in

ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ

ವಿಶ್ವ ಮಹಿಳೆಯರ ದಿನ
ವಿಶ್ವ ಮಹಿಳೆಯರ ದಿನ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.

ಸರಿಸುಮಾರು 45 ವರ್ಷಗಳಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ವಿಶ್ವದಲ್ಲಿ ಅನೇಕ ಮಹಿಳೆಯರು ನಿರಂತರವಾಗಿ ವೈಯಕ್ತಿಕ ಮತ್ತು ವೃತ್ತಿಪರವಾಗಿ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ. ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡಯುತ್ತಿದ್ದಾರೆ. ಈ ದಿನ ಮಹಿಳಾ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ವಿಶೇಷ ದಿನ ಇದಾಗಿದೆ. ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.

ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ
ಕ್ಲಾರಾ ಜೆಟ್‌ಕಿನ್

ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿ ಆಕೆ. ಅದಕ್ಕೇ ಹೇಳುವುದು ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಂದು. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿದ ಆಕೆಯ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಪಾತ್ರಗಳನ್ನು ತುಂಬುವ ಆಕೆಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಿದೆ. ಅದುವೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

1975ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ಮಾರ್ಚ್​ 8 ರಂದು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆಗೆ ತಂದಿತು. ಅದರೆ. 1908ರ ಫೆಬ್ರವರಿಯಲ್ಲಿಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು.

1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕಾದ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು.

ಕ್ಲಾರಾ ಜೆಟ್‌ಕಿನ್ ಈ ಸಮ್ಮೇಳನದಲ್ಲಿ ಮಾರ್ಚ್ 8ನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕೆಂದು ೧೯೧೧ರಲ್ಲಿ ನಿರ್ಣಯ ಮಂಡಿಸಿದರು. ಅಲ್ಲಿ ನೆರೆದಿದ್ದ ವಿವಿಧ ರಾಷ್ಟ್ರಗಳ ಸದಸ್ಯ ಪ್ರತಿನಿಧಿಗಳು ಸರ್ವಾನುಮತದಿಂದ ಸಮ್ಮತಿಸಿದರು. ಈ ಸಮ್ಮೇಳನದಲ್ಲಿ ಫಿನ್ಲೆಂಡ್‌ನಲ್ಲಿ ಆಗಷ್ಟೇ ಚುನಾಯಿತರಾಗಿದ್ದ ಮೂವರು ಮಹಿಳೆಯರಿದ್ದು, ಅವರು ಜೆಟ್‌ಕಿನ್‌ ಸಲಹೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಹೀಗೆ ಅಂತರರಾಷ್ಟ್ರೀಯ ಮಹಿಳಾ ದಿನವೆನ್ನುವುದು ಪ್ರತಿಭಟನೆ ಮತ್ತು ರಾಜಕೀಯ ಕ್ರಿಯಾಶೀಲತೆಯ ದಿನವಾಗಿ ಅಸ್ತಿತ್ವಕ್ಕೆ ಬಂದಿತು.

1911ರಲ್ಲಿ ಮತದಾನದ ಹಕ್ಕನ್ನು ಬೇಡಿಕೆಯಾಗಿಟ್ಟುಕೊಂಡು ಮೊದಲ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಇದಕ್ಕೂ ಮೊದಲು 1903ರಲ್ಲಿ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಹೋರಾಟ ನಡೆಸಿದ್ದ ಮಹಿಳಾ ಕಾರ್ಮಿಕ ಸಂಘಟನೆಗಳು ‘ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್’ ಸ್ಥಾಪಿಸಿ ರಾಜಕೀಯ ಮತ್ತು ಆರ್ಥಿಕ ಕಲ್ಯಾಣವನ್ನು ತಮ್ಮ ಸಂಘಟನೆಯ ಮುಖ್ಯ ಧ್ಯೇಯವನ್ನಾಗಿಸಿಕೊಂಡವು.

