in

ಅನಂತ ಪದ್ಮನಾಭ ದೇವಸ್ಥಾನದ ಸಸ್ಯಾಹಾರಿ ‘ಬಬಿಯಾ’ ಇಹಲೋಕ ತ್ಯಜಿಸಿದೆ

ಅನಂತ ಪದ್ಮನಾಭ ದೇವಸ್ಥಾನದ ಸಸ್ಯಾಹಾರಿ 'ಬಬಿಯಾ' ಇಹಲೋಕ ತ್ಯಜಿಸಿದೆ
ಅನಂತ ಪದ್ಮನಾಭ ದೇವಸ್ಥಾನದ ಸಸ್ಯಾಹಾರಿ 'ಬಬಿಯಾ' ಇಹಲೋಕ ತ್ಯಜಿಸಿದೆ

ಮಂಗಳೂರು ಗಡಿಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತ ಪದ್ಮನಾಭ ದೇವಸ್ಥಾನದ ‘ಬಬಿಯಾ’ ಹೆಸರಿನ ಮೊಸಳೆ ಇಹಲೋಕ ತ್ಯಜಿಸಿದೆ. ತಿರುವನಂತಪುರಂನಲ್ಲಿರುವ ಅನಂತಪದ್ಮನಾಭ ಸ್ವಾಮಿಯ ಮೂಲ ಕ್ಷೇತ್ರ ಎನ್ನಲಾದ ಕುಂಬಳೆ ಅನಂತ ಪದ್ಮನಾಭ ದೇವಸ್ಥಾನದಲ್ಲಿರುವ ಸಸ್ಯಹಾರಿ ಮೊಸಳೆ ಎಂದೇ ಬಬಿಯಾ ಪ್ರಖ್ಯಾತಿ ಪಡೆದಿತ್ತು. ಬಬಿಯಾ ಕಳೆದ 70 ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿದೆ ಎನ್ನಲಾಗಿದೆ.

ಮಂಗಳೂರಿನಿಂದ ಸುಮಾರು 39 ಕಿ.ಮೀ ದೂರದಲ್ಲಿ ಸಿಗುವ ಕುಂಬ್ಳೆಗೆ ಸಮೀಪ ಬದಿಯಡ್ಕ ಮಾರ್ಗವಾಗಿ ಸುಮಾರು ನಾಲ್ಕು ಕಿಲೋಮೀಟರ್ ಸಾಗಿದಾಗ ಅನಂತಪುರ ದೇವಸ್ಥಾನ ಸಿಗುತ್ತದೆ. ಇದು ವಿಶಾಲವಾದ ಪ್ರದೇಶದಲ್ಲಿ ಕೆರೆ ಮಧ್ಯೆ ಇರುವ ದೇವಸ್ಥಾನ. ಅನಂತಪುರ ತುಳುನಾಡಿನ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು. ಇದನ್ನು ಜನರು ಸರೋವರ ಕ್ಷೇತ್ರ ಅನಂತಪುರ ಎಂದೂ ಕರೆಯುತ್ತಾರೆ. ಇಲ್ಲಿ 5 ಹೆಡೆ ಸರ್ಪದ ಮೇಲೆ ಕುಳಿತ ಅನಂತಪದ್ಮನಾಭ ಸ್ವಾಮಿಯನ್ನು ನೋಡಬಹುದು.

