in

ಡಿಸೆಂಬರ್ 30, ನಮ್ಮ ರಾಮಾಚಾರಿ ಅಂದರೆ, ಡಾ. ವಿಷ್ಣುವರ್ಧನ್ ನಮ್ಮನ್ನು ಬಿಟ್ಟುಹೋದ ದಿನ

ವಿಷ್ಣುವರ್ಧನ್ ನಮ್ಮನ್ನು ಬಿಟ್ಟುಹೋದ ದಿನ
ವಿಷ್ಣುವರ್ಧನ್ ನಮ್ಮನ್ನು ಬಿಟ್ಟುಹೋದ ದಿನ

ಡಾ. ವಿಷ್ಣುವರ್ಧನ್  ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು. ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು. ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ.

ಡಾ. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಹೆಚ್.ಎಲ್.ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳ ಮಗನಾಗಿ 18 ಸೆಪ್ಟೆಂಬರ್ 1950 ರಲ್ಲಿ ಜನಿಸಿದ್ದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಪೂರ್ಣಗೊಳಿಸಿ, ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಇವರ ಪೂರ್ವಜರು ಮಂಡ್ಯ ಜಿಲ್ಲೆಯವರು. ೬ ಮಂದಿ ಸಹೋದರ/ಸಹೋದರಿಯರು. 

ಡಿಸೆಂಬರ್ 30, ನಮ್ಮ ರಾಮಾಚಾರಿ ಅಂದರೆ, ಡಾ. ವಿಷ್ಣುವರ್ಧನ್ ನಮ್ಮನ್ನು ಬಿಟ್ಟುಹೋದ ದಿನ
ವಿಷ್ಣುವರ್ಧನ್ ಸಂಸಾರ

ಕನ್ನಡ ಚಿತ್ರರಂಗದ ದಿಗ್ಗಜ ನಟರಲ್ಲಿ  ವಿಷ್ಣುವರ್ಧನ್ ಒಬ್ಬರು. ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಟಿಸಲು ಪ್ರಾರಂಭಿದಾಗ ಇವರಿಗೆ ವಿಷ್ಣುವರ್ಧನ್ ಎಂದು ಕರೆಯಲಾಗಿತ್ತು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು 200 ಕ್ಕು ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.

ನಾಗರಹಾವು’- ಕನ್ನಡ ಸಿನಿಮಾ ಪ್ರೇಮಿಗಳು, ಡಾ. ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಎಂದಿಗೂ ಮರೆಯಲಾರದಂತಹ ಸಿನಿಮಾವಿದು. ಹೌದು, ‘ವಂಶವೃಕ್ಷ’ ಸಿನಿಮಾದ ಮೂಲಕ ವಿಷ್ಣುವರ್ಧನ್ ಅವರು ಚಿತ್ರರಂಗ ಪ್ರವೇಶ ಮಾಡಿದ್ದರೂ ಕೂಡ ಅವರು ಹೀರೋ ಆಗಿದ್ದು ‘ನಾಗರಹಾವು’ ಸಿನಿಮಾದ ಮೂಲಕ. 1972ರ ಡಿಸೆಂಬರ್ 29ರಂದು ‘ನಾಗರಹಾವು’ ಸಿನಿಮಾ ತೆರೆಗೆ ಬಂದಿತ್ತು.  ಆ ಸಿನಿಮಾ ತೆರೆಕಂಡು 50 ವರ್ಷಗಳಾಗಿವೆ.

ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂದು ಜನಪ್ರಿಯರಾಗಿದ್ದರು.

ನಾಗರಹಾವು  ಸಿನಿಮಾದಲ್ಲಿ ವಿಷ್ಣುವರ್ಧನ್‌ ಅವರು ರಾಮಾಚಾರಿ ಎಂಬ ಆ್ಯಂಗ್ರಿ ಯಂಗ್ ಮ್ಯಾನ್ ಪಾತ್ರವನ್ನು ಮಾಡಿದ್ದರು. ಹೀರೋ ಆಗಿ ಮೊದಲ ಸಿನಿಮಾದಲ್ಲಿ ಬಹಳ ರೆಬೆಲ್ ಆದಂತಹ ಪಾತ್ರದ ಮೂಲಕ ವಿಷ್ಣು ಕನ್ನಡಿಗರಿಗೆ ಪರಿಚಯಗೊಂಡರು. ಆ ಚಿತ್ರದಲ್ಲಿನ ಅವರ ಲುಕ್, ವಾಕಿಂಗ್‌ ಸ್ಟೈಲ್, ಆ್ಯಂಗ್ರಿ ಯಂಗ್ ಮ್ಯಾನ್ ರೀತಿಯ ಮ್ಯಾನರಿಸಂ ಕನ್ನಡರಿಗೆ ಬಹುವಾಗಿಯೇ ಇಷ್ಟವಾಯಿತು. ಇಡೀ ಸಿನಿಮಾದ ಚಿತ್ರೀಕರಣ ಚಿತ್ರದುರ್ಗದಲ್ಲಿ ನಡೆದಿತ್ತು. ಇದೇ ಸಿನಿಮಾದ ಜಲೀಲ ಎಂಬ ಪುಟ್ಟ ಖಳ ಪಾತ್ರದ ಮೂಲಕವೇ ನಟ ಅಂಬರೀಷ್ ಕೂಡ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು ವಿಶೇಷ.

ಡಿಸೆಂಬರ್ 30, ನಮ್ಮ ರಾಮಾಚಾರಿ ಅಂದರೆ, ಡಾ. ವಿಷ್ಣುವರ್ಧನ್ ನಮ್ಮನ್ನು ಬಿಟ್ಟುಹೋದ ದಿನ
ವಿಷ್ಣುವರ್ಧನ್‌ ಅವರು ರಾಮಾಚಾರಿ ಸಿನಿಮಾದಲ್ಲಿ

ಶಿವಶರಣ ನಂಬೆಯಕ್ಕ ಎಂಬ ಸಿನೆಮಾದಲ್ಲಿ 1955ರಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು.

ಕನ್ನಡ ಚಿತ್ರರಂಗದಲ್ಲೆ ಅತಿ ಹೆಚ್ಚು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ವಿಷ್ಣುವರ್ಧನ್-ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿ ಅವರಿಗೆ ಸಲ್ಲುತ್ತದೆ.

ಬನ್ನಂಜೆ ಗೋವಿಂದಾಚಾರ್ಯರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ “೩೨೧” ಬಳಸುತ್ತಿದ್ದರು.

ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿದೆ.

ಇವರ ಸ್ಮರಣಾರ್ಥ ಭಾರತ ಸರ್ಕಾರ 2013ರಲ್ಲಿ ಅಂಚೆ ಚೀಟಿ ಹೊರತಂದಿದೆ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಗ್ರೀನ್ ಟೀ

ಗ್ರೀನ್ ಟೀ ಕುಡಿಯುವುದರಿಂದ ಹಲವು ಲಾಭಗಳು

ಗಂಟಲು ನೋವು ಇದ್ದರೆ ಹಲವು ಸುಲಭ ಪರಿಹಾರ

ಗಂಟಲು ನೋವು ಇದ್ದರೆ ಹಲವು ಸುಲಭ ಪರಿಹಾರಗಳು