in

ಜನವರಿ ೩, ಲೇಡಿ ಟೀಚರ್” ಸಾವಿತ್ರಿಬಾಯಿ ಫುಲೆ ಜನ್ಮದಿನ

ಸಾವಿತ್ರಿಬಾಯಿ ಫುಲೆ ಜನ್ಮದಿನ
ಸಾವಿತ್ರಿಬಾಯಿ ಫುಲೆ ಜನ್ಮದಿನ

ಸಾವಿತ್ರಿಬಾಯಿ ಫುಲೆ ಮಹಾರಾಷ್ಟ್ರದಲ್ಲಿ ಜನಿಸಿದ 19 ನೇ ಶತಮಾನದ ಸಮಾಜ ಸುಧಾರಕಿ. ಅವರು ದೇಶದಲ್ಲಿ ಮಹಿಳಾ ಶಿಕ್ಷಣದ ಹರಿಕಾರರಾಗಿದ್ದರು. ದೇಶದ ಮೊದಲ ಮಹಿಳಾ ಶಿಕ್ಷಕಿ ಎಂದು ಗೌರವಿಸಲ್ಪಟ್ಟ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿರಾವ್ ಫುಲೆಯವರ ಪತ್ನಿ.

ಭಾರತದ ಮೊದಲ ಮಹಿಳಾ ಶಿಕ್ಷಕಿ, ಮಹಿಳೆಯರು ಮತ್ತು ಕೆಳವರ್ಗದವರಿಗೆ ಕೆಲಸ ಮಾಡಲು ಹೆಸರುವಾಸಿಯಾದ ಸಮಾಜ ಸುಧಾರಕ. ಅವರು ಪುಣೆ (ಮಹಾರಾಷ್ಟ್ರ) ಸಮಾಜದಲ್ಲಿ ಪ್ರಚಲಿತದಲ್ಲಿರುವ ದಬ್ಬಾಳಿಕೆಯ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದರು. ಆಕೆಯ ಕೊಡುಗೆ ವೈಚಾರಿಕತೆ ಮತ್ತು ಸತ್ಯ, ಸಮಾನತೆ ಮತ್ತು ಮಾನವೀಯತೆಯಂತಹ ಮಾನವ ಕಾರಣಗಳ ಸುತ್ತ ಸುತ್ತುತ್ತದೆ.

ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು.

ಜನವರಿ ೩, ಲೇಡಿ ಟೀಚರ್" ಸಾವಿತ್ರಿಬಾಯಿ ಫುಲೆ ಜನ್ಮದಿನ
ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಮಹಿಳಾ ಶಿಕ್ಷಕಿ, ಆಧುನಿಕ ಸ್ತ್ರೀವಾದಿ ಮತ್ತು ಸಮಾಜ ಸುಧಾರಕಿ. ಶಿಕ್ಷಣ ಮತ್ತು ಸಾಕ್ಷರತೆಯ ಕ್ಷೇತ್ರದಲ್ಲಿ ಮಹಿಳೆಯರ ಉನ್ನತಿಗಾಗಿ ಮಹಿಳಾ ಶಿಕ್ಷಣವನ್ನು ಮುಂದಕ್ಕೆ ಕೊಂಡೊಯ್ಯುವ ಕ್ರಾಂತಿಕಾರಿ ಜ್ವಾಲೆಯನ್ನು ಅವರು ಹೊಂದಿದ್ದರು. ಆಕೆ ತನ್ನ ಪತಿಯೊಂದಿಗೆ ಮಹಿಳೆಯರಿಗೆ ಶಿಕ್ಷಣ ನೀಡುವ ಹೋರಾಟದಲ್ಲಿ ಒಡನಾಡಿಯಾಗಿದ್ದಳು. ಕ್ರಾಂತಿವೀರ ಸಾವಿತ್ರಿಬಾಯಿ ಫುಲೆಯವರು ಬೆಂಕಿ ಹಚ್ಚಿದ ಕಾರಣ ಈ ಪೀಳಿಗೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಅವರ ಜನ್ಮದಿನವು ಮಹತ್ವದ ದಿನವಾಗಿದೆ.

ಸಾವಿತ್ರಿಬಾಯಿ ಫುಲೆ ಜನವರಿ ೩, ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.

ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಬೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಿ ಆದ ಮೊದಲ ಶಿಕ್ಷಕಿಯಾದರು.

ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

ಜನವರಿ ೩, ಲೇಡಿ ಟೀಚರ್" ಸಾವಿತ್ರಿಬಾಯಿ ಫುಲೆ ಜನ್ಮದಿನ
ಸಾವಿತ್ರಿಬಾಯಿ ಫುಲೆ, ಜ್ಯೋತಿಬಾಫುಲೆ

ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು.

 ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.

ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.

ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ. ಇವರು ಒಟ್ಟು 14 ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ.

ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ,‌ ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ – ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.

ಪುಣೆಯು ಪಿತೃಪ್ರಭುತ್ವ ಮತ್ತು ಜಾತಿ ವ್ಯವಸ್ಥೆಯಿಂದ ನಿರೂಪಿಸಲ್ಪಟ್ಟಿದೆ. ಜ್ಯೋತಿರಾವ್ ಫುಲೆಯವರ ಕ್ರಾಂತಿಕಾರಿ ಚಿಂತನೆಯು ಕೆಳವರ್ಗದವರೆಂದು ಕರೆಯಲ್ಪಡುವವರಿಗೆ ಶಿಕ್ಷಣವನ್ನು ನೀಡಿ ಅವರ ಅಂಚಿಗೆ ತಳ್ಳುವಿಕೆಯನ್ನು ಅರಿತುಕೊಳ್ಳಲು ಸಹಾಯ ಮಾಡಿತು, ಇದು ಸಾವಿತ್ರಿಬಾಯಿ ಫುಲೆಯವರಲ್ಲೂ ದೃಢತೆಯ ಭಾವವನ್ನು ಮೂಡಿಸಿತು.

ಜ್ಯೋತಿಬಾ ಅವರ ತತ್ವ್ತ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ತಮ್ಮದಾಗಿಸಿಕೊಳ್ಳುವ ಸಾವಿತ್ರಿಬಾಯಿಯವರು ಜೀವಮಾನವಿಡೀ ಪತಿಯೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತಾರೆ. ಇವರಿಬ್ಬರ ನಡುವೆ ಒಂದು ಮಧುರವಾದ ಬಾಂಧವ್ಯ ಮತ್ತು ವೈಯಕ್ತಿಕ ಭಾವನೆಗಳನ್ನು ಗೌರವಿಸಿಕೊಳ್ಳುವ ಗುಣವಿತ್ತು. ಅವರಿಗೆ ಮಕ್ಕಳಿರದಿದ್ದರು ಸಂತೋಷವಾಗಿದ್ದರು. ಪತಿಯ ಮೇಲೆ ಅಗಾಧ ಪ್ರೀತಿ ಹೊಂದಿದ್ದ ಜ್ಯೋತಿಬಾ ಫುಲೆ ಅವರು ಮಕ್ಕಳಿಗಾಗಿ ಮರುಮದುವೆಯಾಗಲಿಲ್ಲ.

ಫುಲೆ ದಂಪತಿಗಳು ೧೮೭೪ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು, ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ. ೧೮೬೩ರಲ್ಲಿ ಅನಾಥ ಮಕ್ಕಳಿಗಾಗಿ ಶಿಶುಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ.

ಸಾಮಾಜಿಕ ಕ್ರಾಂತಿಕಾರಿ ಕಾರ್ಯಗಳು :

*೧೫೦ ವರ್ಷಗಳ ಹಿಂದೆಯೇ ಸಾವಿತ್ರಿ ಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.

*೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. 

*ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. 

*ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.

*ಸಾವಿತ್ರಿಬಾಯಿ ‘ಸತ್ಯೋಧಕ’ ಸಮಾಜದ ಅಧ್ಯಕ್ಷೆಯಾಗಿದ್ದರು.

* ೧೯ನೇ ಶತಮಾನದ ಇತಿಹಾಸದಲ್ಲಿ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. 

* ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಕರಡಿಗಳ ಗುಣಲಕ್ಷಣಗಳು

ಕರಡಿಗಳ ಗುಣಲಕ್ಷಣಗಳು ಮತ್ತು ವಿವಿಧ ಜಾತಿಯ ಕರಡಿಗಳು

ಸೀಗೆ ಕಾಯಿ ಉಪಯೋಗ

ಸೀಗೆ ಕಾಯಿ ಗುಣಲಕ್ಷಣಗಳು ಮತ್ತು ಕೂದಲಿಗೆ ಸೀಗೆಯ ಉಪಯೋಗ