ಅನಂತ ಪದ್ಮನಾಭ ದೇವಸ್ಥಾನದ ಸಸ್ಯಾಹಾರಿ 'ಬಬಿಯಾ' ಇಹಲೋಕ ತ್ಯಜಿಸಿದೆ
ಅನಂತಪುರ ದೇವಸ್ಥಾನ

ಅನಂತಪುರ ದೇವಸ್ಥಾನದ ಮತ್ತೊಂದು ಆಕರ್ಷಣೆ ಎಂದರೆ ಬಬಿಯಾ. ಸಾಮಾನ್ಯವಾಗಿ ಮೊಸಳೆಗಳು ಮಾಂಸಹಾರಿಗಳು. ಆದ್ರೆ ಬಬಿಯಾ ಸಸ್ಯಹಾರಿ ಎನ್ನುವುದು ವಿಶೇಷ. ಹಿಂದೆ ಬ್ರಿಟಿಷರು ಈ ಜಾಗದಲ್ಲಿ ಟೆಂಟ್ ಹಾಕಿದ್ದಾಗ ಕೆರೆಯಲ್ಲಿ ಮೊಸಳೆಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ಬಬಿಯಾ ಎಂದು ಕರೆದಾಗ ಮೊಸಳೆ ಹೊರ ಬಂದಿತ್ತು. ಆಗ ಗುಂಡು ಹಾರಿಸಿ, ಮೊಸಳೆಯನ್ನು ಕೊಂದಿದ್ದರು. ಆ ಮೊಸಳೆ ಕೊಂದ ಬ್ರಿಟಿಷ್ ಅಧಿಕಾರಿ ಸ್ವಲ್ಪ ದಿನಗಳ ನಂತರ ವಿಷ ಹಾವು ಕಚ್ಚಿ ಅಸುನೀಗಿದ ಎಂಬ ಕಥೆಯನ್ನು ಇಲ್ಲಿನ ಜನರ ಬಾಯಲ್ಲಿ ಕೇಳಬಹುದು.

ಇನ್ನು ಇದೆಲ್ಲ ನಡೆದ ಬಳಿಕ ಅಚ್ಚರಿ ಎಂಬಂತೆ ಆ ಕೆರೆಯಲ್ಲಿ ಮತ್ತೊಂದು ಮೊಸಳೆ ಕಾಣಿಸಿಕೊಂಡಿತು. ಅದಕ್ಕೆ ಅಲ್ಲಿಯ ಪೂಜಾರಿ ಬಬಿಯಾ ಎಂಬ ಹೆಸರಿಟ್ಟ. ಆ ಮೊಸಳೆಗೆ ಪ್ರತಿದಿನ ಮಧ್ಯಾಹ್ನ ಮಹಾಪೂಜೆ ಆದ್ಮೇಲೆ ನೈವೇದ್ಯ ಕೊಡುವ ಸಮಯಕ್ಕೆ ಬಬಿಯಾ ಎಂದು ಕರೆಯುತ್ತಾರೆ. ಆಗ ಸುರಂಗದಿಂದ ಹೊರಗೆ ಬಂದು ನೈವೇದ್ಯ ಸ್ವೀಕರಿಸುತ್ತಿತ್ತು ಈ ಮೊಸಳೆ ದೇವರ ಮೊಸಳೆ ಎಂದೇ ಇದು ಪ್ರಖ್ಯಾತಿ ‌ಪಡೆದಿತ್ತು.‌ ಎರಡು ವರ್ಷಗಳ ಹಿಂದೆ ನೀರಿನಿಂದ ಹೊರ ಬಂದು ದೇಗುಲ ಪ್ರವೇಶಿಸಿದ್ದ ಬಬಿಯಾ,‌ ಮೊದಲ ಬಾರಿಗೆ ದೇಗುಲದ ಆವರಣಕ್ಕೆ ಬಂದಿದ್ದು ಭಕ್ತರ ಅಚ್ಚರಿಗೆ ಕಾರಣವಾಗಿತ್ತು.

ಅನಂತ ಪದ್ಮನಾಭ ದೇವಸ್ಥಾನದ ಸಸ್ಯಾಹಾರಿ 'ಬಬಿಯಾ' ಇಹಲೋಕ ತ್ಯಜಿಸಿದೆ
ನೈವೇದ್ಯ ಕೊಡುವುದು

ಈ ಮೊಸಳೆಗೆ ಜನರು ಹರಕೆ ರೂಪದಲ್ಲಿಯೂ ನೈವೇದ್ಯ ಸಮರ್ಪಿಸುವ ಪದ್ಧತಿ ಇಲ್ಲಿದೆ. ಮೊಸಳೆ ಮಾಂಸಹಾರಿಯಾದರೂ, ಈ ಬಬಿಯಾ ಯಾರಿಗೂ ತೊಂದರೆಯೇ ಕೊಡುವುದಿಲ್ಲ. ಕೆರೆಯಲ್ಲಿರುವ ಮೀನುಗಳನ್ನೂ ಈ ಮೊಸಳೆ ತಿಂದಿದ್ದೇ ಇಲ್ಲ. ಅದರೆ ಇದೀಗ ಬಬಿಯಾ ಇಹಲೋಕ ತ್ಯಜಿಸಿದೆ.

