in ,

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಗಾಂಧಿ ಜಯಂತಿ – ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.

ಗಾಂಧಿ ಜಯಂತಿಯ ಮಹತ್ವ
ಅಕ್ಟೋಬರ್ ೨ ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿ ಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಮತ್ತು ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ.

ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ ಮಾಡುತ್ತಾರೆ. ಶಾಲಾ ಮಕ್ಕಳು ಸಹ ಬೆಳಿಗ್ಗೆ ಬೇಗನೆ ಎದ್ದು ಜಳಕ್ಕೆ ಮಾಡಿ, ರಾಷ್ಟ್ರ ಪಿತನಿಗೆ ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ ಶಾಲೆಗೆ ಬರುತ್ತಾರೆ.

ಇಂತಹ ಮಹಾನ್ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ ೨ ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು.

ಗಾಂಧಿಯವರ ಜನನ, ಜೀವನ

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಮೋಹನದಾಸ್ ಕರಮ‍ಚಂದ್ ಗಾಂಧಿ

ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ ಗುಜರಾತ್ ರಾಜ್ಯದ ಪೋರಬಂದರ್ ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು.

ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು. ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ , ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. 4 ನೇ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿಯನ್ನು ಮುಗಿಸಿ ಬಂದು.
ಮುಂಬಯಿ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು. ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಕೆಲಸದ ಮೇಲೆ ತೆರಳಿದರು. ಅಲ್ಲಿ ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ ಬೇಸರಗೊಂಡರು.

ಗಾಂಧೀಜಿ ಅಲ್ಲಿನ ವರ್ಣಭೇದ ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್ ತೆಗೆದು ಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರ ಹಾಕಿದಾಗ, ಅವರ ವರ್ಣಭೇದ ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವೆಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.

ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು.

ಲಾಲ್ ಬಹದ್ದೂರ್ ಶಾಸ್ತ್ರಿ

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹಾದುರ್ ಮೊಘಲ್‌ ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.
ಗಾಂಧೀಜಿಯವರ ಜನ್ಮದಿನ‌ದಂದೇ ಜನ್ಮದಿನ.

ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ

ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.

ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.

ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.

ಪ್ರಧಾನಿಯಾಗಿ ಲಾಲ್ ಬಹದ್ದೂರ್ ಶಾಸ್ತ್ರಿ
ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು.

ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು. ಅದೇ ಟಾಶ್ಕೆಂಟ್ ಡಿಕ್ಲೆರೇಶನ್.

ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು; ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು ಎಂಬ ಊಹೆ ಇದೆ. ಆದರೆ ಅದನ್ನು ಅಲ್ಲಿಯ ವೈದ್ಯರು ದೃಡಪಡಿಸಿಲ್ಲ.
ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರಧಾನ ಮಂತ್ರಿ ಹಾಗು ಈ ತರಹದ ದುರಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.

ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು.
ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟ ಪ್ರಾಯದಂತಿದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಪ್ರಧಾನಿ 5G ಸೇವೆಗಳಿಗೆ ಚಾಲನೆ ನೀಡಿದರು

ಇಂದು ಪ್ರಧಾನಿ 5G ಸೇವೆಗಳಿಗೆ ಚಾಲನೆ ನೀಡಿದರು

ರಾಣಿ ವಿಕ್ಟೋರಿಯಾ

ವಿಕ್ಟೋರಿಯನ್ ಯುಗ