in

ಡಿಸೆಂಬರ್ 5 ಕನ್ನಡಕ್ಕಾಗಿ ಅಪಾರವಾಗಿ ದುಡಿದ ಜಿ.ಪಿ. ರಾಜರತ್ನಂ ಅವರು ಹುಟ್ಟಿದ ದಿನ

ಜಿ.ಪಿ. ರಾಜರತ್ನಂ ಅವರು ಹುಟ್ಟಿದ ದಿನ
ಜಿ.ಪಿ. ರಾಜರತ್ನಂ ಅವರು ಹುಟ್ಟಿದ ದಿನ

‘ಜಿ. ಪಿ. ರಾಜರತ್ನಂ’ ರವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ “ನಾಗಪಟ್ಟಣ”ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶದಲ್ಲಿ ಡಿಸೆಂಬರ್ ೦೫, ೧೯೦೯ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಜಿ.ಪಿ.ರಾಜರತ್ನಂ ಎಂದು ತಿದ್ದಿಕೊಂಡಿದ್ದರು. ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲಕೃಷ್ಣ ಅಯ್ಯಂಗಾರ್. ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. 

ಗುಂಡ್ಲು ಪಂಡಿತ ರಾಜರತ್ನಂ ಅವರು ಹುಟ್ಟಿದ್ದು ಡಿಸೆಂಬರ್ 5, 1908. ನಾವು ಎಷ್ಟೇ ವಯಸ್ಸಿನವರಿರಬಹುದು, ಜಿ.ಪಿ. ರಾಜರತ್ನಂ ಅವರು ನಮಗೆ ನಾವು ಪುಟ್ಟವರಿದ್ದಾಗ ಉಣಬಡಿಸಿದ್ದ ‘ನಾಯಿ ಮರಿ ನಾಯಿ ಮರಿ ತಿಂಡಿ ಬೇಕೆ’, ‘ಒಂದು ಎರಡು ಬಾಳೆಲೆ ಹರಡು’, ‘ಹತ್ತು ಹತ್ತು ಇಪ್ಪತ್ತು ತೋಟಕೆ ಹೋದನು ಸಂಪತ್ತು’, ‘ಬಣ್ಣದ ತಗಡಿನ ತುತ್ತೂರಿ ಕಾಸಿಗೆ ಕೊಂಡನು ಕಸ್ತೂರಿ’, ‘ರೊಟ್ಟಿ ಅಂಗಡಿ ಕಿಟ್ಟಪ್ಪ, ನನಗೊಂದು ರೊಟ್ಟಿ ತಟ್ಟಪ್ಪ’, ‘ಅಪ್ಪಾ ನಾಕಾಣಿ, ಯಾಕೋ ಪುಟಾಣಿ, ಹೇರ್ ಕಟ್ಟಿಂಗ್ ಸೆಲೂನ್’ ಈ ಪದ್ಯಗಳು ಈಗಲೂ ಅಷ್ಟೇ ಮುದ ನೀಡುತ್ತವೆ.

ಡಿಸೆಂಬರ್ 5 ಕನ್ನಡಕ್ಕಾಗಿ ಅಪಾರವಾಗಿ ದುಡಿದ ಜಿ.ಪಿ. ರಾಜರತ್ನಂ ಅವರು ಹುಟ್ಟಿದ ದಿನ
ಜಿ. ಪಿ. ರಾಜರತ್ನಂ

ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ ರಾಜರತ್ನಂ ಎಂ.ಎ ಕನ್ನಡದಲ್ಲಿ ಮುಗಿಸಿ, ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `ತುತ್ತೂರಿ’ ಶಿಶುಗೀತೆ ಸಂಕಲನ ‘. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರು ರಾಜರತ್ನಂರವರಿಗೆ ‘ಸಾಹಿತ್ಯ ಸೇವೆ’ ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ ‘ರಾಜರತ್ನಂ’ ಅವರಿಂದ ‘ಉತ್ತಮ ಸಾಹಿತ್ಯ ನಿರ್ಮಾಣ’ಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು ‘ಮಿಂಚು’.