ಮೊಸಳೆ ಸುಮಾರು 75 ವರ್ಷಗಳಿಂದ ಇದೇ ಕೊಳದಲ್ಲಿದೆ ಎಂಬ ನಂಬಿಕೆ ಇದೆ. ಬಬಿಯಾದಿಂದ ಇದುವರೆಗೆ ಯಾರೂ ತೊಂದರೆಗೊಳಗಾದ ಉದಾಹರಣೆಯೇ ಇಲ್ಲ. ದೇವರಿಗೆ ಅರ್ಪಿಸಿದ ನೈವೇದ್ಯವನ್ನೇ ತಿಂದು ಬಬಿಯಾ ಜೀವಿಸುತ್ತಿತ್ತು. ಪೂಜೆ ಬಳಿಕ ಅರ್ಚಕರು ಕರೆದಾಗ ಹೊರಬರುತ್ತಿದ್ದ ಬಬಿಯಾ ನೈವೇದ್ಯ ತಿಂದು ಮತ್ತೆ ನೀರಿನೊಳಗೆ ಹೋಗುತ್ತಿತ್ತು. ಪ್ರತಿದಿನ ಎರಡು ಬಾರಿ ಬಬಿಯಾ ನೈವೇದ್ಯ ಸ್ವೀಕರಿಸುತ್ತಿತ್ತು.

ಅನಂತಪುರ ಸರೋವರ ದೇವಾಲಯವನ್ನು 9 ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ಈ ದೇವಾಲಯದ ನಿರ್ಮಾಣದಲ್ಲಿ ಪ್ರಾಚೀನ ವಾಸ್ತುಶಿಲ್ಪದ ಸುಂದರ ನೋಟಗಳನ್ನು ಕಾಣಬಹುದು. ಕೆರೆಯ ಮಧ್ಯದಲ್ಲಿ ದೇವಾಲಯ ನಿರ್ಮಾಣವಾಗಿರುವುದರಿಂದ ಭಾರಿ ಮಳೆಯ ಸಂದರ್ಭದಲ್ಲಿ ನೀರಿನ ಮಟ್ಟ ಹೆಚ್ಚಾಗುವ ಅನುಮಾನ ಸಹಜವಾಗಿ ಮೂಡಬಹುದು. ಆದರೆ ಈ ದೇವಾಲಯವು ಆ ವಿಷಯದಲ್ಲಿಯೂ ಒಂದು ಪವಾಡವಾಗಿದೆ. ಭಾರಿ ಮಳೆಯ ಸಮಯದಲ್ಲಿಯೂ ಈ ದೇವಾಲಯದಲ್ಲಿ ನೀರಿನ ಮಟ್ಟ ಏರುವುದಿಲ್ಲ. ಸರೋವರದ ಬಲಭಾಗದಲ್ಲಿ ಗುಹೆಯೊಂದಕ್ಕೆ ಪ್ರವೇಶದ್ವಾರವಿದೆ ಮತ್ತು ಆ ಗುಹೆಯು ತಿರುವನಂತಪುರದವರೆಗೆ ವಿಸ್ತರಿಸಿದೆ ಎಂದು ನಂಬಲಾಗಿದೆ.ಪದ್ಮನಾಭನ ವಿಗ್ರಹವನ್ನು ಬೆಲ್ಲ, ಜೇನುಮೇಣ, ತೆಂಗಿನ ಎಣ್ಣೆ ಮತ್ತು ಗೋಧಿ ಪುಡಿ ಸೇರಿದಂತೆ 64 ಪದಾರ್ಥಗಳನ್ನು ಸೇರಿಸಿ ತಯಾರಿಸಲಾಗಿದೆ. ದೇವಾಲಯದ ಗೋಡೆಗಳ ಮೇಲಿನ ಚಿತ್ರಗಳು ಸಂಪೂರ್ಣವಾಗಿ ನೈಸರ್ಗಿಕ ಬಣ್ಣಗಳಿಂದ ಚಿತ್ರಿಸಲಾಗಿದೆ. ಈ ಚಿತ್ರಗಳು ಸಾವಿರ ವರ್ಷಗಳಷ್ಟು ಹಳೆಯವು ಎಂದು ಹೇಳಲಾಗುತ್ತದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಸ್ವಾತಿ ತಿರುನಾಳ್ ರಾಮ ವರ್ಮ

ಸ್ವಾತಿ ತಿರುನಾಳ್ ರಾಮ ವರ್ಮ ಇವರಿಂದ ಸಂಗೀತ ಕಲೆ ಇಂದಿಗೂ ಜೀವಂತ ಇದೆ ಅನ್ನಬಹುದು

ಭೂತಾರಾಧನೆ

ಭೂತಾರಾಧನೆಯಲ್ಲಿ ನ್ಯಾಯ ಪದ್ದತಿ