ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 3ರಿಂದ ಜೂನ್ 7ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬ ವಿವರ ಇಲ್ಲಿದೆ.
ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 3ರಿಂದ ಜೂನ್ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುರುವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ 5 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಮಾಣಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಇದೇ ವೇಳೆ ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನೈಋುತ್ಯ ಮುಂಗಾರು ಮಾರುತಗಳು ಕಳೆದ ಭಾನುವಾರವೇ ಕೇರಳ ಪ್ರವೇಶಿಸಿದ್ದು, ವಾಡಿಕೆಗಿಂತಲೂ ಮೂರು ದಿನ ಮೊದಲೇ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಜೂ.1ರಂದು ಮಾನ್ಸೂನ್ ಕೇರಳ ಪ್ರವೇಶಿಸುವುದು ವಾಡಿಕೆ. ಕೇರಳದಲ್ಲಿ ಶನಿವಾರದಿಂದಲೇ ಮಳೆ ಆರಂಭವಾಗಿದೆ. ರಾಜ್ಯದ 14 ಮಳೆ ಮಾಪನ ಕೇಂದ್ರಗಳ ಪೈಕಿ 10ರಲ್ಲಿ 2.5 ಮಿ.ಮೀ. ಮಳೆಯಾದರೆ ಅದನ್ನು ಮಾನ್ಸೂನ್ ಆಗಮನ ದೃಢಪಡಿಸಲು ಮಾನದಂಡವಾಗಿ ಪರಿಗಣಿಸಲಾಗುತ್ತದೆ.
ಕಳೆದ 24 ಗಂಟೆಗಳಲ್ಲಿ 10 ಮಳೆ ಮಾಪನ ಕೇಂದ್ರಗಳಲ್ಲಿ2.5 ಮಿ.ಮೀ. ಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗಿದೆ. ಕೇರಳದಲ್ಲಿ ಮಾನ್ಸೂನ್ ಆರಂಭ ಸೂಚಿಸುವ ಎಲ್ಲಾ ವಿದ್ಯಮಾನಗಳು ಹೊಂದಿಕೆಯಾಗಿವೆ ಎಂದು ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದರು.
ಕೇರಳದಲ್ಲಿ ಮಾನ್ಸೂನ್ ಪ್ರಭಾವದ ಹಿನ್ನಲೆಯಲ್ಲಿ ಕರ್ನಾಟಕ ಕರಾವಳಿಯಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 30ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅವಧಿಗೂ ಮುನ್ನವೇ ಮುಂಗಾರು ಆಗಮಿಸಿದ್ದು, ಈಗಾಗಲೇ ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಆದರೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಹೆಚ್ಚಳವಾಗಿದೆ.ಕಳೆದ ಮಾರ್ಚ್‌ನಿಂದ ಮೇ 28ರವರೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತಲೂ ಅತ್ಯಧಿಕ ಮುಂಗಾರು ಪೂರ್ವ ಮಳೆಯಾಗಿದೆ.
ಕರ್ನಾಟಕದಲ್ಲಿ 136%, ಕೇರಳದಲ್ಲಿ 12%, ಪುದುಚರಿಯಲ್ಲಿ 87%, ಆಂಧ ಪ್ರದೇಶದಲ್ಲಿ 34% ಅಧಿಕ ಮಳೆಯಾಗಿದೆ. ತೆಲಂಗಾಣದಲ್ಲಿ ಮಾತ್ರ ಮುಂಗಾರು ಪೂರ್ವ ಮಳೆಯ ಪ್ರಮಾಣ ಶೇ. 28ರಷ್ಟು ಕಡಿಮೆಯಾಗಿದೆ ಎಂದು ಇಲಾಖೆ ಹೇಳಿದೆ.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.
I like this website it’s a master piece! Glad I discovered this on google.?