in ,

ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ ವಿರಾಟ್

ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ ವಿರಾಟ್
ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ ವಿರಾಟ್

ಟೀಮ್ ಇಂಡಿಯಾದ ರನ್‌ ಮಷೀನ್‌ ವಿರಾಟ್‌ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ ಮೂರನೇ ಹಣಾಹಣಿಯಲ್ಲಿ ಅರ್ಧಶತಕ ಬಾರಿಸುವ ಮೂಲಕ ಬಹುದೊಡ್ಡ ದಾಖಲೆ ಒಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಹಾಲಿ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್‌ ತೆಂಡೂಲ್ಕರ್‌ ಅಗ್ರಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಜನನ : ನವೆಂಬರ್ ೫, ೧೯೮೮ ಡೆಲ್ಲಿಯಲ್ಲಿ. ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ. ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮಾನ್. ಇವರು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು. ಕೊಹ್ಲಿ ೨೦೦೮ರಲ್ಲಿ ಮಲೇಶಿಯಾದಲ್ಲಿ ನಡೆದ ೧೯ ವರ್ಷ ವಯಸ್ಸಿನೊಳಗಿರುವವರ ಕ್ರಿಕೆಟ್ ವಿಶ್ವಕಪ್‍ನಲ್ಲಿ ಭಾರತ ತಂಡದ ನಾಯಕರಾಗಿ ವಿಶ್ವಕಪ್ ಗೆದ್ದರು. ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುತ್ತಾರೆ. ತಮ್ಮ ಮೊದಲ ಏಕದಿನ ಪಂದ್ಯವನ್ನು ೧೮ ಆಗಸ್ಟ್ ೨೦೦೮ರಲ್ಲಿ ಆಡಿದರು. ರಣಜಿ ಟ್ರೋಫಿಯಲ್ಲಿ ಡೆಲ್ಲಿ ಕ್ರಿಕೆಟ್ ತ೦ಡದ ಪರವಾಗಿ ಆಡುತ್ತಾರೆ.

ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ ವಿರಾಟ್
ವಿರಾಟ್‌ ಕೊಹ್ಲಿ, ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಅಲಂಕರಿಸಿದ್ದಾರೆ

ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ, ತಮ್ಮ ವೃತ್ತಿಬದುಕಿನ ಬಹುದೊಡ್ಡ ಮೈಲುಗಲ್ಲೊಂದನ್ನು ಮುಟ್ಟಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯ ಅಂತಿಮ ಹಣಾಹಣಿಯಲ್ಲಿ 63 ರನ್‌ ಸಿಡಿಸಿದ ಕಿಂಗ್‌ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಬ್ಯಾಟರ್‌ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಭಾರತ ತಂಡದ ಮಾಜಿ ನಾಯಕ ಹಾಗೂ ಹಾಲಿ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ದಾಖಲೆ ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿಯಲು ಕಿಂಗ್‌ ಕೊಹ್ಲಿ ಇನ್ನು 10 ಸಾವಿರಕ್ಕೂ ಹೆಚ್ಚು ರನ್‌ ಗಳಿಸಬೇಕಿದೆ.

ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು 187 ರನ್‌ಗಳ ಕಠಿಣ ಸವಾಲನ್ನು ಬೆನ್ನತ್ತುತ್ತು. ಆರಂಭದಲ್ಲೇ ಓಪನರ್‌ಗಳನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾಗಿ ನಿಂತು ಬ್ಯಾಟ್‌ ಬೀಸಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ, 48 ಎಸೆತಗಳಲ್ಲಿ 3 ಫೋರ್‌ ಮತ್ತು 4 ಸಿಕ್ಸರ್‌ಗಳ ಬಲದಿಂದ 63 ರನ್‌ ಸಿಡಿಸಿ ತಂಡದ 6 ವಿಕೆಟ್‌ಗಳ ಗೆಲುವಿಗೆ ಮಹತ್ವದ ಕೊಡುಗೆ ಕೊಟ್ಟರು. ಈ ಸಂದರ್ಭದಲ್ಲಿ ಕೊಹ್ಲಿ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಏಷ್ಯಾ ಕಪ್‌ 2022 ಟೂರ್ನಿಯಲ್ಲಿ 276 ರನ್‌ ಸಿಡಿಸಿ ಟೀಮ್ ಇಂಡಿಯಾ ಪರ ಗರಿಷ್ಠ ರನ್‌ ಸ್ಕೋರರ್ ಎನಿಸಿದ ವಿರಾಟ್‌, ಆಸೀಸ್‌ ವಿರುದ್ಧದ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ವಿಫಲರಾದರೂ ಮೂರನೇ ಹಣಾಹಣಿಯಲ್ಲಿ ಭರ್ಜರಿಯಾಗಿ ಬ್ಯಾಟ್‌ ಬೀಸಿದರು. ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ವೃತ್ತಿಬದುಕಿನ 33ನೇ ಅರ್ಧಶತಕ ಬಾರಿಸುವ ಮೂಲಕ ಟಿ20-ಐನಲ್ಲಿ ಎರಡನೇ ಅತ್ಯಧಿಕ ರನ್‌ ಸ್ಕೋರರ್‌ ಆಗಿಯೂ ಹೊರಹೊಮ್ಮಿದ್ದಾರೆ. ವಿರಾಟ್‌, ಈವರೆಗೆ ಆಡಿದ 99 ಇನಿಂಗ್ಸ್‌ಗಳಿಂದ 3660 ರನ್‌ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹಾಲಿ ನಾಯಕ ರೋಹಿತ್‌ ಶರ್ಮಾ, 131 ಇನಿಂಗ್ಸ್‌ಗಳಿಂದ 3694 ರನ್‌ಗಳನ್ನು ಬಾರಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ರನ್‌ ಗಳಿಸಿದವರ ಪಟ್ಟಿಯಲ್ಲಿ ರಾಹುಲ್‌ ದ್ರಾವಿಡ್‌ ಈಗಲೂ ಕೊಹ್ಲಿಗಿಂತ ಮುಂದಿದ್ದಾರೆ. ದ್ರಾವಿಡ್‌ ಭಾರತ ತಂಡ ಅಲ್ಲದೆ ಏಷ್ಯಾ ತಂಡದ ಪರವೂ ಕೆಲ ಪಂದ್ಯಗಳನ್ನು ಆಡಿ ರನ್‌ ಗಳಿಸಿದ್ದಾರೆ. ದ್ರಾವಿಡ್‌ ಹೆಸರಲ್ಲಿ ಒಟ್ಟು 24,208 ಅಂತಾರಾಷ್ಟ್ರೀಯ ರನ್‌ಗಳಿವೆ. ಈ ದಾಖಲೆ ಮುರಿಯಲು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಕೊಹ್ಲಿಗೆ ಅತ್ಯುತ್ತಮ ಅವಕಾಶವಿದೆ.

