು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿದ ಜೈಲಾಧಿಕಾರಿಗಳು ಶಾಸ್ತ್ರೀಜಿಯವರನ್ನು ಹದಿನೈದು ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಿ ಮನೆಗೆ ಕಳಿಸಿದರು. ಶಾಸ್ತ್ರೀಜಿಯವರು ಮನೆಗೆ ಬರುವ ವೇಳೆಗಾಗಲೇ ಮಗಳು ತೀರಿಕೊಂಡಿದ್ದಳು. ಕಾರಣ ವೈದ್ಯರು ಆಕೆಗೆ ಕೆಲವು ಔಷಧಗಳನ್ನು ಬರೆದುಕೊಟ್ಟಿದ್ದರು. ಆಗಿನ ಕಾಲಕ್ಕೆ ಆ ಔಷಗಳು ತೀರಾ ದುಬಾರಿಯಾಗಿತ್ತು. ಶಾಸ್ತ್ರೀಜಿಯವರ ಬಳಿಯಾಗಲಿ ಅಥವಾ ಅವರ ಶ್ರೀಮತಿಯವರ ಬಳಿಯಾಗಲೀ ಆ ಔಷಧಗಳನ್ನು ಕೊಂಡುಕೊಳ್ಳುವಷ್ಟು ಹಣವಿರಲಿಲ್ಲ. ಶಾಸ್ತ್ರೀಜಿ ಮಗಳ ಅಂತ್ಯ ಸಂಸ್ಕಾರ ಮುಗಿಸಿ ಪೆರೋಲ್ ಅವಧಿಗೂ ಮುನ್ನವೇ ಮತ್ತೆ ಸೆರೆಮನೆ ಸೇರಿದರು.
ಜನವರಿ 11. ನಮ್ಮ ದೇಶ ಶಾಸ್ತ್ರೀಜಿ ಅಂತಹ ಮಹಾನ್ ನಾಯಕರನ್ನು ಕಳೆದುಕೊಂಡ ದಿನ. ನಿರ್ಲಕ್ಷ್ಯಕ್ಕೊಳಗಾಗಿರುವ ಈ ಸರಳ, ಸಜ್ಜನ ಮಹಾಪುರುಷರನ್ನು ನಾವು ಮತ್ತೆ ಸ್ಮರಿಸಬೇಕಿದೆ…..
ಹೀಗೆ ಬದುಕಿದ್ದರು ನಮ್ಮ ಲಾಲ್ ಬಹದ್ದೂರ್ ಶಾಸ್ತ್ರೀಜಿ!!
ಅವತ್ತು ಅಪ್ಪಿತಪ್ಪಿ ಮತ್ತೆ ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ, ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು. ಈ ಅನಾಹುತದಿಂದ ಎಚ್ಚೆತ್ತ ಪಾಕಿಸ್ತಾನ ಅಮೇರಿಕಾದ ಮುಂದೆ ಮಂಡಿಯೂರಿ ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು. ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು. ಆ ಗೋಧಿಯ ಗುಣಮಟ್ಟ ಹೇಗಿತ್ತೆಂದರೆ, ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು. ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು ಜವಾಹರಲಾಲ್ ನೆಹರು. ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ, ಭಾರತಕ್ಕೆ ಗೋಧಿಯ ರಫ್ತನ್ನು ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು. ತಕ್ಷಣವೇ ಶಾಸ್ತ್ರೀಜಿಯವರಿಂದ ಅಮೆರಿಕಾಕ್ಕೆ ರವಾನೆಯಾದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ, ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ, ದುಡ್ಡು ಕೊಟ್ಟು ನಿಮ್ಮ ಕಳಪೆ ಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ, ಹಸಿವಿನಿಂದ ಸಾಯುವುದೇ ವಾಸಿ. ಇಂದಿನಿಂದ ನಿಮ್ಮ ಗೋಧಿ ನಮಗೆ ಬೇಕಿಲ್ಲ ಎಂದು ಶಾಸ್ತ್ರೀಜಿಯವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾ, “ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ. ದೇಶಕ್ಕೆ ಅಮೇರಿಕಾದಿಂದ ಗೋಧಿ ಆಮದಾಗುವುದು ನಿಂತಿದೆ. ದೇಶದ ಜನ ಸಹಕರಿಸಬೇಕಿದೆ, ಒಂದೋ ನೀವು ನೇರವಾಗಿ ಸೇನೆಗೆ ಧನ, ಆಹಾರದ ಸಹಾಯವನ್ನು ಮಾಡಬಹುದು ಅಥವಾ ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬೇಕು. ಇದರಿಂದ ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು. ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು” ಇವರ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆ ದೇಶದ ಜನಮನವನ್ನು ತಲುಪಿತು.
ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು. ಹಲವರು ಸೇನೆಗೆ ಸಹಾಯ ಮಾಡಿದರು. ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು. ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು. ಶಾಸ್ತ್ರೀಜಿಯವರ ಪತ್ನಿ, ಲಲಿತಾದೇವಿಯವರು ಅನಾರೋಗ್ಯ ಪೀಡಿತರಾಗಿದ್ದರು. ಮನೆಗೆಲಸಕ್ಕೆಂದು ಕೆಲಸದವಳೊಬ್ಬಳು ಬರುತ್ತಿದ್ದಳು. ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದರು. ಆಕೆ ”ಅಲ್ಲ, ನಿಮ್ಮ ಬಟ್ಟೆಯನ್ನು ತೊಳೆಯುವುದು, ಮನೆಯನ್ನು ಸ್ವಚ್ಛಗೊಳಿಸುವುದು, ನಿಮ್ಮ ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ ಎಂದು ಕೇಳಿದಳು. “ದೇಶಕ್ಕಾಗಿ ಇದು ಅನಿವಾರ್ಯವಮ್ಮಾ. ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು. ದೇಶದ ಒಳಿತಿಗಾದೀತು” ಎಂದು ಹೇಳಿದರು. ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ ನಿಭಾಯಿಸುತ್ತಿದ್ದರು. ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು. ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.” ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,” ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ. ಇಂಗ್ಲೀಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ” ಎಂದರು.
ಒಂದು ದಿನ ಶಾಸ್ತ್ರೀಜಿಯವರ ಪತ್ನಿ, ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?” ಎಂದು ಕೇಳುತ್ತಾರೆ. ”ಅದನ್ನು ಕೊಳ್ಳಲು ಹಣವೆಲ್ಲಿದೆ? ಬರುವ ಸಂಬಳವನ್ನೂ ಬಿಟ್ಟಾಗಿದೆ. ಮನೆಯ ಖರ್ಚುಗಳನ್ನು ಕಡಿಮೆ ಮಾಡು” ಎಂದಿದ್ದರು.
ಲಾಲ್ ಬಹದ್ದೂರ್ ಶಾಸ್ತ್ರಿಜಿ ದೇಶದ ಪ್ರಧಾನಮಂತ್ರಿ ಆಗಿದ್ದಾಗ ಫಿಯಟ್ ಕಾರ್ ಖರೀದಿ ಮಾಡಲು ಪಿ ನ್ ಬಿ ಬ್ಯಾಂಕಲ್ಲಿ 5 ಸಾವಿರ ರೂಪಾಯಿ ಸಾಲ ಮಾಡಿದ್ರಂತೆ. ಅವರ ಅಕಾಲಿಕ ಮರಣದ ಬಳಿಕ ಪಿ ನ್ ಬಿ ಬ್ಯಾಂಕ್ ಅವರ ಸಾಲವನ್ನು ಮನ್ನಾ ಮಾಡಲು ಮುಂದಾಯಿತು. ಇದನ್ನು ಶಾಸ್ತ್ರಿಜಿಯ ಪತ್ನಿ ನಯವಾಗಿ ತಿರಸ್ಕರಿಸಿ ತನ್ನ ಗಂಡನ ಪೆನ್ಶನ್ ಹಣದಲ್ಲಿ ಆ 5 ಸಾವಿರವನ್ನು ಕಂತಿನ ಮೂಲಕ ಪಾವತಿ ಮಾಡಿದ್ರಂತೆ. ತಮ್ಮ ನಡೆ ನುಡಿಗಳಿಂದ ಇತರರಿಗೆ ಮಾದರಿಯಾಗಿ ಬದುಕಿದ ಪ್ರಧಾನಿ.
ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ವಿದೇಶದ ನೆಲದಲ್ಲಿ ಯಾವ ಕಾರಣದಿಂದಾಗಿ ನಿಧನ ಹೊಂದಿದರು ಎಂಬ ಬಗ್ಗೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಹಾಕುವ ಸಲುವಾಗಿ ಉಜ್ಬೇಕಿಸ್ತಾನದ ತಾಷ್ಕೆಂಟ್ಗೆ ಹೋಗಿದ್ದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಅಲ್ಲಿಯೇ ನಿಗೂಢವಾಗಿ ಸಾವಿಗೀಡಾಗಿದ್ದರು.ಶಾಸ್ತ್ರಿ ಅವರು ವಿದೇಶಿ ನೆಲದಲ್ಲಿ ಸಾವಿಗೀಡಾದ ಭಾರತದ ಮೊದಲ ಪ್ರಧಾನಿಯಾಗಿದ್ದರು. ಇವರಿಗೆ ಮರಣಾನಂತರ ಭಾರತ ರತ್ನವನ್ನು ಪ್ರಧಾನ ಮಾಡಲಾಯಿತು.
GIPHY App Key not set. Please check settings