ನಮಗೆ ಸ್ವತಂತ್ರ ಸಿಗಲು ಹಲವಾರು ಮಂದಿಯ ತ್ಯಾಗ ಬಲಿದಾನ ಮುಖ್ಯವಾಗಿತ್ತು. ಅದರಲ್ಲಿ ಕೆಲವೊಂದು ವೀರ ಮಹಿಳೆಯರು ಕೂಡ ಇದ್ದರು. ತಾನು ಮಹಿಳೆ ತನಗೆ ಗಂಡಸಿನ ಸಾಮಾನ ಹೋರಾಡಲು ಸಾಧ್ಯವಿಲ್ಲ ಎಂದು ಕೈ ಕಟ್ಟಿ ಕುಳಿತಿಲ್ಲ. ತಮ್ಮ ಶಕ್ತಿಯಿಂದ ಶತೃಪಡೆಗಳಲ್ಲಿ ಭಯ ಹುಟ್ಟಿಸಿದ್ದರು. ಅಂತ ವೀರ ಮಹಿಳೆಯರಲ್ಲಿ ಒಬ್ಬರು ನಮ್ಮ ಕಿತ್ತೂರಿನ ರಾಣಿ ಚೆನ್ನಮ್ಮ.
ಕಿತ್ತೂರು ರಾಣಿ ಚನ್ನಮ್ಮ , ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ನಡೆಸಿದ ಹೋರಾಡಿದ್ದಳು. ಈಗಲೂ ಚನ್ನಮ್ಮನಿಂದ ಕಿತ್ತೂರು ಪ್ರಸಿದ್ಧವಾಗಿದೆ. ಚೆನ್ನಮ್ಮನ ಹೆಸರಿನಿಂದಲೇ ಕಿತ್ತೂರು ಗುರುತಿಸಲ್ಪಡುವುದು.
ಕಿತ್ತೂರು ಚೆನ್ನಮ್ಮ ಹುಟ್ಟಿದ್ದು 23 ಅಕ್ಟೋಬರ್ 1778ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು 6 ಕಿ.ಮಿ. ದೂರದಲ್ಲಿರುವ ಕಾಕತಿ ಅವಳ ಹುಟ್ಟೂರು. ತಂದೆ ಕಾಕತಿಯ ದೇಸಾಯಿ ಧೂಳಪ್ಪಗೌಡರು. ಚನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಸ್ವಂತ ಮಕ್ಕಳಿಲ್ಲದ ರಾಣಿ ಚೆನ್ನಮ್ಮ ರಾಜನಿಷ್ಠರಾದ ಗುರುಸಿದ್ದಪ್ಪ, ಹಿಮ್ಮತಸಿಂಗ,ಸಂಗೊಳ್ಳಿ ರಾಯಣ್ಣ ನರಸಿಂಗರಾವ, ಗುರುಪುತ್ರ ಮತ್ತು ಇತರ ಬೆಂಬಲಿಗರ ನೆರವಿನಿಂದ ತನ್ನ ದತ್ತಕ ಮೊಮ್ಮಗನಿಗೆ ಪಟ್ಟ ಕಟ್ಟಿದಳು.
ಕಿತ್ತೂರಿನ ಇತಿಹಾಸವು ಕ್ರಿ.ಶ. ೧೫೮೬ರಿಂದಲೇ ಆರಂಭವಾಗುತ್ತದೆ. ಮೂಲತಃ ಮಲೆನಾಡಿನ ಬೇಡ ಮನೆತನದಿಂದ ಬಂದ ಮಲ್ಲ ಹೆಸರಿನ ಸೋದರರಿಬ್ಬರು ವಿಜಾಪುರದ ಆದಿಲಶಾಹಿ ಸೈನ್ಯದಲ್ಲಿ ಸೇರಿಕೊಂಡಿದ್ದರು. ಈ ಸೋದರರಲ್ಲಿ ಹಿರಿಯ ಮಲ್ಲನಿಗೆ “ ಶಮಶೇರ ಜಂಗಬಹಾದ್ದೂರ ” ಎನ್ನುವ ಬಿರುದನ್ನು ಹಾಗೂ ಹುಬ್ಬಳ್ಳಿ ವಿಭಾಗದ ಸರದೇಶಮುಖಿಯನ್ನು ನೀಡಲಾಗಿತ್ತು. ವಿಜಾಪುರದ ಪತನದ ನಂತರ ಕಿತ್ತೂರು ದೇಸಾಯಿಗಳು ತಮ್ಮ ರಕ್ಷಣೆಗಾಗಿ ಅನೇಕ ಕಾಳಗಗಳನ್ನು ಎದುರಿಸ ಬೇಕಾಯಿತು.
ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ಥಾನದಲ್ಲಿ ಮೊಗಲ ಬಾದಶಾಹಿ ನಿರ್ಬಲವಾಗಿತ್ತು. ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶವಾಯಿ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು.
ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು. ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ ೧೮೦೩ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರ ಗೊಳಿಸಿದ್ದನು.
೧೮೦೯ರಲ್ಲಿ ಪೇಶವೆಯವರಿಗೆ ರೂ.೧,೭೫,೦೦೦ ಕೊಟ್ಟು, ಅವರ ಸ್ಥಾನಿಕ ಕಾವಲು ಸೈನ್ಯದ ಖರ್ಚನ್ನು ನೀಡಿ ಅವರಿಂದ ಸನದು ಪಡೆದಿದ್ದನು. ಆದರೆ ಪೇಶ್ವೆಯವರು ವಿಶ್ವಾಸಘಾತ ಮಾಡಿ ಮಲ್ಲಸರ್ಜನನ್ನು ಸೆರೆ ಹಿಡಿದು ೩ ವರ್ಷ ಕಾಲ ಪುಣೆಯಲ್ಲಿಟ್ಟರು. ೧೮೧೬ರಲ್ಲಿ ಬಿಡುಗಡೆ ಹೊಂದಿ ಮರಳುವಾಗ ದಾರಿಯಲ್ಲಿಯೆ ಮಲ್ಲಸರ್ಜನು ಕೊನೆಯುಸಿರನ್ನೆಳೆದ. ಅವನ ಮಗ ಶಿವಲಿಂಗ ರುದ್ರಸರ್ಜನು ಮರಾಠ ಹಾಗು ಟಿಪ್ಪು ಸುಲ್ತಾನ ಇವರ ಕಿರಿಕಿರಿ ತಪ್ಪಿಸಲು ಬ್ರಿಟಿಷರ ಜೊತೆಗೆ ಸ್ನೇಹದಿಂದಿದ್ದ. ಆದರೆ ಅದೆಂತಹ ಸ್ನೇಹವೆಂದರೆ! ಪ್ರತಿ ವರ್ಷ ರೂ. ೧,೭೦,೦೦೦ ಕಾಣಿಕೆ ಕೊಡುವ ಕರಾರಿನ ಮೇಲೆ ಬ್ರಿಟಿಷರು ಈ ದೊರೆಗೆ ಸನ್ನದು ನೀಡಿದರು. ಶಿವಲಿಂಗರುದ್ರ ಸರ್ಜನು ೧೧ ಸೆಪ್ಟೆಂಬರ ೧೮೨೪ ರಂದು ವಾರಸುದಾರರಿಲ್ಲದೆ ತೀರಿಕೊಂಡನು. ಈ ಎಳೆವಯಸ್ಸಿನ ದೊರೆಯ ಹೆಂಡತಿ ವೀರಮ್ಮನಿಗೆ ಆಗ ೧೧ ವರ್ಷ ವಯಸ್ಸು! ಮರಣದ ಪೂರ್ವದಲ್ಲಿ ಶಿವಲಿಂಗರುದ್ರಸರ್ಜ ಮಾಸ್ತಮರಡಿ ಗೌಡರ ಪುತ್ರ ಶಿವಲಿಂಗಪ್ಪನನ್ನು ದತ್ತಕ ತೆಗೆದುಕೊಂಡ.