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ದುಡಿಯುವ ಮಹಿಳೆಯರು ಅವರ ಹಕ್ಕಿನ ಪರವಾಗಿ ಧ್ವನಿಯೆತ್ತಿದ್ದರು ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ 1909 ರಲ್ಲಿ ಫೆ.28ರಂದು ಮಹಿಳಾ ದಿನವನ್ನಾಗಿ ಘೋಷಿಸಿತು. 

ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ
ಯುರೋಪ್​ನಲ್ಲಿ ಮಹಿಳಾ ದಿನಾಚರಣೆ ಒಂದು ಮಹತ್ವದ ದಿನವಾಗಿದೆ

1917 ರಲ್ಲಿ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ ಮುಷ್ಕರ ನಡೆಸಿದ್ದರು. ಅದಾಗಿ ಕೆಲವು ದಿನಗಳ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು. ಈ ವೇಳೆ ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು ರಾಲಿಗಳನ್ನು ನಡೆಸಿದರು. ಇದೇ ಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು. ಇದರಿಂದ ಯುರೋಪ್​ನಲ್ಲಿ ಮಹಿಳಾ ದಿನಾಚರಣೆ ಒಂದು ಮಹತ್ವದ ದಿನವಾಗಿದೆ.

ಈ ದಿನವನ್ನು ಆಚರಿಸುವ ಹಿಂದಿನ ಉದ್ದೇಶವು ಮಹಿಳೆಯರ ಹಕ್ಕುಗಳನ್ನು ಉತ್ತೇಜಿಸುವುದಾಗಿದೆ. ಅಂತರಾಷ್ಟ್ರೀಯ ಮಹಿಳಾ ದಿನವು ಮಹಿಳಾ ಹಕ್ಕುಗಳ ಚಳುವಳಿಯ ಕೇಂದ್ರಬಿಂದುವಾಗಿದೆ ಎಂದು ಹೇಳಿದರೆ ಅತಿಶಯೋಕ್ತಿಯಲ್ಲ, ಇದು ಲಿಂಗ ಸಮಾನತೆ, ಸಂತಾನೋತ್ಪತ್ತಿ ಹಕ್ಕುಗಳು ಮತ್ತು ಮಹಿಳೆಯರ ವಿರುದ್ಧದ ಹಿಂಸೆ ಮತ್ತು ನಿಂದನೆಯಂತಹ ವಿಷಯಗಳ ಬಗ್ಗೆ ವಿಶ್ವದ ಗಮನ ಸೆಳೆಯುತ್ತದೆ. ಇದಲ್ಲದೆ, ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳೆಯರ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸಾಧನೆಗಳ ಆಚರಣೆಯಾಗಿ ಆಚರಿಸಲಾಗುತ್ತದೆ, ಮಹಿಳೆಯರಿಗೆ ಗೌರವ, ಮೆಚ್ಚುಗೆ ಮತ್ತು ಪ್ರೀತಿಯನ್ನು ತೋರ್ಪಡಿಸುವ ದಿನ ಇದಾಗಿದೆ. ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವು ಒಂದು ಅಥವಾ ಇನ್ನೊಂದು ಥೀಮ್ ಅನ್ನು ಆಧರಿಸಿರುತ್ತದೆ.

2023 ರ ಅಂತರರಾಷ್ಟ್ರೀಯ ಮಹಿಳಾ ದಿನದ ವಿಷಯವು “ಲಿಂಗ ಸಮಾನತೆಗೆ ನಾವಿನ್ಯತೆ ಮತ್ತು ತಂತ್ರಜ್ಞಾನ” ವಾಗಿದೆ. 

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

48 Comments

ತ್ರಿನೇತ್ರ ಗಣೇಶ ದೇವಸ್ಥಾನ

ಇಲ್ಲಿ ಮದುವೆ ಆಮಂತ್ರಣ ಪತ್ರಿಕೆ ಗಣೇಶನಿಗೆ ನೀಡಲಾಗುತ್ತದೆ

ದಿನ ಭವಿಷ್ಯ

ದಿನ ಭವಿಷ್ಯ