ಖ್ಯಾತ ಸರ್ಚ್ ಎಂಜಿನ್ ಗೂಗಲ್ ಭಾರತದ ಖ್ಯಾತ ವಿಜ್ಞಾನಿ ಜಗದೀಶ್ ಚಂದ್ರಬೋಸ್ ಅವರ ಜನ್ಮ ದಿನ ನಿಮಿತ್ತ ಗೂಗಲ್-ಡೂಡಲ್ ನಿರ್ಮಿಸಿ ಗೌರವ ಸಲ್ಲಿಸಿದೆ.
ಭಾರತ ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಜಗದೀಶ್ ಚಂದ್ರ ಬೋಸ್ ಒಬ್ಬ ಅಸಮಾನ್ಯ ವ್ಯಕ್ತಿ. ಸರ್ ಜಗದೀಶ್‌ಚಂದ್ರ ಬೋಸ್, ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನೆಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಟ ವಿಜ್ಞಾನಿಗಳಲ್ಲೊಬ್ಬರಾಗಿದ್ದರು.
ಭಾರತದಲ್ಲಿ ಇವರನ್ನು ರೇಡಿಯೋ ವಿಜ್ಞಾನದ ಪಿತಾಮಹಾ ಎಂದರೆ ತಪ್ಪಿಲ್ಲ. ಏಕೆಂದರೆ ರೇಡಿಯೋ ಪ್ರಯೋಗ ವಿಜ್ಞಾನಕ್ಕೆ ಅಡಿಪಾಯ ಹಾಕಿದ್ದು ಇದೇ ಜಗದೀಶ್ ಚಂದ್ರ ಬೋಸ್ ಅವರು. ಬೋಸ್ ಅವರು ರೇಡಿಯೋ ಮತ್ತು ವೈರ್ಲೆಸ್ ಸಂಕೇತಗಳ ಕುರಿತ ಸಂಶೋಧನೆಯಲ್ಲಿ ಅವರು ಗಮನಾರ್ಹ ಪ್ರಗತಿ ಸಾಧಿಸಿದ್ದರು. ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೊಸದಾರಿ ತೋರುವ ಹಲವಾರು ಸಂಶೋಧನೆಗಳನ್ನು ಮಾಡಿದ ಬೋಸ್ ಅವರು, ಸಸ್ಯಗಳು ಪ್ರಚೋದನೆಗೆ ತೋರುವ ಪ್ರತಿಕ್ರಿಯೆಯನ್ನು ಅಳೆಯುವ ಸಾಧನವನ್ನು ತಯಾರುಮಾಡಿ ಪ್ರಾಣಿ ಮತ್ತು ಸಸ್ಯ ಅಂಗಾಂಶಗಳಲ್ಲಿನ ಸಾಮ್ಯತೆಯನ್ನು ವೈಜ್ಞಾನಿಕವಾಗಿ ಸಾಧಿಸಿತೋರಿಸಿದರು. ಅವರ ಈ ಕಾರ್ಯಕ್ಕೆ ಪೇಟೆಂಟ್ ಸಲ್ಲಿಸುವಂತೆ ಹಿತೈಷಿಗಳ ಮಾಡಿದ ಒತ್ತಾಯಿಸಿದ್ದರು.

ಸಂಶೋಧನೆಗಳಿಗೆ ನೆರವಾಗುವಂತಹ ಅನೇಕ ಉಪಕರಣಗಳನ್ನು (ಕ್ರೆಸ್ಕೊಗ್ರಾಫ್ ಹಾಗು ಕೊಹೆರರ್) ತಾವೇ ಸ್ವತಃ ಕಂಡುಹಿಡಿದಿದ್ದರು. ಅಮೇರಿಕದ ಪೇಟೆಂಟ್ ತೆಗೆದುಕೊಂಡವರಲ್ಲಿ ಭಾರತೀಯ ಉಪಖಂಡದ ಮೊದಲಿಗರು. ಇದು ಆದದ್ದು 1904 ರಲ್ಲಿ.
ಬೋಸ್ ಜನಿಸಿದ್ದು ನವೆಂಬರ್ 30, 1858 ರಲ್ಲಿ, ಭಾರತದ ಬಂಗಾಳ ಪ್ರಾಂತ್ಯದಲ್ಲಿರುವ ಮೈಮನಸಿಂಗ್ ಎಂಬ ಈಗಿನ ಬಾಂಗ್ಲಾದೇಶಕ್ಕೆ ಸೇರಿದ ಪ್ರಾಂತ್ಯದಲ್ಲಿ.
ಕಲಕತ್ತೆಯ ಸೇಂಟ್ ಝೇವಿಯರ್ ಶಾಲೆ ಹಾಗೂ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಓದಿ, ಲಂಡನ್ನಿಗೆ ವೈದ್ಯಕೀಯವನ್ನು ಕಲಿಯಲು ತೆರಳಿದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಅವರು ಹೆಚ್ಚು ಕಾಲ ಅಲ್ಲಿ ತಮ್ಮ ಅಧ್ಯಯನವನ್ನು ಮುಂದುವರೆಸಲಾಗಲಿಲ್ಲ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವೀಧರರಾಗಿ ೧೮೮೪ರಲ್ಲಿ ಕಲ್ಕತ್ತೆ ಮರಳಿ ಬಂದು ಭೌತಶಾಸ್ತ್ರದ ಪ್ರಾಧ್ಯಾಪಕರಾಗಿ ಪ್ರೆಸಿಡೆನ್ಸಿ ಕಾಲೇಜನ್ನು ಸೇರಿಕೊಂಡರು. ಅಲ್ಲಿ ಜನಾಂಗಭೇದವಿದ್ದಾಗ್ಯೂ ಮತ್ತು ಸಂಶೋಧನೆಗೆ ಅಗತ್ಯವಾದ ಸಲಕರಣೆಗಳು ಮತ್ತು ಹಣದ ಸಹಾಯ ಇಲ್ಲದೇ ಇದ್ದಾಗ್ಯೂ ಅವರು ತಮ್ಮ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸಿದರು. ರೇಡಿಯೋ ಮತ್ತು ವೈರ್ಲೆಸ್ ಸಂಕೇತಗಳ ಕುರಿತ ಸಂಶೋಧನೆಯಲ್ಲಿ ಅವರು ಗಮನಾರ್ಹ ಪ್ರಗತಿಯನ್ನು ಸಾಧಿಸಿದರು.