ಈ ದತ್ತಕವನ್ನು ಧಾರವಾಡದ ಕಲೆಕ್ಟರ ಥ್ಯಾಕರೆ ತಿರಸ್ಕರಿಸುತ್ತಾನೆ. ೧೩ ಸೆಪ್ಟೆಂಬರ ೧೮೨೪ ರಂದು ಥ್ಯಾಕರೆ ಸ್ವತಃ ಕಿತ್ತೂರಿಗೆ ಬಂದು ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗ ಮುದ್ರೆ ಹಾಕುತ್ತಾನೆ. ಆದರೆ ಇದನ್ನು ಕೆಚ್ಚೆದೆಯಿಂದ ಎದುರಿಸಿದವಳು ಮೃತ ಶಿವಲಿಂಗರುದ್ರಸರ್ಜನ ಮಲತಾಯಿ ಚೆನ್ನಮ್ಮ.
ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಮಾಡಿದ್ದಳು.
೨೧ ಅಕ್ಟೋಬರ್ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ಮೂರನೆಯ ದಿನ ಅಂದರೆ ಅಕ್ಟೋಬರ ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳುತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ. ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ಈ ವಿಜಯೋತ್ಸವವನ್ನು ಕರ್ನಾಟಕ ಸರ್ಕಾರ ಕಿತ್ತೂರು ಉತ್ಸವ ಅನ್ನುವ ಹೆಸರಿನಲ್ಲಿ ಆಚರಣೆಗೆ ಜಾರಿಗೆ ತಂದಿದೆ. ಪ್ರತಿ ವರ್ಷವೂ ಸರ್ಕಾರವೇ ಆಚರಣೆ ಮಾಡುತ್ತದೆ. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾದರು. ಚೆನ್ನಮ್ಮನಿಗೆ ಹಾಗು ಬ್ರಿಟಿಷರಿಗೆ ಮತ್ತೆ ಪತ್ರವ್ಯವಹಾರ ನಡೆಯುತ್ತದೆ. ೧೮೨೪ ಡಿಸೆಂಬರ್ ೨ ರಂದು ಸ್ಟೀವನ್ಸನ್ ಹಾಗು ಈಲಿಯಟ್ ಇವರ ಬಿಡುಗಡೆಯಾಗುತ್ತದೆ. ಆದರೆ ಮಾತಿಗೆ ತಪ್ಪಿದ ಬ್ರಿಟಿಷರು ಡಿಸೆಂಬರ್ ೩ ರಂದು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸುತ್ತಾರೆ. ಡಿಸೆಂಬರ್ ೪ ರಂದು ಸರದಾರ ಗುರುಸಿದ್ದಪ್ಪ ಸೆರೆಯಾಳಾಗುತ್ತಾನೆ. ಡಿಸೆಂಬರ್ ೫ ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾಗುತ್ತಾಳೆ. ಡಿಸೆಂಬರ್೧೨ ರಂದು ಚೆನ್ನಮ್ಮ ಹಾಗು ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ. ಅಲ್ಲಿ ೪ ವರ್ಷಗಳವರೆಗೆ ಸೆರೆಯಾಳಾಗಿ ಉಳಿದ ಚೆನ್ನಮ್ಮ 1829 ಫೆಬ್ರುವರಿ 2 ರಂದು ನಿಧನಹೊಂದುತ್ತಾಳೆ.