ವಿರಾಟ್ ವೈಯಕ್ತಿಕ ಜೀವನ :

ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ ವಿರಾಟ್
ವಿರಾಟ್‌ ಕೊಹ್ಲಿ

ವಿರಾಟ್ ಕೊಹ್ಲಿ ನವೆಂಬರ್ ೫, ೧೯೮೮ರಂದು ದೆಹಲಿಯಲ್ಲಿ ಪ್ರೇಮ್ ಮತ್ತು ಸರೋಜ್ ಕೊಹ್ಲಿ ಎಂಬ ದಂಪತಿಗಳಿಗೆ ಜನಿಸಿದರು. ಕೊಹ್ಲಿಗೆ ವಿಕಾಶ್ ಎಂಬ ಅಣ್ಣ ಮತ್ತು ಭಾವ್ನ ಎಂಬ ಅಕ್ಕ ಇದ್ದಾರೆ. ವಿರಾಟ್ ತಂದೆ ಪ್ರೇಮ್ ವಕೀಲರಾಗಿದ್ದರು ಮತ್ತು ಡಿಸೆಂಬರ್ ೧೮, ೨೦೦೬ ರ೦ದು ಮರಣ ಹೊಂದಿದರು.

೨೧ ಡಿಸೆ೦ಬರ್ ೨೦೧೭ ರ೦ದು ನಟಿ ಅನುಷ್ಕಾ ಶರ್ಮಾರನ್ನು ವಿವಾಹವಾದರು.

ವಿರಾಟ್ ಕೊಹ್ಲಿಯ ಕೆಲವು ಸ್ಪೂರ್ತಿದಾಯಕ ವಿಚಾರಗಳ ಸೂಚಿ :

*ಯಾವಾಗಲೂ ಆತ್ಮ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಯಶಸ್ಸನ್ನು ಗಳಿಸಬಹುದು.

*ಸ್ವಾರ್ಥಕ್ಕಾಗಿ ನನ್ನ ಬಗ್ಗೆ ನಾನು ಎಂದಿಗೂ ಯೋಚಿಸುವುದಿಲ್ಲ, ಯಾವಾಗಲೂ ತಂಡಕ್ಕಾಗಿ ಆಡುತ್ತೇನೆ.

*ನಿಮ್ಮಲ್ಲಿ ಪ್ರತಿಭೆ ಇದೆಯೋ ಇಲ್ಲವೋ, ನೀವು ಕಷ್ಟಪಟ್ಟು ಕೆಲಸ ಮಾಡಬೇಕು. ಕೇವಲ ಪ್ರತಿಭಾವಂತರು ಏನನ್ನೂ ಮಾಡುವುದಿಲ್ಲ.

ಪ್ರಶಸ್ತಿಗಳು :
೨೦೧೭ರಲ್ಲಿ ಪದ್ಮಶ್ರೀ ಪ್ರಶಸ್ತಿ.
೨೦೧೮ ರಲ್ಲಿ ಖೇಲ್ ರತ್ನ ಪ್ರಶಸ್ತಿ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

45 Comments

ಶ್ರೀಕಾಳಹಸ್ತೀಶ್ವರ ದೇವಾಲಯ

ಪ್ರಸಿದ್ಧ ಶಿವದೇವಾಲಯಗಳಲ್ಲಿ ಒಂದು ಶ್ರೀಕಾಳಹಸ್ತೀಶ್ವರ ದೇವಾಲಯ

ಮೊಸಳೆ ಗುಣಲಕ್ಷಣ

ಸಮುದ್ರವಾಸಿ ಮೊಸಳೆ ಗುಣಲಕ್ಷಣ