in

ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು “ವಿಶ್ವ ಮಾನವ” ದಿನವನ್ನಾಗಿ ಆಚರಿಸುತ್ತೇವೆ

ಕುವೆಂಪು ಜನ್ಮದಿನ
ಕುವೆಂಪು ಜನ್ಮದಿನ

ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ, ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ‘ಶ್ರೀ ರಾಮಾಯಣ ದರ್ಶನಂ’ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ ‘ಕಾನೂರು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ.

ರಾಷ್ಟ್ರಕವಿ ಕುವೆಂಪು ಎಂದು ಪ್ರಸಿದ್ದಿಯಾಗಿರುವ ಕುವೆಂಪುರವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ, ತಾಯಿ ಸೀತಮ್ಮ, ತಂದೆ ವೆಂಕಟಪ್ಪ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ತೀರ್ಥಹಳ್ಳಿ, ಮೈಸೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು ವರಕವಿ ಬೇಂದ್ರೆ ಯವರಿಂದ “ಯುಗದ ಕವಿ” “ಜಗದ ಕವಿ” ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು.

ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುತ್ತೇವೆ
ಕುವೆಂಪು , ಹೇಮಾವತಿ

ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಓದಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು.

ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.

ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.

ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುತ್ತೇವೆ
ಕುವೆಂಪು ಸಂಸಾರ

ಕನ್ನಡ ರಸಋಷಿ, ರಾಷ್ಟ್ರಕವಿ, ಸಾಹಿತ್ಯ ದಿಗ್ಗಜ ಎಂದೇ ಪ್ರಸಿದ್ಧರಾಗಿರುವ ಕುವೆಂಪುರವರು ವಿದ್ಯಾರ್ಥಿ ದೆಸೆಯಲ್ಲಿಯೇ 1928 ರಲ್ಲಿ ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷತೆಯ ಗೌರವ ಇವರಿಗೆ ಸಂದಿತು.

ಕುವೆಂಪು ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದರು. ಅವರು ಕನ್ನಡಕ್ಕೆ ನೀಡಿದ ಕೊಡುಗೆಗಳಿಗಾಗಿ ಕನ್ನಡದ ಸಾಹಿತ್ಯಗಳನ್ನು ರಚಿಸಿದ್ದಕ್ಕಾಗಿ ಅವರಿಗೆ ಅನೇಕ ಮನ್ನಣೆ ಪ್ರಶಸ್ತಿಗಳು ದೊರೆತವು. ಮೈಸೂರಿನಲ್ಲಿ ನಡೆದ ೩೮ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತಾಧ್ಯಕ್ಷರಾದರು.

ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು “ವಿಶ್ವ ಮಾನವ” ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು.

ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

2 Comments

ಚಳಿಗಾಲದಲ್ಲಿ ತುಟಿಗಳು ಒಡೆಯುವುದು

ಚಳಿಗಾಲದಲ್ಲಿ ತುಟಿಗಳು ಒಡೆಯುವುದು, ಕಪ್ಪಾಗುವುದು ಸಾಮಾನ್ಯ ಸಮಸ್ಯೆ

ಶಿವನನ್ನು ಲಿಂಗ ರೂಪದಲ್ಲಿ ಯಾಕೆ ಪೂಜಿಸುತ್ತಾರೆ

ಶಿವನನ್ನು ಲಿಂಗ ರೂಪದಲ್ಲಿ ಯಾಕೆ ಪೂಜಿಸುತ್ತಾರೆ ಮತ್ತು ಕಾರಣ ಏನಿರಬಹುದು?