ಅವರು ತಮ್ಮ ಸಂಶೋಧನೆಗಳಿಂದ ವಾಣಿಜ್ಯಿಕ ಲಾಭ ಮಾಡಿಕೊಳ್ಳುವುದರ ಬದಲು ತಾವು ಕಂಡುಹಿಡಿದುದನ್ನು ಉಳಿದವರು ಅಭಿವೃದ್ಧಿಪಡಿಸಲಿ ಎಂಬ ಮಹಾನ್ ಮನೋಧರ್ಮದಲ್ಲಿ ಬಹಿರಂಗಪಡಿಸಿದರು. ನಂತರದಲ್ಲಿ, ಅವರು ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೊಸದಾರಿ ತೋರುವ ಹಲವಾರು ಸಂಶೋಧನೆಗಳನ್ನು ಮಾಡಿದರು. ಸಸ್ಯಗಳು ಪ್ರಚೋದನೆಗೆ ತೋರುವ ಪ್ರತಿಕ್ರಿಯೆಯನ್ನು ಅಳೆಯುವ ಸಾಧನವನ್ನು ತಯಾರುಮಾಡಿ ಪ್ರಾಣಿ ಮತ್ತು ಸಸ್ಯ ಅಂಗಾಂಶಗಳಲ್ಲಿನ ಸಾಮ್ಯತೆಯನ್ನು ವೈಜ್ಞಾನಿಕವಾಗಿ ಸಾಧಿಸಿತೋರಿಸಿದರು.

ಹಿತೈಷಿಗಳ ಒತ್ತಡಕ್ಕೆ ಮಣಿದು ತಮ್ಮ ಸಂಶೋಧನೆಗಳಲ್ಲಿ ಒಂದಕ್ಕೆ ಅವರು ಪೇಟೇಂಟ್ ಗಾಗಿ ಅರ್ಜಿ ಸಲ್ಲಿಸಿದರಾದರೂ ಯಾವುದೇ ಬಗೆಯ ಪೇಟೆಂಟ್ ಪಡೆಯುವುದರಲ್ಲಿ ಅವರಿಗೆ ಯಾವುದೇ ಆಸಕ್ತಿ ಇರಲಿಲ್ಲ ಎಂಬುದನ್ನು ವಿಶ್ವವೇ ಬಲ್ಲಂತ ಸಂಗತಿಯಾಗಿದೆ. “ನಾನೇನೂ ಸೃಷ್ಟಿಕರ್ತನಲ್ಲ. ಈ ಜಗದಲ್ಲಿ ಅಂತರ್ಗತವಾಗಿರುವ ಕೆಲವೊಂದು ವಸ್ತುವಿಶೇಷಗಳು ನನ್ನ ಮೂಲಕ ಜಗತ್ತಿಗೆ ಕಾಣಿಸಿಕೊಂಡಿವೆ. ಹಾಗಾಗಿ ಜ್ಞಾನ ಯಾರ ಸ್ವತ್ತೂ ಅಲ್ಲ. ಅದನ್ನು ಎಲ್ಲರೂ ಮುಕ್ತವಾಗಿ ಹಂಚಿಕೊಳ್ಳಬೇಕು” ಎಂಬುದು ಅವರ ಹೃದಯ ವೈಶಾಲ್ಯ ವಿಚಾರಧಾರೆಯಾಗಿತ್ತು.
ಅವರು ತೀರಿಕೊಂಡ ಹಲವಾರು ವರುಷಗಳ ನಂತರ ಅವರು ಆಧುನಿಕ ವಿಜ್ಙಾನಕ್ಕೆ ಸಲ್ಲಿಸಿದ ಅನೇಕ ಕೊಡುಗೆಗಳಿಗಾಗಿ ಅವರನ್ನು ಗುರುತಿಸಲಾಗುತ್ತಿದೆ.
ಬೋಸ್ ಅವರಿಗೆ ರವೀಂದ್ರನಾಥ್ ಠಾಗೂರ್ ಅವರೊಂದಿಗೆ ಆಪ್ತ ಸ್ನೇಹವಿತ್ತು. ಐನ್ ಸ್ಟೀನ್ ಅವರೊಂದಿಗೂ ಸಂಪರ್ಕವಿತ್ತು. ಜಗದೀಶ್ ಚಂದ್ರ ಬೋಸರಲ್ಲಿ ಆಧ್ಯಾತ್ಮಿಕ – ವೈಜ್ಞಾನಿಕ ಚಿಂತನೆಗಳೆರಡೂ ಒಂದಾಗಿ ಮೇಳೈಸಿದ್ದವು ಎಂಬುದು ಅಭಿಮತ.
ಧನ್ಯವಾದಗಳು.
GIPHY App Key not set. Please check settings