ಸಾಹಿತ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಎನಿಸಿಕೊಂಡ ಅವರ ಸಂಪರ್ಕದ ಮಹತ್ವಪೂರ್ಣ ಕಾರ್ಯವೆಂದರೆ ಸಾಹಿತ್ಯ ಪರಿಚಾರಿಕೆಯ ಕೆಲಸ. ತಮ್ಮದು ಬೇರೆಯವರದು ಎಂಬ ಭೇದ ಇಲ್ಲದೆ ಎಲ್ಲರ ಸಾಹಿತ್ಯವನ್ನೂ ಅವರು ಜನರಿಗೆ ಪರಿಚಯ ಮಾಡಿ ಕೊಟ್ಟರು. ‘ತಾ ಕಂಡ ಶಿವಪಥವ ಎಲ್ಲರಿಗೆ ತೋರ್ಪ’ ಶಿವಶರಣರಂತೆ ಅವರು ತಾವು ಸಾಹಿತ್ಯದಲ್ಲಿ ಕಂಡ ಬೆಳಕನ್ನು ಸವಿದ ಸ್ವಾರಸ್ಯವನ್ನು ನಾಡಿಗೆಲ್ಲ ಹಂಚಲು ಹೆಣಗಿದರು. ಇದರಿಂದಾಗಿ ರಾಜರತ್ನಂ ಸಾಹಿತಿಗಳಿಗೂ ಜನಕ್ಕೂ ನಡುವೆ ಸೇತುವೆ ಆಗಿದ್ದರು. ನವೋದಯ ಕಾಲದಲ್ಲಿ ಕನ್ನಡ ಸಾಹಿತ್ಯವನ್ನು ಜನತೆಯ ಹತ್ತಿರಕ್ಕೆ ಕೊಂಡೊಯ್ದು ಮುಟ್ಟಿಸುವ ಕೆಲಸ ಏನಿದೆಯೋ ಅದರಲ್ಲಿ ಭೀಮಪಾಲು ಜಿ.ಪಿ.ರಾಜರತ್ನಂ ಅವರದು.

ಡಿಸೆಂಬರ್ 5 ಕನ್ನಡಕ್ಕಾಗಿ ಅಪಾರವಾಗಿ ದುಡಿದ ಜಿ.ಪಿ. ರಾಜರತ್ನಂ ಅವರು ಹುಟ್ಟಿದ ದಿನ
ರಾಜರತ್ನಂ ಓದಿದ ಸರ್ಕಾರಿ ಶಾಲೆ

ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ ಲಲಿತಮ್ಮ ಕಾಯಿಲೆ ಬಿದ್ದವರು ಹುಷಾರಾಗಲೇ ಇಲ್ಲ, ವಿಧಿವಶರಾದರು. ಅವರ ನೆನಪು ಹಸಿರಾಗಿದ್ದಾಗಲೇ ಸೀತಮ್ಮ ಅವರ ‘ಬಾಳನಂದಾದೀಪ’ವಾಗಿ ಬಂದರು. ಬದುಕು ಸ್ಥಿರವಾಯಿತು. ಕಷ್ಟ ಕಾರ್ಪಣ್ಯಗಳ ನಡುವೆ ೧೯೩೮ರಲ್ಲಿ ‘ಕನ್ನಡ ಪಂಡಿತ ಹುದ್ದೆ’, ರಾಜರತ್ನಂ ಅವರನ್ನು ಹುಡುಕಿ ಬಂತು. ಮೈಸೂರು, ಬೆಂಗಳೂರು, ಶಿವಮೊಗ್ಗ, ತುಮಕೂರುಗಳಲ್ಲಿ ಅಧ್ಯಾಪಕರಾಗಿ, ಮೆಚ್ಚಿನ ಮೇಸ್ಟ್ರು ಆಗಿ ಖ್ಯಾತರಾದರು.

ಡಾ. ಜಿ.ಪಿ. ರಾಜರತ್ನಂ ಕನ್ನಡ ಸಾರಸ್ವತ ಲೋಕ ಕಂಡಂತಹ ಒಬ್ಬ ಅನನ್ಯ ಸಾಹಿತಿ. ಕಾವ್ಯ, ನಾಟಕ, ಕಥೆ, ಮಕ್ಕಳ ಸಾಹಿತ್ಯ, ಬೌದ್ಧ ಸಾಹಿತ್ಯ, ಜೈನ ಸಾಹಿತ್ಯ, ಇಸ್ಲಾಂ ಸಾಹಿತ್ಯ – ಹೀಗೆ ಬಹುಮುಖಿ ನೆಲೆಯಲ್ಲಿ ರಾಜರತ್ನಂ 200ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ, ತಮ್ಮನ್ನು ತಾವು ‘ಸಾಹಿತ್ಯ ಪರಿಚಾರಕ’ ಎಂದು ಕರೆದುಕೊಂಡು, ಅದರಂತೆಯೆ ಸಾಹಿತ್ಯ ಸೇವೆಗೆ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು ಪಿ. ಲಂಕೇಶ್, ಕೆ.ಎಸ್. ನಿಸಾರ್ ಅಹಮದ್ ಹೀಗೆ ಖ್ಯಾತ ಸಾಹಿತಿಗಳನ್ನು ಬೆಳೆಸಿದವರು.

ಧನ್ಯವಾದಗಳು.

What do you think?

-1 Points
Upvote Downvote

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಲವಂಗದ ಎಣ್ಣೆ

ಲವಂಗದ ಎಣ್ಣೆಯನ್ನು ಬಳಸಿಕೊಂಡು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು

ಹಣ್ಣುಗಳು ಮತ್ತು ತರಕಾರಿಗಳ ಸಿಪ್ಪೆಯಲ್ಲಿ ಕೂಡ ಆರೋಗ್ಯ

ಹಣ್ಣುಗಳು ಮತ್ತು ತರಕಾರಿಗಳ ಸಿಪ್ಪೆಯಲ್ಲಿ ಕೂಡ ಆರೋಗ್ಯ ಅಡಗಿದೆ