in

ಜನವರಿ 2, ಚಂದ್ರಶೇಖರ ಕಂಬಾರ ಜನ್ಮದಿನ

ಚಂದ್ರಶೇಖರ ಕಂಬಾರ ಜನ್ಮದಿನ
ಚಂದ್ರಶೇಖರ ಕಂಬಾರ ಜನ್ಮದಿನ

ಚಂದ್ರಶೇಖರ ಕಂಬಾರರು ಆಧುನಿಕ ಕನ್ನಡ ಕಾದಂಬರಿಕಾರ, ನಾಟಕಕಾರ ಮತ್ತು ಶಿಕ್ಷಣತಜ್ಞ. ಅವರು ತಮ್ಮ ಸಾಹಿತ್ಯಿಕ ವೃತ್ತಿಜೀವನವನ್ನು ಮುಂದುವರಿಸುವಾಗ ಚಲನಚಿತ್ರ ನಿರ್ಮಾಣ ಮತ್ತು ನಟನೆಯಲ್ಲಿ ತೊಡಗಿಸಿಕೊಂಡಿರುವ ಅನೇಕ ಪ್ರತಿಭೆಗಳ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೊ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.

ಡಾ. ಚಂದ್ರಶೇಖರ ಕಂಬಾರ ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ  ಜನವರಿ ೨, ೧೯೩೭ ರಂದು ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ ‘ಕರ್ನಾಟಕ ವಿವಿ’ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ.

ಜನವರಿ 2, ಚಂದ್ರಶೇಖರ ಕಂಬಾರ ಜನ್ಮದಿನ
ಚಂದ್ರಶೇಖರ ಕಂಬಾರ ದಂಪತಿ

ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು.  ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ ಮೈಪಡೆದ ಕಂಬಾರರ ಬಾಲ್ಯದ ಆತಂಕಗಳು ಅವರ ಕೃತಿಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತವೆ.  ಇವರ ಬಾಲ್ಯದ ವಸಾಹತು ಸಂದರ್ಭದ ಅನುಭವಗಳನ್ನು ‘ನನ್ನ ಬದುಕು-ಬರಹ’ ಎಂಬ ಲೇಖನದಲ್ಲಿ ಅವರೇ ಸೂಚಿಸಿದ್ದಾರೆ.  ಅಂಥ ವಸಾಹತು ಸಂದರ್ಭದ ಸಂವೇದನೆಯುಳ್ಳ ಕಂಬಾರರು ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಬಂದು ಎಂ.ಎ ಮತ್ತು  ಪಿ.ಎಚ್.ಡಿ ಪದವಿಗಳನ್ನು ಪಡೆದರು.

ಕಂಬಾರರು ಯುವಕರಾಗಿದ್ದಾಗ ಧಾರವಾಡದ ಕವಿ ಸಮ್ಮೇಳನದಲ್ಲಿ ಕವಿತೆಯೊಂದನ್ನು ಓದಿದ್ದರಂತೆ, ಖ್ಯಾತ ಕವಿಗಳೊಬ್ಬರು ಕಂಬಾರರ ಕವಿತೆ ಅಲ್ಲಿ ಓದಿದ ಎಲ್ಲ ಕವಿಗಳಿಗಿಂತ ಭಿನ್ನವಾಗಿದ್ದದ್ದು ಎಲ್ಲರ ಗಮನಕ್ಕೆ ಬಂದಿದ್ದರೂ, ಅದ್ಯಕ್ಷರು ಕಂಬಾರರ ಬಗ್ಗೆ ಕುಹಕದ ಮಾತು ಹೇಳಿದ್ದರು. “ಕಬ್ಬಿಣ ಕಾಸುವವರೂ ಈಗ ಕಾವ್ಯ ಬರೆಯುತ್ತಿದ್ದಾರೆ ” ಎಂಬ ಅಧ್ಯಕ್ಷರ ಮಾತು ಕಂಬಾರರ ಸ್ವಾಭಿಮಾನವನ್ನೇ ಬಡಿದೆಬ್ಬಿಸಿತು. 

ಕಂಬಾರರು ಸ್ನಾತಕೋತ್ತರ ಶಿಕ್ಷಣದ ನಂತರ ಅವರ ಸಾಹಿತ್ಯದ ಗುರು ಎಂದೇ ಗುರುತಿಸಲ್ಪಟ್ಟ ಶ್ರೀ ಗೋಪಾಲಕೃಷ್ಣ ಅಡಿಗರು ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಸಾಗರದ ಲಾಲ್ ಬಹದೂರ್ ಕಲಾ, ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ  ಮಹಾವಿದ್ಯಾಲಯದಲ್ಲಿ ಎರಡು ವರ್ಷಗಳ ಕಾಲ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
೨೦೧೯ ನೇ ಸಾಲಿನ ವಿದ್ಯಾಕಾಶಿ ಧಾರವಾಡದಲ್ಲಿ ನಡೆದ ೮೪ ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಉಪನ್ಯಾಸಕ ವೃತ್ತಿಯಿಂದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗ ಬೆಂಗಳೂರಿನ ಬನಶಂಕರಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿಯೂ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಜನವರಿ 2, ಚಂದ್ರಶೇಖರ ಕಂಬಾರ ಜನ್ಮದಿನ
ಚಂದ್ರಶೇಖರ  ಕಂಬಾರರಿಗೆ ಎಲ್ ಬಿ ಕಾಲೇಜಿನಿಂದ ಬೀಳ್ಕೊಡುಗೆ