ಮುಂದೆ ಮೇ ೨೦ರಂದು ಜಾನಕಿಬಾಯಿ ನಿಧನಳಾಗುತ್ತಾಳೆ. ಆದರೆ ದೇಶ ನಿಷ್ಠರ ಹೋರಾಟ ನಿಂತಿರುವುದಿಲ್ಲ. ಕಾಳಗದಲ್ಲಿ ಸೆರೆ ಸಿಕ್ಕು ಆ ಮೇಲೆ ಬಿಡುಗಡೆಯಾದ ಸಂಗೊಳ್ಳಿ ರಾಯಣ್ಣ ೧೮೨೯ರಲ್ಲಿ ಹೋರಾಟ ಮುಂದುವರೆಸುತ್ತಾನೆ. ಇವನ ಹೋರಾಟಕ್ಕೆ ನೆರವು ನೀಡುತ್ತಿರುವ ಸಂಶಯದ ಮೇಲೆ ವೀರಮ್ಮನನ್ನು ಬ್ರಿಟಿಷರು ಮೊದಲು ಕುಸುಗಲ್ಲಿಗೆ, ಆ ಬಳಿಕ ಬೇರೊಂದು ಸ್ಥಳಕ್ಕೆ ಒಯ್ಯುತ್ತಾರೆ. ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ. ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ ೧೮೩೦ ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಕಂಪನಿ ಸರಕಾರ ಈ ಕಾರ್ಯಕ್ಕಾಗಿ ಲಿಂಗನಗೌಡ ಮತ್ತು ವೆಂಕನಗೌಡರಿಗೆ ೩೦೦ ರೂಪಾಯಿ ಬಹುಮಾನ ಕೊಡುತ್ತದೆ. ಮೇ ೧೮೩೦ ರಲ್ಲಿ ದತ್ತುಪುತ್ರ ಶಿವಲಿಂಗಪ್ಪ ಹಾಗು ಇತರ ೪೦೦ ಜನರು ಬ್ರಿಟಿಷರಿಗೆ ಸ್ವಯಂ ಸೆರೆಯಾಗುತ್ತಾರೆ. ಜುಲೈ ೧೮೩೦ ರಂದು ವೀರಮ್ಮ ಸೆರೆಮನೆಯಲ್ಲಿ ಮರಣಹೊಂದುತ್ತಾಳೆ. ವಿಷ ತೆಗೆದುಕೊಂಡು ಮರಣ ಹೊಂದಿದಳೆಂದೂ, ಇಂಗ್ಲಿಷರೆ ವಿಷ ಹಾಕಿ ಕೊಂದರೆಂದೂ ಪ್ರತೀತಿ. ೧೮೩೧ ಜನವರಿ ೨೬ ರಂದು ಸಂಗೊಳ್ಳಿ ರಾಯಣ್ಣನನ್ನು ನಂದಗಡದಲ್ಲಿ ಗಲ್ಲಿಗೇರಿಸಲಾಗುತ್ತದೆ.
ಧನ್ಯವಾದಗಳು.
Really great information can be found on website..
As someone who’s constantly bewared concerning my blood sugar,
locating Sugar Protector has actually been an alleviation. I really feel a lot a lot more in control, and my current exams have actually shown favorable improvements.
Knowing I have a dependable supplement to support my
routine gives me peace of mind. I’m so thankful
for Sugar Defender’s influence on my health and wellness!
sugar defender I’ve
had problem with blood sugar changes for years, and it actually influenced
my power degrees throughout the day. Given that starting Sugar Defender,
I feel much more well balanced and alert, and I do not experience those afternoon plunges any longer!
I enjoy that it’s an all-natural service that works without any harsh negative
effects. It’s genuinely been a game-changer for me sugar defender ingredients
sugar defender ingredients
Integrating Sugar Protector right into my day-to-day routine has been a
game-changer for my total wellness. As a person who currently focuses on healthy and balanced consuming, this supplement has actually provided an added boost of
defense. in my power levels, and my desire for harmful snacks
so effortless can have such a profound impact on my every day life.
sugar defender ingredients
sugar defender official website Including Sugar Defender right into my
day-to-day routine overall well-being. As somebody that prioritizes healthy eating, I value the added
protection this supplement supplies. Because beginning to take it,
I have actually noticed a significant improvement in my energy
degrees and a considerable reduction in my need for harmful snacks such a such an extensive influence on my every day life.