in

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ
ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡರಿಗೆ ಆಹ್ವಾನ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.

ನ.11ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅ.21 ರಿಂದ ನ.7ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ 20 ‘ನಾಡಪ್ರಭು ಕೆಂಪೇಗೌಡ ರಥ’ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ
ಕೆಂಪೇಗೌಡರ ಪ್ರತಿಮೆ ನಿರ್ಮಾಣ ಹಂತದಲ್ಲಿರುವ ಚಿತ್ರ

ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್‌ ಪಾರ್ಕ್‌ನಲ್ಲಿ ಬಳಸಿಕೊಳ್ಳಲಾಗುವುದು. ಇಡೀ ಕಾರ್ಯಕ್ರಮ ಮತ್ತು ಅಭಿಯಾನಗಳು ಪಕ್ಷಾತೀತವಾದ ಕಾರ್ಯಕ್ರಮವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು ಎಂದು ಹೇಳಿದರು.

ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.

ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡಲಾಗಿದೆ. ಇದಕ್ಕೆ ಜಿಪಂ ಸಿಇಒಗಳು ನೋಡಲ್‌ ಅಧಿಕಾರಿಗಳಾಗಿರುತ್ತಾರೆ.

ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ ಎಂದರು.

ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ
ನಾಡಪ್ರಭು ಕೆಂಪೇಗೌಡರು

ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಸಚಿವ ಅಶ್ವತ್ಥ್​​ ನಾರಾಯಣ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹೆಚ್​​.ಡಿ.ದೇವೇಗೌಡರು ಸಂಪೂರ್ಣ ಗುಣಮುಖರಾಗಿದ್ದಾರೆ. ಮೃತ್ತಿಕಾ ಸಂಗ್ರಹಣಾ ಅಭಿಯಾನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇನೆ. ನ.21ರಂದು ವಿಧಾನಸೌಧದ ಮುಂಭಾಗ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತೆ. ನ.11ರ ಪ್ರತಿಮೆ ಲೋಕಾರ್ಪಣೆಗೂ ಆಹ್ವಾನ ಕೊಟ್ಟಿದ್ದೇನೆ. ಮುಖ್ಯಮಂತ್ರಿಗಳು ಕೂಡ ಪ್ರತ್ಯೇಕವಾಗಿ ಆಹ್ವಾನ ನೀಡಲಿದ್ದಾರೆ ಎಂದರು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ವೆನಿಲಾ ಬೆಳೆ

ವೆನಿಲಾ ಬೆಳೆ : ಆಹಾರ ಉತ್ಪನ್ನಗಳ ಸ್ವಾದಕ್ಕೆ ಬಳಸಲಾಗುತ್ತದೆ

ಬರ/ಜಲಕ್ಷಾಮ

ಬರ/ಜಲಕ್ಷಾಮದಿಂದುಂಟಾಗುವ ಸರ್ವೇಸಾಮಾನ್ಯ ಪರಿಣಾಮಗಳು