ತಮ್ಮ ಊರಿನ ವಾತಾವರಣದಲ್ಲಿನ ಜಾನಪದ ಹಾಡು, ಕುಣಿತ, ನಾಟಕಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವುಗಳ ಸಂಗ್ರಹ, ಬರವಣಿಗೆಯನ್ನು ರೂಢಿಸಿಕೊಂಡರು. ಉತ್ತರ ಕರ್ನಾಟಕದ ಅದರಲ್ಲೂ ಗೋಕಾಕ, ಬೆಳಗಾವಿ, ಧಾರವಾಡದ ಗಂಡು ಭಾಷೆಯನ್ನು ಕನ್ನಡ ಸಾಹಿತ್ಯಕ್ಕೆ ಹೊತ್ತು ತಂದರು. ಧಾರವಾಡದ ವರಕವಿ ಡಾ. ದ.ರಾ.ಬೇಂದ್ರೆ ಅವರ ನಂತರ ಭಾಷೆಯನ್ನು ಪರಿಣಾಮಕಾರಿಯಾಗಿ ದುಡಿಸಿ ಕೊಂಡವರಲ್ಲಿ ಕಂಬಾರರು ಒಬ್ಬರು.

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿಯೂ, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿಯೂ, ಮೈಸೂರಿನ ಕರ್ನಾಟಕ ನಾಟಕ ರಂಗಾಯಣದ ಸದಸ್ಯರಾಗಿಯೂ, ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ, ದೆಹಲಿಯ ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮ’ ಶಾಲೆಯ ಅಧ್ಯಕ್ಷರಾಗಿ ಹೀಗೆ ಅವರು ವಿವಿಧ ರಂಗಗಳಲ್ಲಿ ಸಮಸ್ತರಾಗಿ ಎಲ್ಲೆಲ್ಲಿಯೂ ಸಂದಿದ್ದಾರೆ.

ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರ ಗಳಾಗಿಸಿದರು. “ಕರಿಮಾಯಿ, ಸಂಗೀತಾ, ಕಾಡುಕುದುರೆ ಸಿಂಗಾರವ್ವ ಮತ್ತು ಅರಮನೆ” ಇವುಗಳಲ್ಲಿ ಪ್ರಮುಖವಾದುವು. ಕಂಬಾರರು ತಮ್ಮ ಚಿತ್ರಗಳಿಗೆ ತಾವೇ ಸಂಗೀತ ನೀಡಿದ್ದಾರೆ. ಕಾಡುಕುದುರೆಯ ಹಿನ್ನೆಲೆ ಸಂಗೀತದ “ಕಾಡು ಕುದುರೆ ಓಡಿಬಂದಿತ್ತಾ..” ಹಾಡಿಗೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರಪತಿಗಳ ಫಲಕ ಕೂಡ ಸಿಕ್ಕಿತು. `ಜೀಕೆ ಮಾಸ್ತರ ಪ್ರಣಯ ಪ್ರಸಂಗ’ ಕಾದಂಬರಿಯನ್ನು ಕಿರುತೆರೆಗೂ ಅಳವಡಿಸಿದ್ದಾರೆ. ಹತ್ತಾರು ಸಾಕ್ಷ್ಯ ಚಿತ್ರಗಳನ್ನೂ ನಿರ್ಮಿಸಿರುವ ಕಂಬಾರರು ಉತ್ತಮ ನಾಟಕಕಾರರು. ಜೊತೆಗೆ ಜಾನಪದ ಶೈಲಿಯ ಹಾಡುಗಳಿಂದ ಜನಪ್ರಿಯರು. ಅವರು ತಾವೇ ಸ್ವತಃ ಹಾಡುಗಾರರೂ ಆಗಿದ್ದಾರೆ.

ಧನ್ಯವಾದಗಳು.












What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಅಯ್ಯಪ್ಪನಿಗೆ ಕಟ್ಟುವ ಇರುಮುಡಿ

ಅಯ್ಯಪ್ಪನಿಗೆ ಕಟ್ಟುವ ಇರುಮುಡಿ ಎಂದರೆ ಏನು?

ಒಳ್ಳೆಯ ಕಾಂತಿ ಬರಲು ಮನೆ ಮದ್ದುಗಳು

ಮುಖದ ಚರ್ಮ ಬೆಳ್ಳಗಾಗಿ, ಒಂದು ಒಳ್ಳೆಯ ಕಾಂತಿ ಬರಲು ಮನೆ ಮದ್ದುಗಳು