in , ,

ರಾಷ್ಟ್ರೀಯ ರಜಾದಿನ

ರಾಷ್ಟ್ರೀಯ ರಜಾದಿನ
ರಾಷ್ಟ್ರೀಯ ರಜಾದಿನ

ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಬ್ರಿಟೀಷರಿಂದ ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ದೇಶದಾದ್ಯಂತ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು-ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ,ಭಾರತದ ರಾಷ್ಟ್ರಗೀತೆ “ಜನ ಗಣ ಮನ”ವನ್ನು ಹಾಡಿ ನಂತರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ, ದೇಶದ ಸಾಧನೆ,ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಣಿದ ನಾಯಕರನ್ನು ಸ್ಮರಿಸಲಾಗುತ್ತದೆ.

ಜೂನ್ ೩,೧೯೪೭ ರಂದು ಅಂದಿನ ಗವರ್ನರ್ ಜನರಲ್ ಅಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್, ಬ್ರಿಟಿಶ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ ೧೯೪೭ರನ್ವಯ ಆಗಸ್ಟ್ ೧೫, ೧೯೪೭ ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮದ್ಯರಾತ್ರಿ, ಜವಾಹರ್ ‌ಲಾಲ್ ನೆಹರು ರವರು ದೇಶದ ಪ್ರಥಮ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ಅವರು ರಾಷ್ಟ್ರವನ್ನುದ್ದೇಶಿಸಿ ,ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ‘ಭಾಗ್ಯದೊಡನೆ ಒಪ್ಪಂದ’ ಭಾಷಣ ಮಾಡಿದರು. ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ. ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ….. ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ, ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ.

ರಾಷ್ಟ್ರೀಯ ರಜಾದಿನ
ಪ್ರಧಾನಮಂತ್ರಿ ನೆಹರು

ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು ಭಾರತದ ಗವರ್ನರ್ ಜನರಲ್ ಆಗಿ ಮುಂದುವರೆಯಲು ಕೋರಿದರು. ಜೂನ್ ೧೯೪೮ ರಲ್ಲಿ ಅವರ ಸ್ಥಾನಕ್ಕೆ ಚಕ್ರವರ್ತಿ ರಾಜಗೋಪಾಲಾಚಾರಿ ಅವರು ಬಂದರು. ಪಟೇಲರು ೫೬೫ ರಾಜಸಂಸ್ಥಾನಗಳ ಭಾರತದ ರಾಜಕೀಯ ಏಕೀಕರಣದ ಜವಾಬ್ದಾರಿಯನ್ನು ವಹಿಸಿಕೊಂಡರು, ಜುನಾಗಢ, ಜಮ್ಮು ಮತ್ತು ಕಾಶ್ಮೀರ, ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನೂ ಉಪಯೋಗಿಸಿ “ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ” ತಂತ್ರವನ್ನು ಉಪಯೋಗಿಸಿದರು. ಸಂವಿಧಾನ ರಚನಾಸಭೆಯು ಸಂವಿಧಾನದ ಕರಡನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು. ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು . ನಂತರ ಸ್ವತಂತ್ರ ಸಾರ್ವಭೌಮ ಭಾರತವು ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು. ಅವು 1961ರಲ್ಲಿ ಪೋರ್ತುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು ೧೯೫೪ರಲ್ಲಿ ಒಪ್ಪಿಸಿದ ಪಾಂಡಿಚೇರಿ . ೧೯೫೨ ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು. ಶೇ. ೬೨ ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾಯಿತು.

ಆಗಸ್ಟ್ ೧೫ ಭಾರತದ ರಾಷ್ಟೀಯ ರಜಾದಿನವಾಗಿದೆ. ರಾಜಧಾನಿ ನವದೆಹಲಿ ಯಲ್ಲಿ ಬಹ್ವಂಶ ಸರಕಾರೀ ಕಚೇರಿಗಳು ವಿದ್ಯುದ್ದೀಪಗಳಿಂದ ಬೆಳಗುತ್ತವೆ ಎಲ್ಲ ರಾಜ್ಯ ರಾಜಧಾನಿಗಳಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಸಮಾರಂಭಗಳು ಜರುಗುತ್ತವೆ. ದೇಶಾದ್ಯಂತ ನಗರಗಳಲ್ಲಿ ಧ್ವಜಾರೋಹಣವನ್ನು ಆಯಾ ಕ್ಷೇತ್ರಗಳ ರಾಜಕೀಯ ಧುರೀಣರು ನೆರವೇರಿಸುತ್ತಾರೆ. ಖಾಸಗಿ ಸಂಸ್ಥೆಗಳಲ್ಲಿ ಧ್ವಜಾರೋಹಣವನ್ನು ಆಯಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಾರೆ. ಶಾಲೆಕಾಲೇಜುಗಳು ತಮ್ಮ ಆವರಣದಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಬಂಧುಮಿತ್ರರು ಭೋಜನಕೂಟ ಮತ್ತು ಪ್ರವಾಸಗಳಿಗೆಂದು ಸೇರುತ್ತಾರೆ. ಹೌಸಿಂಗ್ ಕಾಲನಿಗಳು, ಸಾಂಸ್ಕೃತಿಕ ಸಂಘಸಂಸ್ಥೆಗಳು ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಮನರಂಜನಾ ಕಾರ್ಯಕ್ರಮಗಳನ್ನೂ ಸ್ಪರ್ಧೆಗಳನ್ನೂ ಏರ್ಪಡಿಸುತ್ತಾರೆ.

ರಾಷ್ಟ್ರೀಯ ರಜಾದಿನ
ಧ್ವಜಾರೋಹಣ

ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯ ದಿನದಂದು ಗಾಳಿಪಟಗಳನ್ನು ಹಾರಿಸುವ ಪದ್ದತಿ ಜನಪ್ರಿಯವಾಗಿದೆ. ಅಕಾಶವು ನೂರಾರು ಬಣ್ಣ ಬಣ್ಣದ ಪಟಗಳಿಂದ ಕಂಗೊಳಿಸುವದು. ಜನರು ಗಾಳಿಪಟಗಳನ್ನು ಹರಿಸುವ ಸ್ಪರ್ಧೆಗಳಲ್ಲಿ ತೊಡಗುವರು ಕಟ್ಟಡಗಳ ಬಾಲ್ಕನಿಗಳು ಮತ್ತು ಮನೆಗಳ ಮಾಳಿಗೆಗಳಿಂದ ಜನರು ಗಾಳಿಪಟಗಳನ್ನು ಬಾನಿಗೆ ಹಾರಬಿಡುವರು. ಸಂಜೆಯ ವೇಳೆ ಗಾಳಿಪಟಗಳು ಮುಗಿಲ ಮುಟ್ಟುವಂತೆ ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸದ ಧ್ವನಿಗಳು ಎಲ್ಲೆಲ್ಲೂ ಕೇಳಬರುತ್ತದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಹಿಂದೂ ಧರ್ಮ

ಹಿಂದೂ ಧರ್ಮದಲ್ಲಿ ಅಡಗಿರುವ ಕೆಲವೊಂದು ವೈಜ್ಞಾನಿಕ ಸತ್ಯಗಳು

ಉಪ್ಪು

ಉಪ್ಪು ಇಲ್ಲದೆ ಯಾವ ಅಡುಗೆ ಮಾಡಿದರೂ ರುಚಿ ಇಲ್ಲ